Karnataka Rains: ರಾಜ್ಯದಾದ್ಯಂತ ಅಬ್ಬರದ ಮಳೆ: ಈ ಜಿಲ್ಲೆಗಳಲ್ಲಿ ವರುಣಾರ್ಭಟ

ಬೆಂಗಳೂರು, ಜೂನ್‌ 18: ಕರುನಾಡಿನಲ್ಲಿ ವರುಣಾರ್ಭಟ ಜೋರಾಗಿದೆ. ಕಳೆದ 15 ದಿನಗಳಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ಇಂದು(ಜೂನ್‌ 18, ಬುಧವಾರ) ಬೆಳ್ಳಂಬೆಳಗ್ಗೆ ಕರಾವಳಿ ಜಿಲ್ಲೆಗಳಲ್ಲಿ ವರುಣ ಆರ್ಭಟಿಸುತ್ತಿದೆ. ಮಳೆ ಅಬ್ಬರದಿಂದ ನದಿಗಳು ಅಪಾಯ ಮಟ್ಟ ಮೀರಿ ಹರಿಯುತ್ತಿದೆ. ಮಂಗಳೂರು ನಗರದ ಹಲವು ಪ್ರದೇಶ ಪ್ರವಾಹಕ್ಕೆ ತುರ್ತಾಗಿದೆ. ರಾಜ್ಯದ ವಿವಿಧ ಭಾಗಗಳಲ್ಲಿ ಮಳೆಯಾಗುತ್ತಿದ್ದು, ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ.

ಕರ್ನಾಟಕದ ಬಹುತೇಕ ಕಡೆ ಮುಂಗಾರು ಅಬ್ಬರ ಜೋರಾಗಿದ್ದು, ಇಂದಿನಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಪ್ರದೇಶಗಳನ್ನು ಹೊರತುಪಡಿಸಿ ಉಳಿದೆಡೆ ಸಾಧಾರಣ ಮಳೆ ಯಾಗುವ ಸಾಧ್ಯತೆ ಇದೆ. ಅಲ್ಲದೇ ದಕ್ಷಿಣ ಕನ್ನಡ, ಉಡುಪಿ ಹಾಗೂ ಕೊಡಗು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಕೆಲ ಭಾಗಗಳಲ್ಲಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನ ನೀಡಿದೆ. ಮುಂದಿನ 7 ದಿನಗಳ ಕಾಲ ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಜೋರಾದ ಗಾಳಿಯೊಂದಿಗೆ ಭಾರಿ ಮಳೆಯಾಗಲಿದೆ.

Karnataka Rain Widespread rainfall likely over coastal Karnataka till June 24

ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇನ್ನುಳಿದ ದಿನಗಳಲ್ಲಿ ಮಳೆ ಕಡಿಮೆ ಇರುವ ಸಾಧ್ಯತೆಯಿದೆ. ಕರ್ನಾಟಕದಾದ್ಯಂತ ಜೂನ್ 24ರವರೆಗೂ ಮಳೆಯ ಅಬ್ಬರ ಹೆಚ್ಚಿರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಬೆಳಗಾವಿ, ಹಾಸನ, ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ವಿಜಯನಗರ, ತುಮಕೂರು, ರಾಮನಗರ, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್ನಲ್ಲಿ ಸಾಧಾರಣ ಮಳೆಯಾಗಲಿದೆ. ಇನ್ನೂ ಭಾಗಮಂಡಲ, ಗೇರುಸೊಪ್ಪ, ಆಗುಂಬೆ, ಸಿದ್ದಾಪುರದಲ್ಲಿ ಅತಿ ಹೆಚ್ಚು ಮಳೆಯಾಗಿದೆ. ಸುಳ್ಯ, ಕಾರ್ಕಳ, ಕೋಟಾ, ಧರ್ಮಸ್ಥಳ, ಬೆಳ್ತಂಗಡಿ, ಸಿದ್ದಾಪುರ, ಉಪ್ಪಿನಂಗಡಿ, ಕುಂದಾಪುರ, ಹೊನ್ನಾವರ, ಕ್ಯಾಸಲ್ರಾಕ್, ಉಡುಪಿ, ಶೃಂಗೇರಿ, ಮಂಗಳೂರು, ಕುಮಟಾ, ಸೋಮವಾರಪೇಟೆಯಲ್ಲಿ ಮಳೆಯಾಗಿದೆ. ಕಾರವಾರ, ಕಳಸ, ಕೊಪ್ಪ, ಎನ್ಆರ್ ಪುರ, ಕೋಣನೂರು, ಮುಂಡಗೋಡು, ಕಿರವತ್ತಿ, ಹಾರಂಗಿ, ಅರಕಲಗೂಡು, ಬೇಲೂರು, ಅಜ್ಜಂಪುರ, ಹಾವೇರಿಯಲ್ಲಿ ಮಳೆಯಾಗಿದೆ.

ಐಎಂಡಿ ಮಾಹಿತಿ ಪ್ರಕಾರ, ಮುಂದಿನ ನಾಲ್ಕು ದಿನಗಳವರೆಗೆ ಕರ್ನಾಟಕದಾದ್ಯಂತ ಮಳೆ ಮತ್ತು ಬಿರುಗಾಳಿ ಮುಂದುವರಿಯುವ ಮುನ್ಸೂಚನೆಯನ್ನು ನೀಡಿದೆ. ಕರಾವಳಿ ಹಾಗೂ ಮಲೆನಾಡ ಪ್ರದೇಶದ ಕೆಲವು ಭಾಗಗಳಿಗೆ ರೆಡ್​ ಅಲರ್ಟ್​ ನೀಡಲಾಗಿದೆ. ಬೆಂಗಳೂರು ನಗರ ಸೇರಿದಂತೆ ಇತರ ಪ್ರದೇಶಗಳಿಗೆ ಆರೆಂಜ್ ಹಾಗೂ ಯೆಲ್ಲೋ ಅಲರ್ಟ್​ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗದಲ್ಲಿ ಅತಿ ಹೆಚ್ಚು ಮಳೆಯಾಗುವ ಸೂಚನೆಯಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ.

ಇನ್ನೂ ಕರ್ನಾಟಕದ ಕೆಲವು ಭಾಗಗಳಲ್ಲಿ ಗಾಳಿಯ ವೇಗ ಗಂಟೆಗೆ 50 ಕಿ.ಮೀ.ವರೆಗೆ ತಲುಪುವ ನಿರೀಕ್ಷೆಯಿದೆ. ಉತ್ತರ ಕರ್ನಾಟಕ ಭಾಗದ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಚಾಮರಾಜನಗರ, ದಾವಣಗೆರೆ, ಹಾಸನ ಮತ್ತು ಮೈಸೂರಿನಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ನೀಡಲಾಗಿದೆ. ಇತ್ತ ಮಂಡ್ಯ, ಕೊಪ್ಪಳ, ಕಲಬುರಗಿ ಮತ್ತು ಬೀದರ್ ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+