Karnataka rain: ಏಪ್ರಿಲ್ 23ರಿಂದ ಮೂರು ದಿನಗಳ ಕಾಲ ರಾಜ್ಯದ ಹಲವೆಡೆ ಮಿಂಚು, ಗುಡುಗು ಸಹಿತ ಮಳೆ ಮುನ್ಸೂಚನೆ, ಇಲ್ಲಿದೆ ವಿವರ
ಕರ್ನಾಟಕ, ಏಪ್ರಿಲ್, 23: ಕರ್ನಾಟಕದಲ್ಲಿ ಬಿಸಿಲಿನ ತಾಪಮಾನ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಮತ್ತೊಂದೆಡೆ ಹಲವೆಡೆ ಮಳೆರಾಯ ಅಬ್ಬರಿಸಿ ಬೊಬ್ಬೆರೆಯುತ್ತಿದ್ದಾನೆ. ಹಾಗೆಯೆ ಇಂದಿನಿಂದ (ಏಪ್ರಿಲ್ 23) ಮೂರು ದಿನಗಳ ಕಾಲ ರಾಜ್ಯಾದ್ಯಂತ ಭಾರಿ ಮಳೆ ಆಗುವ ಸಾಧ್ಯೆತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದಲ್ಲಿ ಶನಿವಾರ (ಏಪ್ರಿಲ್ 22) ಸಂಜೆ ಕೂಡ ಹಲವೆಡೆ ಮಳೆರಾಯ ತಂಪೆರೆದಿದ್ದ. ಬಿಸಿಲಿನ ಬೇಗೆಯಿಂದ ಬೆಂದಿದ್ದ ರಾಜ್ಯದ ಹಲವೆಡೆ ಮಳೆರಾಯ ತಂಪೆರೆದಿದ್ದ. ಇದೆ ರೀತಿಯಲ್ಲಿ ಇನ್ನೂ ಮೂರು ದಿನ ಮಳೆ ಮುಂದುವರೆಯಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ದಕ್ಷಿಣ ಹಾಗೂ ಉತ್ತರ ಒಳನಾಡು, ಕರಾವಳಿಯಲ್ಲಿ ಮಳೆ ಆಗಲಿದೆ ಎನ್ನುವ ಮುನ್ಸೂಚನೆ ನೀಡಿದೆ.

ದಕ್ಷಿಣ ಒಳನಾಡಿನ 15 ಜಿಲ್ಲೆಗಳಲ್ಲಿ 3 ದಿನ ಮಳೆ ಆಗುವ ಸಾಧ್ಯತೆಯಿದೆ. ಮತ್ತು ಉತ್ತರ ಒಳನಾಡಿನ 8 ಜಿಲ್ಲೆಗಳಲ್ಲಿ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಮುನ್ಸೂಚನೆ ನೀಡಿದ್ದಾರೆ. ತಮಿಳುನಾಡಿನಲ್ಲಿ ಟ್ರಫ್ ಉಂಟಾಗಿರುವ ಹಿನ್ನೆಲೆ ರಾಜ್ಯದ ಹಲವೆಡೆ ಶನಿವಾರ (ಏಪ್ರಿಲ್ 22) ಮಳೆಯಾಗಿದೆ.
ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ ಮತ್ತೆ ಮುಂದಿನ ಮೂರು ದಿನಗಳ ಕಾಲ ಮಳೆ ಆಗುವ ಸಾಧ್ಯತೆಯಿದ್ದು, ಗುಡುಗು, ಮಿಂಚು ಸಹಿತ ಮಳೆ ಆಗಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಚಿಕ್ಕಮಗಳೂರು, ಕೋಲಾರ, ಬಳ್ಳಾರಿ, ಕೊಡಗು, ಹಾಸನ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಆಗಲಿದೆ.
ಏಪ್ರಿಲ್ 21, 22 ಮತ್ತು 25ರಂದು ಬೀದರ್, ಕಲಬುರ್ಗಿ ಜಿಲ್ಲೆಗಳ ವ್ಯಾಪ್ತಿಯಲ್ಲಿ ಮಳೆ ಆಗಲಿದೆ. ಹಾಗೆಯೆ ಏಪ್ರಿಲ್ 23ರಿಂದ 25ರವರೆಗೆ ಕೊಪ್ಪಳ ಮತ್ತು ಯಾದಗಿರಿ ಜಿಲ್ಲೆಯಲ್ಲಿ ಮಳೆ ಆಗುವ ಸಾಧ್ಯತೆಯಿದೆ ಎನ್ನುವ ಸೂಚನೆ ನೀಡಿದೆ.
ರಾಜ್ಯದ ಹಲೆವೆಡೆ ಸಾಧಾರಣ ಮಳೆ ಮುನ್ಸೂಚನೆ
ರಾಜ್ಯದ ವಿವಿಧೆಡೆ ಗುಡುಗು, ಮಿಂಚು ಸಹಿತ ಸಾಧಾರಣ ಮಳೆ ಆಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕಳೆದ ಹಲವು ದಿನಗಳಿಂದ ಬಿಸಿಲಿನ ಬೇಗೆಯಿಂದ ತತ್ತರಿಸಿದ್ದ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಈಗಾಗಲೇ ಮಳೆ ಆಗಿದೆ.

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಗುಡುಗು, ಮಿಂಚು ಸಹಿತ ಸಾಧಾರಣ ಮಳೆ ಆಗಲಿದೆ. ಗರಿಷ್ಠ ಉಷ್ಣಾಂಶವು ಕರಾವಳಿಯ ಕೆಲವು ಕಡೆಗಳಲ್ಲಿ ವಾಡಿಕೆಗಿಂತ 2ರಿಂದ 3 ಡಿಗ್ರಿ ಹಚ್ಚಾಗಿರಲಿದೆ. ಇನ್ನು ಬಾಗಲಕೋಟೆ, ಬೆಳಗಾವಿ, ಬೀದರ್‌ನಲ್ಲಿ ಗುಡುಗು, ಮಿಂಚು ಸಹಿತ ಹಗುರ ಮಳೆ ಆಗಲಿದೆ.
ಧಾರವಾಡ, ಹಾವೇರಿಯಲ್ಲಿ ಸಾಧಾರಣ ಮಳೆ ಆಗಲಿದೆ. ಗದಗ, ಕೊಪ್ಪಳ, ವಿಜಯಪುರದಲ್ಲಿ ಒಣಹವೆ ಇರಲಿದೆ. ಕಲಬುರಗಿ, ರಾಯಚೂರು, ಯಾದಗಿರಿಗಳಲ್ಲಿ ಹಗುರ/ ಸಾಧಾರಣ ಮಳೆ ಆಗಲಿದೆ. ವಿಜಯಪುರದಲ್ಲಿ ಒಣಹವೆಯ ಮುನ್ಸೂಚನೆಯನ್ನು ನೀಡಲಾಗಿದೆ. ಉತ್ತರ ಒಳನಾಡಿನ ಅಲ್ಲಲ್ಲಿ ಏಪ್ರಿಲ್ 25ರವರೆಗೆ ಮಿಂಚು ಸಹಿತ ಗುಡುಗಿನಿಂದ ಕೂಡಿದ ಮಳೆ ಆಗುವ ಸಾಧ್ಯತೆ ಇದೆ. ಇಂದು ಹಲವೆಡೆ ಸಾಮಾನ್ಯಕ್ಕಿಂತ ಉಷ್ಣಾಂಶವು 2 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ.
ಅಲ್ಲದೆ ಬಳ್ಳಾರಿಯಲ್ಲಿ ಗುಡುಗು ಮಿಂಚು ಸಹಿತ ಹಗುರ ಸಾಧಾರಣ ಮಳೆ ಇರಲಿದೆ. ಬೆಂಗಳೂರು, ಗ್ರಾಮಾಂತರ, ಬೆಂಗಳೂರು ನಗರದಲ್ಲಿ ಸಾಮಾನ್ಯ ಮಳೆ, ಚಾಮರಾಜನಗರದಲ್ಲಿ ಹಗುರ ಸಾಧಾರಣ ಮಳೆ ಸಾಧ್ಯತೆಯಿದೆ. ಚಿಕ್ಕಬಳ್ಳಾಪುರ, ಚಿಕ್ಕಮಗಳೂರಿನಲ್ಲಿ ಗುಡುಗು ಮಿಂಚು ಸಹಿತ ಸಾಧಾರಣ ಮಳೆಯಾಗಲಿದೆ. ಚಿತ್ರದುರ್ಗ, ದಾವಣಗೆರೆಯಲ್ಲಿ ಒಣಹವೆ, ಹಾಸನದಲ್ಲಿ ಸಾಧಾರಣ ಮಳೆ ಆಗಲಿದೆ ಎನ್ನುವ ಮುನ್ಸೂಚನೆ ನೀಡಿದೆ.
ಕೊಡಗು, ಕೋಲಾರ, ಮಂಡ್ಯ, ರಾಮನಗರ, ಮೈಸೂರಿನಲ್ಲಿ ಗುಡುಗು, ಮಿಂಚು ಸಹಿತ ಸಾಧಾರಣ ಮಳೆ ಆಗಲಿದೆ. ಶಿವಮೊಗ್ಗ, ತುಮಕೂರಿನಲ್ಲಿ ಒಣಹವೆ ಇರಲಿದೆ. ವಿಜಯನಗರದಲ್ಲಿ ಸಧಾರಣ ಮಳೆ ಆಗಲಿದೆ. ಹಾಗೆಯೆ ಏಪ್ರಿಲ್ 25ರವರೆಗೆ ದಕ್ಷಿಣ ಒಳನಾಡಿನ ಒಂದೆರಡು ಕಡೆ ಮಿಂಚು ಸಹಿತ ಗುಡುಗಿನಿಂದ ಕೂಡಿದ ಮಳೆ ಆಗುವ ಸಾಧ್ಯತೆ ಇದೆ. ಕೆಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ ಉಷ್ಣಾಂಶವು 2 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆಯಿದೆ.












Click it and Unblock the Notifications