ಕರ್ನಾಟಕದಲ್ಲಿ ಮಳೆ ಕೊರತೆ, ಬರಪೀಡಿತ ತಾಲ್ಲೂಕುಗಳ ಸಂಪೂರ್ಣ ಪಟ್ಟಿ ಇಲ್ಲಿದೆ

ಬೆಂಗಳೂರು, ಆಗಸ್ಟ್‌ 28: ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಈ ಬಾರಿ ರಾಜ್ಯದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದೆ. ಕರ್ನಾಟಕದಲ್ಲಿ ಜೂನ್ 1ರಿಂದ ಆಗಸ್ಟ್ 26ರವರೆಗಿನ ಅವಧಿಯಲ್ಲಿ ವಾಡಿಕೆಗಿಂತ ಶೇಕಡ 30ರಷ್ಟು ಮಳೆ ಕೊರತೆಯಾಗಿದೆ ಎಂದು ಡಿಸಿಎಂ ಡಾ.ಜಿ.ಪರಮೇಶ್ವರ್ ಅವರು ಮಾಹಿತಿ ನೀಡಿದ್ದಾರೆ. ಹಾಗಾದ್ರೆ ಈ ಕುರಿತ ಸಂಪೂರ್ಣ ವಿವರವನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಅಭಾವ ಎದುರಾಗಿದೆ. ಈ ಕುರಿತು ಮಾಹಿತಿ ನೀಡಿರುವ ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಅವರು, ಒಟ್ಟು 190 ತಾಲೂಕುಗಳಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿದ್ದು, ಮುಂಬರುವ ದಿನಗಳಲ್ಲಿ ಬರಪೀಡಿತ ತಾಲೂಕುಗಳ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ತಿಳಿಸಿದ್ದಾರೆ.

Karnataka Rainfall Deficit 134 Taluks Declared Drought-Hit in State Know Complete details

ತೀವ್ರ ಮಳೆ ಕೊರತೆ

ಮಾಹಿತಿ ಪ್ರಕಾರ, 101 ತಾಲೂಕುಗಳು ಬರ ಪೀಡಿತ ಎಂದು ಗುರುತಿಸಲ್ಪಟ್ಟಿವೆ. ಕೆಲವು ತಾಲೂಕುಗಳಲ್ಲಿ ಮಳೆಯಾಗಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಬೆಳೆ ಬೆಳೆಯಲು ಸಾಧ್ಯವಾಗದೇ ಇರುವ ಕಾರಣ, ಹಂತ-ಹಂತವಾಗಿ ಬರಪೀಡಿತ ತಾಲೂಕುಗಳನ್ನು ಘೋಷಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಬರಪೀಡಿತ ತಾಲೂಕುಗಳ ವಿವರ

ರಾಜ್ಯದ 89 ತಾಲೂಕುಗಳನ್ನು ತೀವ್ರ ಬರಪೀಡಿತ ಹಾಗೂ 12 ತಾಲೂಕುಗಳನ್ನು ಸಾಧಾರಣ ಬರಪೀಡಿತ ಎಂದು ವಿಂಗಡಣೆ ಮಾಡಲಾಗಿದೆ. ಹಾಗಾದ್ರೆ ಅವುಗಳು ಯಾವುವು ಎನ್ನುವ ಪ್ರಶ್ನೆಗೆ ಉತ್ತರವನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ಬರಪೀಡಿತ ತಾಲೂಕುಗಳು

* ಬೆಂಗಳೂರು ನಗರ: ಆನೇಕಲ್, ಬೆಂಗಳೂರು ಉತ್ತರ, ಬೆಂಗಳೂರು ಪೂರ್ವ, ಯಲಹಂಕ

* ಬೆಂಗಳೂರು ದಕ್ಷಿಣ: ಮಾಗಡಿ, ರಾಮನಗರ

* ಬೆಂಗಳೂರು ಗ್ರಾಮಾಂತರ: ಹೊಸಕೋಟೆ, ನೆಲಮಂಗಲ, ದೇವನಹಳ್ಳಿ

* ಕೋಲಾರ: ಬಂಗಾರಪೇಟೆ, ಕೋಲಾರ, ಮಾಲೂರು, ಮುಳಬಾಗಿಲು, ಶ್ರೀನಿವಾಸಪುರ, ಕೆ.ಜಿ.ಎಫ್

* ಚಿಕ್ಕಬಳ್ಳಾಪುರ: ಬಾಗೇಪಲ್ಲಿ, ಚಿಕ್ಕಬಳ್ಳಾಪುರ, ಚಿಂತಾಮಣಿ, ಗೌರಿಬಿದನೂರು, ಗುಡಿಬಂಡೆ, ಶಿಡ್ಲಘಟ್ಟ, ಚೇಳೂರು, ಮಂಚೇನಹಳ್ಳಿ

* ತುಮಕೂರು: ಚಿಕ್ಕನಾಯಕನಹಳ್ಳಿ, ಗುಬ್ಬಿ, ಕೊರಟಗೆರೆ, ಕುಣಿಗಲ್, ಮಧುಗಿರಿ, ಪಾವಗಡ, ಶಿರಾ, ತುಮಕೂರು, ತುರುವೇಕೆರೆ

* ಚಿತ್ರದುರ್ಗ: ಚಳ್ಳಕೆರೆ, ಹಿರಿಯೂರು, ಹೊಸದುರ್ಗ

* ದಾವಣಗೆರೆ: ಚನ್ನಗಿರಿ, ಹೊನ್ನಾಳಿ, ನ್ಯಾಮತಿ, ದಾವಣಗೆರೆ

* ಚಾಮರಾಜನಗರ: ಚಾಮರಾಜನಗರ, ಗುಂಡ್ಲುಪೇಟೆ, ಕೊಳ್ಳೇಗಾಲ, ಯಳಂದೂರು, ಹನೂರು

* ಮೈಸೂರು: ಹೆಗ್ಗಡದೇವನಕೋಟೆ (ಎಚ್.ಡಿ.ಕೋಟೆ), ಹುಣಸೂರು, ಕೃಷ್ಣರಾಜನಗರ (ಕೆ.ಆರ್.ನಗರ), ಮೈಸೂರು, ನಂಜನಗೂಡು, ಟಿ.ನರಸೀಪುರ, ಸರಗೂರು, ಸಾಲಿಗ್ರಾಮ

* ಮಂಡ್ಯ: ಕೃಷ್ಣರಾಜಪೇಟೆ (ಕೆ.ಆರ್.ಪೇಟೆ), ಮಳವಳ್ಳಿ, ಮಂಡ್ಯ, ನಾಗಮಂಗಲ, ಶ್ರೀರಂಗಪಟ್ಟಣ, ಮದ್ದೂರು, ಪಾಂಡವಪುರ

* ಬಳ್ಳಾರಿ: ಬಳ್ಳಾರಿ, ಸಂಡೂರು, ಕುರುಗೋಡು, ಕಂಪ್ಲಿ

* ಕೊಪ್ಪಳ: ಗಂಗಾವತಿ, ಕುಕನೂರು, ಕನಕಗಿರಿ

* ರಾಯಚೂರು: ದೇವದುರ್ಗ, ಮಾಸ್ಕಿ, ಅರಕೇರಾ, ಲಿಂಗಸೂಗೂರು, ರಾಯಚೂರು

* ಬೀದರ್: ಬೀದರ್, ಬಸವಕಲ್ಯಾಣ, ಹುಮ್ನಾಬಾದ್, ಚಿಟಗುಪ್ಪ

* ಬಾಗಲಕೋಟೆ: ಬಾಗಲಕೋಟೆ, ಬೀಳಗಿ, ಜಮಖಂಡಿ, ಗುಳೇದಗುಡ್ಡ, ಇಲಕಲ್

* ವಿಜಯಪುರ: ವಿಜಯಪುರ, ನಿಡಗುಂದಿ, ಕೊಲ್ಹಾರ

* ಗದಗ: ಗಜೇಂದ್ರಗಡ

* ಹಾಸನ: ಅರಕಲಗೂಡು, ಅರಸೀಕೆರೆ, ಚನ್ನರಾಯಪಟ್ಟಣ, ಹಾಸನ, ಹೊಳೆನರಸೀಪುರ

* ಚಿಕ್ಕಮಗಳೂರು: ಅಜ್ಜಂಪುರ, ಕೊಪ್ಪ, ನರಸಿಂಹರಾಜಪುರ, ತರೀಕೆರೆ

* ಯಾದಗಿರಿ: ಶಹಾಪುರ

* ವಿಜಯನಗರ: ಹೊಸಪೇಟೆ, ಹಡಗಲಿ, ಹಗರಿಬೊಮ್ಮನಹಳ್ಳಿ, ಹರಪನಹಳ್ಳಿ

* ಕೊಡಗು: ಸೋಮವಾರಪೇಟೆ

* ಉತ್ತರ ಕನ್ನಡ: ಮುಂಡಗೋಡು, ಯಲ್ಲಾಪುರ

ಬಿತ್ತನೆ ಪ್ರಮಾಣ ಕಡಿಮೆ

ರಾಜ್ಯದಲ್ಲಿ ಆಗಸ್ಟ್ 21ರ ವೇಳೆಗೆ 84.10 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಆಗಬೇಕಿತ್ತು. ಆದರೆ, ಕೇವಲ 60 ಲಕ್ಷ ಹೆಕ್ಟೇರ್ (ಶೇ. 71) ಪ್ರದೇಶದಲ್ಲಿ ಮಾತ್ರ ಬಿತ್ತನೆಯಾಗಿದೆ. ಒಟ್ಟು 240 ತಾಲೂಕುಗಳ ಪೈಕಿ 104 ತಾಲೂಕುಗಳಲ್ಲಿ ಶೇಕಡ 75ಕ್ಕಿಂತ ಕಡಿಮೆ ಬಿತ್ತನೆಯಾಗಿದ್ದರೆ, 42 ತಾಲೂಕುಗಳಲ್ಲಿ ಶೇಕಡ 25ಕ್ಕಿಂತಲೂ ಕಡಿಮೆ ಬಿತ್ತನೆಯಾಗಿದೆ.

ಹೊಲಗಳಲ್ಲಿ ಬೆಳೆದ ಮಳೆ ಆಧಾರಿತ ಬೆಳೆಗಳು ಮಳೆ ಕೊರತೆಯಿಂದ ಒಣಗುತ್ತಿದ್ದು, ಕಂದಾಯ ಇಲಾಖೆಯ ಪ್ರಾಥಮಿಕ ವರದಿಯಂತೆ ಸುಮಾರು 151 ಲಕ್ಷ ಟನ್‌ಗಳಷ್ಟು ಮೇವಿನ ಅಭಾವ ಸೃಷ್ಟಿಯಾಗುವ ಭೀತಿಯಿದೆ. ಇನ್ನೂ 'ಫಸಲ್ ಬಿಮಾ ಯೋಜನೆ'ಯಡಿ ಈ ಬಾರಿ ದಾಖಲೆ ಪ್ರಮಾಣದ ರೈತರು ನೋಂದಣಿ ಮಾಡಿಸಿಕೊಂಡಿದ್ದಾರೆ. ಬೆಳೆ ನಷ್ಟವಾದರೆ ರೈತರಿಗೆ ತಕ್ಷಣವೇ ಪರಿಹಾರ ಸಿಗುವಂತೆ ನೋಡಿಕೊಳ್ಳಲು ವಿಮಾ ಸಂಸ್ಥೆಗಳೊಂದಿಗೆ ಸಭೆ ನಡೆಸಿ, ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಆಗಸ್ಟ್ 31ರವರೆಗೆ ವಿಸ್ತರಿಸಲಾಗಿದೆ.

ಉದ್ಯೋಗ ಅರಸಿ ನಗರಗಳಿಗೆ ವಲಸೆ ಹೋಗುವುದನ್ನು ತಡೆಯಲು 'ಕೆವಿಜಿ-ಜಿ ರಾಮ್ ಜಿ' ಯೋಜನೆಯಡಿ 16,460 ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಜುಲೈ 1ರಿಂದ ಆಗಸ್ಟ್ 24ರ ವರೆಗೆ 66.73 ಲಕ್ಷ ಮಾನವ ದಿನಗಳನ್ನು ಸೃಷ್ಟಿಸಲಾಗಿದೆ. ಕುಡಿಯುವ ನೀರಿನ ಅಭಾವವಿರುವ ಗ್ರಾಮೀಣ ಪ್ರದೇಶಗಳಿಗೆ ಟ್ಯಾಂಕರ್ ಹಾಗೂ ಕೊಳವೆ ಬಾವಿಗಳ ಮೂಲಕ ನೀರು ಪೂರೈಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಡಿಸಿಎಂ ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+