Karnataka Rainfall Today: ಮುರಸು ಚಂಡಮಾರುತ ಎಫೆಕ್ಟ್: ನವೆಂಬರ್ 7ರವರೆಗೆ ಕರ್ನಾಟಕದಲ್ಲಿ ಭಾರೀ ಮಳೆ; IMD ಮುನ್ಸೂಚನೆ

ಮುರಸು ಚಂಡಮಾರುತ ತೀವ್ರಗೊಂಡಿರುವುದು ಹಾಗೂ ರಾಜ್ಯದಲ್ಲಿ ಈಶಾನ್ಯ ಮುಂಗಾರು ತೀವ್ರಗೊಂಡಿರುವುದರಿಂದ ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆ ಮುಂದುವರಿದಿದೆ.

ಪಶ್ಚಿಮ - ಮಧ್ಯ ಮತ್ತು ಅದನ್ನು ಹೊಂದಿಕೊಂಡಿರುವ ನೈರುತ್ಯ ಬಂಗಾಳ ಕೊಲ್ಲಿಯ ಮೇಲಿರುವ ತೀವ್ರ ಚಂಡಮಾರುತ ಮುರಸು ಇದೀಗ ಪಶ್ಚಿಮ - ವಾಯುವ್ಯ ದಿಕ್ಕಿನತ್ತ ಚಲಿಸಿದೆ. ಇದು ಪಶ್ಚಿಮ-ಮಧ್ಯ ಬಂಗಾಳ ಕೊಲ್ಲಿಯ ಸಮೀಪದಲ್ಲಿ ಕೇಂದ್ರೀಕೃತವಾಗಿದೆ. ಇದು ನೆಲ್ಲೂರು (ಆಂಧ್ರಪ್ರದೇಶ) ದಿಂದ ಪೂರ್ವ-ಆಗ್ನೇಯಕ್ಕೆ ಸುಮಾರು 160 ಕಿ.ಮೀ, ಚೆನ್ನೈ (ತಮಿಳುನಾಡು) ನಿಂದ ಈಶಾನ್ಯಕ್ಕೆ 180 ಕಿ.ಮೀ, ಕಾವಲಿ (ಆಂಧ್ರಪ್ರದೇಶ)ಯಿಂದ ಪೂರ್ವ- ಆಗ್ನೇಯಕ್ಕೆ 180 ಕಿ.ಮೀ, ಒಂಗೋಲು (ಆಂಧ್ರಪ್ರದೇಶ) ದಿಂದ ಆಗ್ನೇಯಕ್ಕೆ 210 ಕಿ.ಮೀ ಮತ್ತು ಮವಿಲಿಪಟ್ಟಣಂ (ಆಂಧ್ರಪ್ರದೇಶ) ದಿಂದ ದಕ್ಷಿಣಕ್ಕೆ 240 ಕಿ.ಮೀ ದೂರದಲ್ಲಿದೆ. ಇದು ವಾಯುವ್ಯ ದಿಕ್ಕಿನತ್ತ ಚಲಿಸಿ, ಮುಂಜಾನೆ ಅವಧಿಯಲ್ಲಿ, ನೆಲ್ಲೂರು ಮತ್ತು ನರಸಾಪುರಗಳ ನಡುವೆ (ಒಂಗೋಲುವಿನ ದಕ್ಷಿಣಕ್ಕೆ) ದಕ್ಷಿಣ ಆಂಧ್ರಪ್ರದೇಶ ಕರಾವಳಿಯನ್ನು ದಾಟುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.

Karnataka Rainfall Today Cyclone Murasu to Bring Heavy Rain Across Karnataka Until November 7 IMD Forecast

ಕರ್ನಾಟಕ ಮತ್ತು ದಕ್ಷಿಣ ಮಹಾರಾಷ್ಟ್ರ ಕರಾವಳಿಯನ್ನು ಹೊಂದಿಕೊಂಡಿರುವ ಪೂರ್ವ-ಮಧ್ಯ ಅರಬ್ಬಿ ಸಮುದ್ರದ ಮೇಲೆ, ಸಮುದ್ರ ಮಟ್ಟದಿಂದ 0.9 ಕಿ.ಮೀ ಎತ್ತರದಲ್ಲಿ ಚಂಡಮಾರುತ ಪರಿಚಲನೆ (Cyclonic circulation) ಏರ್ಪಟ್ಟಿದೆ. ದಕ್ಷಿಣ ಕೇರಳ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ, ಸಮುದ್ರ ಮಟ್ಟದಿಂದ 3.1 ಕಿ.ಮೀ ಎತ್ತರದಲ್ಲಿ ಚಂಡಮಾರುತ ಪರಿಚಲನೆ ಕಂಡುಬರುತ್ತಿದೆ.

ಪೂರ್ವ-ಮಧ್ಯ ಅರಬ್ಬಿ ಸಮುದ್ರ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ, ಸಮುದ್ರ ಮಟ್ಟದಿಂದ 3.1 ಕಿ.ಮೀ ಎತ್ತರದಲ್ಲಿರುವ ಚಂಡಮಾರುತ ಪರಿಚಲನೆಯು ಮುಂದುವರಿದಿದೆ. ಅಲ್ಲದೆ ಆಗ್ನೇಯ ಅರಬ್ಬಿ ಸಮುದ್ರ ಮತ್ತು ಅದನ್ನು ಹೊಂದಿಕೊಂಡಿರುವ ಲಕ್ಷದ್ವೀಪ ಪ್ರದೇಶಗಳಲ್ಲಿ, ಸಮುದ್ರ ಮಟ್ಟದಿಂದ 1.5 ಕಿ.ಮೀ ಎತ್ತರದವರೆಗೆ ವ್ಯಾಪಿಸಿದ್ದ ಚಂಡಮಾರುತ ಪರಿಚಲನೆಯು ಈಗ ದುರ್ಬಲಗೊಂಡಿದೆ ಎಂದೂ ಭಾರತೀಯ ಹವಾಮಾನ ಇಲಾಖೆಯ ವರದಿ ಉಲ್ಲೇಖಿಸಿದೆ.

ನವೆಂಬರ್ 7ರ ವರೆಗೆ ಕರ್ನಾಟಕದಲ್ಲಿ ಮಳೆ ಆರ್ಭಟ

ಇನ್ನು ನವೆಂಬರ್ 7ರ ವರೆಗೆ ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಭಾಗಗಳಲ್ಲಿ ಮಳೆ ಆರ್ಭಟ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.

ಬೆಂಗಳೂರು, ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗದ ಹಲವು ಜಿಲ್ಲೆಗಳಲ್ಲಿಯೂ ಮಳೆಯ ಆರ್ಭಟ ಮುಂದುವರಿದಿದೆ. ದಕ್ಷಿಣ ಒಳನಾಡಿನಲ್ಲಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಮೈಸೂರು, ಮಂಡ್ಯ, ಚಾಮರಾಜನಗರ ಹಾಗೂ ಹಾಸನ ಜಿಲ್ಲೆಗಳಲ್ಲಿ ಭರ್ಜರಿ ಮಳೆ ಆಗಲಿದೆ.

ಮುಂದುವರಿದು ಕರಾವಳಿ ಮತ್ತು ಮಲೆನಾಡಿನಲ್ಲೂ ಮಳೆಯ ಅಬ್ಬರ ಇರಲಿದೆ. ಅಲ್ಲದೆ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಮಲೆನಾಡಿನ ಕೊಡಗು, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಿಂಚು - ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಈ ಸಮಯದಲ್ಲಿ ಗಾಳಿಯ ವೇಗ ಗಂಟೆಗೆ 30-40 ಕಿ.ಮೀ. ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ಮುನ್ಸೂಚನೆ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+