Karnataka Rains: ಭಾರೀ ಮಳೆಗೆ ಕಲಬುರಗಿಯಲ್ಲಿ ತಾಯಿ ಮಕ್ಕಳು ಬಲಿ, ಮಂಡ್ಯ, ಬೀದರ್‌ನಲ್ಲೂ ದುರಂತ
ಶನಿವಾರ ರಾತ್ರಿ ಕಲಬುರಗಿ ಜಿಲ್ಲೆಯ ಚಿಂಚೋಳಿ ಪಟ್ಟಣದಲ್ಲಿ ವಿದ್ಯುತ್ ಸ್ಪರ್ಶದಿಂದ ತಾಯಿ ಮತ್ತು ಇಬ್ಬರು ಮಕ್ಕಳು ವಿದ್ಯುತ್ ಸ್ಪರ್ಶದಿಂದ ಸಾವನ್ನಪ್ಪಿದ್ದಾರೆ.
ಬೆಂಗಳೂರು, ಮಾರ್ಚ್ 20: ಕರ್ನಾಟಕದಲ್ಲಿ ಶನಿವಾರ ರಾತ್ರಿ ಸುರಿದ ಭಾರೀ ಮಳೆಗೆ ಮೂರು ಪ್ರತ್ಯೇಕ ಘಟನೆಗಳಲ್ಲಿ ಐವರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಾಜ್ಯದ ಮೈಸೂರು, ಚಾಮರಾಜನಗರ, ಮಂಡ್ಯ, ಹುಬ್ಬಳ್ಳಿ, ಬೀದರ್, ದಕ್ಷಿಣ ಕನ್ನಡ ಮತ್ತು ಕಲಬುರಗಿ, ಬೆಂಗಳೂರು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಿದೆ.
ಮೈಸೂರು, ಚಾಮರಾಜನಗರ, ಮಂಡ್ಯ, ಹುಬ್ಬಳ್ಳಿ, ಬೀದರ್, ದಕ್ಷಿಣ ಕನ್ನಡ ಮತ್ತು ಕಲಬುರ್ಗಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿದ್ದು, ಬಿರುಗಾಳಿ ಸಹಜ ಜನಜೀವನದ ಮೇಲೆ ಪರಿಣಾಮ ಬೀರಿದೆ. ಬೀದರ್, ಮಂಡ್ಯ ಮತ್ತು ಕಲಬುರಗಿಯಲ್ಲಿ ಮಹಾಮಳೆಗೆ ಐವರು ಅಸುನೀಗಿದ್ದಾರೆ. ಹಲವು ಭಾಗಗಳಲ್ಲಿ ಭಾರೀ ಬೆಳೆ ನಾಶ ಉಂಟಾಗಿದೆ. ಅಕಾಲಿಕ ಮಳೆಯಿಂದಾಗಿ ರೈತರು ತಮ್ಮ ಬೆಳೆ ಕಳೆದುಕೊಂಡು ತಲೆ ಮೇಲೆ ಕೈಹೊತ್ತು ಕುಳಿತಿದ್ದಾರೆ.

ಶನಿವಾರ ರಾತ್ರಿ ಕಲಬುರಗಿ ಜಿಲ್ಲೆಯ ಚಿಂಚೋಳಿ ಪಟ್ಟಣದಲ್ಲಿ ವಿದ್ಯುತ್ ಸ್ಪರ್ಶದಿಂದ ತಾಯಿ ಮತ್ತು ಇಬ್ಬರು ಪುತ್ರರು ವಿದ್ಯುತ್ ಸ್ಪರ್ಶದಿಂದ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೃತರನ್ನು ಜರಣಮ್ಮ (42) ಮತ್ತು ಆಕೆಯ ಮಕ್ಕಳಾದ ನಾಗರಗಲ್ಲಿಯ ನಿವಾಸಿಗಳಾದ ಮಹೇಶ್ (21) ಮತ್ತು ಸುರೇಶ್ (20) ಎಂದು ಗುರುತಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಳೆ ಬಂದ ಕಾರಣ ಜರಣಮ್ಮ ತನ್ನ ಮನೆಯ ಹಿತ್ತಲಲ್ಲಿದ್ದ ಅಕ್ಕಿ ಹೊಟ್ಟು ಚೀಲದ ಮೇಲೆ ಪ್ಲಾಸ್ಟಿಕ್ ಹಾಳೆಯನ್ನು ಮುಚ್ಚಲು ಹೋಗಿದ್ದಾರೆ. ಆಕೆಯ ಮನೆಯ ಸಮೀಪ ಮರ ಬಿದ್ದಿದ್ದರಿಂದ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ತುಳಿದಿದ್ದಾರೆ. ಆಕೆಯನ್ನು ರಕ್ಷಿಸಲು ಹೋದ ಮಕ್ಕಳೂ ಕೂಡ ವಿದ್ಯುತ್ ಸ್ಪರ್ಶದಿಂದ ಮೃತಪಟ್ಟಿದ್ದು, ಪತಿ ಅಂಬಣ್ಣ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಸದ್ಯ ಅಪಾಯದಿಂದ ಪಾರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆಯ ನಂತರ ಪೊಲೀಸರು ಮತ್ತು ಗುಲ್ಬರ್ಗ ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (ಜೆಸ್ಕಾಂ) ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ''ಶನಿವಾರ ರಾತ್ರಿ ವಿದ್ಯುತ್ ಅವಘಡದ ಬಗ್ಗೆ ನಮಗೆ ಮಾಹಿತಿ ಬಂದಿದ್ದು, ನಮ್ಮ ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ಧಾವಿಸಿ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದಾರೆ ಎಂದು ಜೆಸ್ಕಾಂ ಮುಖ್ಯ ಎಂಜಿನಿಯರ್ ಬಿ ಚಂದ್ರಶೇಖರ್ ತಿಳಿಸಿದ್ದಾರೆ.

ಕಳೆದ ಮೂರು ದಿನಗಳಿಂದ ಸುರಿದ ಭಾರಿ ಮಳೆಯಿಂದಾಗಿ ಜಿಸ್ಕಾಂಗೆ ಆಸ್ತಿಪಾಸ್ತಿ ನಷ್ಟವಾಗಿದೆ. ನಷ್ಟದ ಅಂದಾಜಿನ ಬಗ್ಗೆ ವರದಿ ಸಲ್ಲಿಸುವಂತೆ ವಿಭಾಗದ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ವಿದ್ಯುತ್ ಸ್ಪರ್ಶದಿಂದ ಸಾವನ್ನಪ್ಪಿದ ತಾಯಿ ಮತ್ತು ಮಕ್ಕಳ ಕುಟುಂಬಕ್ಕೆ ನಿಯಮಾನುಸಾರ ಸೂಕ್ತ ಪರಿಹಾರ ನೀಡಲಾಗುವುದು ಎಂದು ಎಂಜಿನಿಯರ್ ಬಿ ಚಂದ್ರಶೇಖರ್ ಮಾಹಿತಿ ನೀಡಿದ್ದಾರೆ.
ಬೀದರ್ ಜಿಲ್ಲೆಯ ಕಮಲನಗರ ತಾಲೂಕಿನ ಶೀನಾಳ ಗ್ರಾಮದಲ್ಲಿ ಸಿಡಿಲು ಬಡಿದು ರೈತರೊಬ್ಬರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೃತರನ್ನು ಲಾಹು ಮಾಧವ ರಾವ್ ಬೀರ್ಗೆ (36) ಎಂದು ಗುರುತಿಸಲಾಗಿದ್ದು, ಮಳೆ ಮತ್ತು ಸಿಡಿಲಿನ ಕಾರಣ ಮರದ ಕೆಳಗೆ ನಿಂತಿದ್ದಾಗ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ .ಗಡಿ ಜಿಲ್ಲೆಯಲ್ಲೂ ಶನಿವಾರ ಸುರಿದ ಭಾರಿ ಮಳೆಗೆ ಅಪಾರ ಪ್ರಮಾಣದ ಬೆಳೆ ನಷ್ಟವಾಗಿದ್ದು, ಕೆಲವೆಡೆ ಆಲಿಕಲ್ಲು ಮಳೆಯೂ ಬಿದ್ದಿದ್ದು, ಹಲವು ವಿದ್ಯುತ್ ಕಂಬಗಳು, ಮರಗಳು ನೆಲಕ್ಕುರುಳಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಹಲಗೂರು ಹೋಬಳಿಯ ಹದ್ಲಿ ಗ್ರಾಮದಲ್ಲಿ ಶನಿವಾರ ಸುರಿದ ಮಳೆಗೆ ಮರ ಬಿದ್ದು ರೈತರೊಬ್ಬರು ಮೃತಪಟ್ಟಿದ್ದಾರೆ. ಮೃತ ಶಿವಲಿಂಗೇಗೌಡ (61) ಮನೆಗೆ ಹಿಂದಿರುಗುತ್ತಿದ್ದ ವೇಳೆ ಘಟನೆ ನಡೆದಿದೆ. ನಿಟ್ಟೂರು ಕೂಡ್ಲಿ, ನಾಗರಾಳ ಸೇರಿದಂತೆ ಹಲವು ಗ್ರಾಮಗಳಲ್ಲಿ ವಿದ್ಯುತ್ ಇಲ್ಲದೆ ಜನರು ಬದುಕು ಸಾಗಿಸುತ್ತಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ. ನಿರಂತರ ಮಳೆಯಿಂದಾಗಿ ರೈತರು ಬೆಳೆದ ಬಾಳೆ, ಮಾವು ನಾಶವಾಗಿವೆ ಎಂದು ಸಂಕಟ ಹೊರಹಾಕಿದ್ದಾರೆ.
''ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಮಾವು, ಬಾಳೆ ಮತ್ತಿತರ ಬೆಳೆ ಹಾನಿಯಾಗಿದೆ. ಲಕ್ಷಾಂತರ ರೂಪಾಯಿ ಸರ್ಕಾರಿ ಆಸ್ತಿ, ವಿದ್ಯುತ್ ಕಂಬಗಳು ನಾಶವಾಗಿವೆ. ನಷ್ಟದ ನಿಖರವಾದ ಪ್ರಮಾಣವನ್ನು ಅಧಿಕಾರಿಗಳು ಇನ್ನೂ ಅಂದಾಜಿಸಲಾಗಿಲ್ಲ" ಎಂದು ಬೀದರ್ ಹೆಚ್ಚುವರಿ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ ಹೇಳಿದ್ದಾರೆ. ಅಂದಾಜು ಪ್ರಕಾರ ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ 400 ಎಕರೆಗೂ ಹೆಚ್ಚು ಟೊಮೆಟೊ, ಶೇಂಗಾ, ಜೋಳ, ಮೆಣಸಿನಕಾಯಿ ಬೆಳೆ ನಾಶವಾಗಿದೆ'' ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕ ಎಸ್‌ಎಸ್ ಅಬೀದ್ ತಿಳಿಸಿದ್ದಾರೆ.












Click it and Unblock the Notifications