Rain alert Karnataka : ರಾಜ್ಯದಲ್ಲಿ ಮೂರು ದಿನ ಮಳೆ ಅಬ್ಬರ; ಶಾಲೆಗಳಿಗೆ ರಜೆ ಘೋಷಣೆ: ಹವಾಮಾನ ಇಲಾಖೆ ಎಚ್ಚರಿಕೆ

ಬೆಂಗಳೂರು, ಜೂನ್‌ 16: ರಾಜ್ಯದಲ್ಲಿ ಮುಂಗಾರು ಅಬ್ಬರ ಜೋರಾಗಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವರುಣಾರ್ಭಟ ಜೋರಾಗಿದ್ದು,ರಾಜ್ಯದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುತ್ತಿರುವ ಹೊತ್ತಲ್ಲಿಯೇ ಭಾನುವಾರವೂ ಅನಾಹುತಗಳು ಹೆಚ್ಚಿವೆ. ಇನ್ನೂ ಇಂದಿನಿಂದ ಜೂನ್ 19ರವರೆಗೆ ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು, ಶಿವಮೊಗ್ಗ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಸಾಗರ ಮತ್ತು ಹೊಸನಗರ ತಹಶೀಲ್ದಾರರು ರಜೆ ಘೋಷಿಸಿದ್ದಾರೆ. ಉಳಿದ ತಾಲ್ಲೂಕುಗಳಿಗೆ ಯಾವುದೇ ರಜೆ ಘೋಷಿಸಲಾಗಿಲ್ಲ. ಇದು ಶಾಲಾ ಕಾಲೇಜುಗಳು ಅಂಗನವಾಡಿಗಳು ಮತ್ತು ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ಅನ್ವಯಿಸುತ್ತದೆ ಎಂದು ಶಿವಮೊಗ್ಗ ಜಿಲ್ಲಾಧಿಕಾರಿ ತಹಶೀಲ್ದಾರರ ಮೂಲಕ ಮಾಹಿತಿ ನೀಡಿದ್ದಾರೆ.

Karnataka Rains Coastal Karnataka braces for more rain red alert till June 19

ಜೂನ್ 19ರವರೆಗೆ ಮುಂದುವರೆಯಲಿದೆ. ರಾಜ್ಯದ ಉತ್ತರ ಒಳನಾಡು ಹಾಗೂ ಮಲೆನಾಡು ಭಾಗದಲ್ಲಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಇನ್ನು, ಬೆಂಗಳೂರು, ಮಂಗಳೂರು, ಕೊಟ್ಟಿಗೆಹಾರ, ಬಂಟವಾಳ, ಬೆಳ್ತಂಗಡಿ, ಮೂಡುಬಿದಿರೆ, ಭಾಗಮಂಡಲದಲ್ಲಿ ಅತಿ ಹೆಚ್ಚು ಮಳೆಯಾಗಿದೆ. ಅಲ್ಲದೇ ಧರ್ಮಸ್ಥಳ, ಅಂಕೋಲಾ, ಸುಳ್ಯ, ಉಡುಪಿ, ಕಾರ್ಕಳ, ಪುತ್ತೂರು, ಲೋಂಡಾ,ಆಗುಂಬೆಯಲ್ಲಿ ಮಳೆಯಾಗಿದೆ. ಈಗಾಗಲೇ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಿಸಲಾಗಿದ್ದು, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಚಿಕ್ಕಮಗಳೂರು,ಹಾಸನ, ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದ್ರೆ, ವಿಜಯನಗರ, ತುಮಕೂರು, ಶಿವಮೊಗ್ಗ, ಬಳ್ಳಾರಿ, ಕೊಪ್ಪಳ, ಹಾವೇರಿ, ಗದಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಮುಂದಿನ 7 ದಿನಗಳ ಕಾಲ ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅಲ್ಲದೇ ಇಂದು ಮತ್ತು ನಾಳೆ ಜೋರಾದ ಗಾಳಿಯೊಂದಿಗೆ ವ್ಯಾಪಕವಾಗಿ ಅಲ್ಲಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಒಳನಾಡು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಇನ್ನುಳಿದ ದಿನಗಳಲ್ಲಿ ಮಳೆ ಕಡಿಮೆ ಇರುವ ಸಾಧ್ಯತೆಯಿದೆ. ರಾಜ್ಯದಾದ್ಯಂತ ಕೆಲವೆಡೆ ಗುಡುಗು ಮಿಂಚು ಸಹಿತ ಕರಾವಳಿ ಮತ್ತು ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತ ಮಲೆನಾಡು ಜಿಲ್ಲೆಗಳಿಗೆ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಅತಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯೂ ತಿಳಿಸಿದೆ.

ಬೆಂಗಳೂರಿನ ವಿವಿಧ ಭಾಗಗಳಲ್ಲಿ ಕಳೆದ ಒಂದು ವಾರದಿಂದ ಮಳೆಯಾಗುತ್ತಿದೆ. ಇಂದು ಬೆಳಿಗ್ಗೆಯಿಂದಲೇ ಮೋಡ ಕವಿದ ವಾತಾವರಣವಿದ್ದು, ಸಂಜೆ ಮಳೆಯಾಗುವ ಸಾಧ್ಯತೆ ಇದೆ. ಜೂನ್‌ 16 ರಿಂದ 18 ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೊದಲ ದಿನ ಎಲ್ಲಾ ಜಿಲ್ಲೆಗಳಿಗೆ ರೆಡ್‌ ಹಾಗೂ ಕೊನೆಯ ಎರಡು ದಿನ ಆರೆಂಜ್‌ ಅಲರ್ಟ್‌ ನೀಡಲಾಗಿದೆ. ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಿಗೆ ಜೂ.16 ರಂದು ಆರೆಂಜ್‌ ಹಾಗೂ ಗದಗ ಹಾವೇರಿ, ಕೊಪ್ಪಳ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ.

ಇನ್ನೂ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆ ಹಿನ್ನೆಲೆ ನಾಲ್ಕು ಜಿಲ್ಲೆಗಳ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ ಜಿಲ್ಲಾದ್ಯಂತ ಎಲ್ಲಾ ಮಾದರಿ ಶಾಲೆ, ಅಂಗನವಾಡಿಗೆ ರಜೆ ನೀಡಿದ್ದು, ದಕ್ಷಿಣ ಕನ್ನಡದಲ್ಲಿ 5 ತಾಲೂಕುಗಳಿಗೆ ರಜೆ ನೀಡಿ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+