Heavy Rain: 4 ದಿನ ಧಾರಾಕಾರ ಮಳೆ, 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಕೊಟ್ಟ ಐಎಂಡಿ!
Karnataka Rains: ಪೂರ್ವ ಅರಬ್ಬಿ ಸಮುದ್ರದ ಮಹಾರಾಷ್ಟ್ರ ಮತ್ತು ಕರ್ನಾಟಕದ ಕರಾವಳಿ ಉದ್ದಕ್ಕೂ ಟ್ರಫ್ ಸೃಷ್ಟಿಯಾಗಿದೆ. ಅಲ್ಲದೇ ಚಂಡಮಾರುತದ ಪ್ರಭಾವ ಕಾರಣಕ್ಕೂ ರಾಜ್ಯದ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಇನ್ನೊಂದು ವಾರ ರಾಜ್ಯದಲ್ಲಿ ಧಾರಾಕಾರ ಮಳೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಇಂದು ವಿವಿಧ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಆಗುವ ಸಾಧ್ಯತೆ ಇರುವುದರಿಂದ 16 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಅದರ ಸಂಪೂರ್ಣ ವಿವರ ಇಲ್ಲಿದೆ.
ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಅವಧಿಗೆ ಸಾಧಾರಣ ಮಳೆ ಇರಲಿದೆ. ಆದರೆ, ಎರಡನೇ ವಾರದಿಂದ ತಿಂಗಳ ಕೊನೆಯ ವರೆಗೆ ಧಾರಾಕಾರ ಮಳೆ ಆಗಲಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ. ಕರ್ನಾಟಕದ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಮುಂದಿನ ಐದು ದಿನಗಳ ಅವಧಿಗೆ ರಾಜ್ಯದಲ್ಲೂ ಧಾರಾಕಾರ ಮಳೆ ಮುಂದುವರಿಯಲಿದೆ. ಜುಲೈ 15ರ ವರೆಗೆ ಇದೇ ರೀತಿ ಮಳೆ ಮುಂದುವರಿಯಲಿದೆ. ಆದರೆ ಇದಾದ ನಂತರ ರಾಜ್ಯದಲ್ಲಿ ಮುಂಗಾರು ಮತ್ತೆ ಚುರುಕು ಪಡೆದುಕೊಳ್ಳಲಿದೆ. ಇದೀಗ ರಾಜ್ಯದ ಕರಾವಳಿ ಹಾಗೂ ಮಲೆನಾಡು ಸೇರಿ ಕೆಲವು ಜಿಲ್ಲೆಗಳಲ್ಲಿ ಮಾತ್ರ್ ರಣಭೀಕರ ಮಳೆಯಾಗುತ್ತಿದೆ. ಮುಂದಿನ ದಿನಗಳಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಮಳೆ ಇರಲಿದೆ ಎಂದು ಐಎಂಡಿ ವರದಿ ಮುನ್ಸೂಚನೆ ನೀಡಿದೆ.

16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್: ಇನ್ನು ಗುರುವಾರ (ಜುಲೈ 10)ರಂದು ವಿವಿಧ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಮುಂದುವರಿಯಲಿದೆ. 16 ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಆಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಇಂದೂ ಸಹ ಧಾರಾಕಾರ ಮಳೆ ಮುಂದುವರಿದಿದೆ. ಇನ್ನು ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಮಂಡ್ಯ, ಮೈಸೂರು, ಧಾರವಾಡ, ಗದಗ, ಬೆಳಗಾವಿ, ವಿಜಯಪುರ, ಕಲಬುರಗಿ , ಬೀದರ್ ಹಾಗೂ ಕೋಲಾರ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಆಗಲಿದ್ದು. ಈ ಜಿಲ್ಲೆಗಳಲ್ಲಿ ಭಾರತೀಯ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್ ಘೋಷಿಸಿದೆ.
ಮುಂದಿನ ಒಂದು ವಾರ ಈ ಭಾಗದಲ್ಲಿ ಮಳೆ: ಇನ್ನು ಮುಂದಿನ ಒಂದು ವಾರದ ಅವಧಿಗೆ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆ ಇರಲಿದೆ. ಆದರೆ ಮುಂದಿನ ಐದು ದಿನಗಳ ವರೆಗೆ ಮಳೆ ತುಸು ಇಳಿಕೆಯಾಗಿದೆ. ಉತ್ತರ ಹಾಗೂ ಮಧ್ಯ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಆಗಲಿದೆ. ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಾಗಲಕೋಟೆ, ಬೆಳಗಾವಿ, ವಿಜಯನಗರ, ಧಾರವಾಡ, ಗದಗ, ಹಾವೇರಿ, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು, ಮಂಡ್ಯ, ಮೈಸೂರು, ತುಮಕೂರು, ರಾಮನಗರ ಹಾಗೂ ಕೋಲಾರ ಜಿಲ್ಲೆಗಳಲ್ಲಿ ಮಳೆ ಅಬ್ಬರ ಇರಲಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಹೇಗಿದೆ ವಾತಾವರಣ: ಬೆಂಗಳೂರಿನಲ್ಲಿ ಸದ್ಯಕ್ಕೆ ಭಾರೀ ಮಳೆಯ ಮುನ್ಸೂಚನೆ ಇಲ್ಲ. ಮುಂದಿನ 48 ಗಂಟೆಯ ಅವಧಿಗೆ ಮೋಡ ಕವಿದ ವಾತಾವರಣ ಇರಲಿದೆ. ಗಾಳಿಯ ವೇಗವು 40ರಿಂದ 50 ಕಿ.ಮೀ ವೇಗದಲ್ಲಿ ಇರಲಿದೆ. ಕನಿಷ್ಠ ಹಾಗೂ ಗರಿಷ್ಠ ತಾಪಮಾನವು 30 ಹಾಗೂ 20 ಡಿಗ್ರಿ ಸೆಲ್ಸಿಯಸ್ ಇರಲಿದೆ. ಉಳಿದಂತೆ ಹವಾಮಾನದಲ್ಲಿ ಮಹತ್ವದ ಬದಲಾವಣೆಗಳು ಇಲ್ಲ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.












Click it and Unblock the Notifications