Karnataka Rains: ಸೈಕ್ಲೋನ್ ಎಫೆಕ್ಟ್‌ ರಾಜ್ಯದ 6 ಜಿಲ್ಲೆಗಳಲ್ಲಿ ರಣಭೀಕರ ಮಳೆ, ಯೆಲ್ಲೋ ಅಲರ್ಟ್!

Karnataka Rains: ಕರ್ನಾಟಕದಾದ್ಯಂತ ಮಳೆ ಅಬ್ಬರ ಜೋರಾಗಿದೆ. ಕೇರಳ ರಾಜ್ಯದಲ್ಲಿ ಸೈಕ್ಲೋನ್ ಪರಿಣಾಮದಿಂದಾಗಿ ಭಾರೀ ಮಳೆ ಆಗುತ್ತಿದ್ದು, ಸೈಕ್ಲೋನ್ ಪ್ರಭಾವವು ಕರ್ನಾಟಕದ ಮೇಲೆಯೂ ಆಗಿದೆ. ಹೀಗಾಗಿ, ರಾಜ್ಯದ ವಿವಿಧ ಭಾಗದಲ್ಲಿ ಮುಂದಿನ ಮೂರು ದಿನಗಳ ವರೆಗೆ ಧಾರಾಕಾರ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಎಲ್ಲೆಲ್ಲಿ ಮಳೆ ಆಗಲಿದೆ ಎನ್ನುವ ಸಂಪೂರ್ಣ ವಿವಿರ ನೋಡೋಣ.

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಮಳೆ ಅಬ್ಬರ ಜೋರಾಗಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಆಗುತ್ತಿದ್ದು. ಇನ್ನೂ ಮೂರರಿಂದ ನಾಲ್ಕು ದಿನಗಳ ಕಾಲ ಮಳೆ ಮುಂದುವರಿಯಲಿದೆ ಎಂದು ಹೇಳಲಾಗಿದೆ. ರಾಜ್ಯದಲ್ಲಿ ಬೆಂಗಳೂರು ಸೇರಿದಂತೆ 6 ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಆಗುವ ಸಾಧ್ಯತೆ ಇರುವುದರಿಂದ ಈ ಭಾಗಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ರಾಜ್ಯದಲ್ಲಿ ಇಂದು (ಜುಲೈ 07) ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಆಗಲಿದೆ ಎಂದು ಹೇಳಲಾಗಿದೆ.

Karnataka Rains Cyclone Effect Heavy rains in 6 districts of Karnataka Imd yellow alert

ಎಲ್ಲೆಲ್ಲಿ ಮಳೆ: ಕರಾವಳಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಆಗಲಿದ್ದು ಗಾಳಿಯ ವೇಗವು 40 ರಿಂದ 50 ಕಿ.ಮೀ ವೇಗದಲ್ಲಿ ಇರಲಿದೆ. ಇನ್ನು ಬೆಳಗಾವಿ, ಧಾರವಾಡ, ಗದಗ ಹಾವೇರಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಇನ್ನು ದಕ್ಷಿಣ ಕರ್ನಾಟಕದ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಮೈಸೂರು ಹಾಗೂ ಹಾಸನ ಜಿಲ್ಲೆಗಳಲ್ಲೂ ಮಳೆ ಆರ್ಭಟ ಇರಲಿದೆ. ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಚಾಮರಾಜನಗರ, ದಾವಣಗೆರೆ, ಮಂಡ್ಯ, ಕೋಲಾರ, ರಾಮನಗರ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳಲ್ಲೂ ಧಾರಾಕಾರ ಮಳೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.

6 ಜಿಲ್ಲೆಗಳಲ್ಲಿ ಧಾರಾಕಾರ ಮಳೆ: ರಾಜ್ಯದಲ್ಲಿ ಬೆಂಗಳೂರು ಸೇರಿದಂತೆ ವಿವಿಧ ಭಾಗದಲ್ಲಿ ಮಳೆ ಅಬ್ಬರ ಜೋರಾಗಿದೆ. ಅದರಲ್ಲೂ ಕರಾವಳಿ ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ ಮಳೆ ಅಬ್ಬರ ಮುಂದುವರಿದಿದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆ ಮುಂದುವರಿದಿದೆ. ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ಕೊಡಗು ಜಿಲ್ಲೆಯಲ್ಲೂ ಧಾರಾಕಾರ ಮಳೆ ಮುಂದುವರಿದಿದೆ. ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಈ ಜಿಲ್ಲೆಗಳಲ್ಲಿ ಭಾರತೀಯ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್ ಘೋಷಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+