Karnataka Rains: ಸೈಕ್ಲೋನ್ ಪ್ರಸರಣ: ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಧಾರಾಕಾರ ಮಳೆ, ಆರೆಂಜ್ & ಯೆಲ್ಲೋ ಅಲರ್ಟ್
Karnataka Rains: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಹಾಗೂ ತಮಿಳುನಾಡಿಗೆ ಈಶಾನ್ಯ ಮುಂಗಾರು ಪ್ರವೇಶವಾಗಿರುವುದರಿಂದ ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಕರ್ನಾಟಕದ 7 ಪ್ರಮುಖ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಹಾಗೂ ವಿವಿಧ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಸಹ ಘೋಷಿಸಲಾಗಿದೆ. ಇನ್ನೂ ಒಂದು ವಾರದ ಅವಧಿಗೆ ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದ ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಅದರ ಸಂಪೂರ್ಣ ವಿವರ ಇಲ್ಲಿದೆ.
ಕರ್ನಾಟಕದಾದ್ಯಂತ ಮಳೆ ಆರ್ಭಟ ಮುಂದುವರಿದಿದೆ. ಹವಾಮಾನ ಇಲಾಖೆಯ ಪ್ರಕಾರ 7 ಜಿಲ್ಲೆಗಳಲ್ಲಿ ಭಾರೀ ಮಳೆ ಆಗುವ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಜಿಲ್ಲೆಗಳಲ್ಲಿ - ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು, ಉತ್ತರ ಒಳನಾಡಿನಲ್ಲಿ ಧಾರಾಕಾರ ಮಳೆ ಆಗುತ್ತಿದೆ.

ಆಗ್ನೇಯ ಅರೇಬಿಯನ್ ಸಮುದ್ರದ ಮೇಲೆ ಉತ್ತಮ ಒತ್ತಡದ ಪ್ರದೇಶ ರೂಪುಗೊಂಡಿದ್ದು, ಅದು ಮುಂದುವರಿದಿದೆ. ನೈಋತ್ಯ ಬಂಗಾಳಕೊಲ್ಲಿಯ ಮೇಲಿನ ಕಡಿಮೆ ಒತ್ತಡದ ಪ್ರದೇಶ ನಿರ್ಮಾಣವಾಗಿದೆ. ಚಂಡಮಾರುತದ ಪರಿಚಲನೆಯು ಸರಾಸರಿ ಸಮುದ್ರ ಮಟ್ಟಕ್ಕಿಂತ 7.6 ಕಿ.ಮೀ. ವರೆಗೆ ವಿಸ್ತರಿಸಿದೆ. ಇದು ಪಶ್ಚಿಮ ವಾಯುವ್ಯ ದಿಕ್ಕಿಗೆ ಚಲಿಸುವ ಸಾಧ್ಯತೆಯಿದೆ. ನೈಋತ್ಯ ಮತ್ತು ಪಶ್ಚಿಮ-ಮಧ್ಯ ಬಂಗಾಳ ಕೊಲ್ಲಿಯ ಉತ್ತರ ತಮಿಳುನಾಡು ಮತ್ತು ದಕ್ಷಿಣ ಆಂಧ್ರಪ್ರದೇಶದ ಕರಾವಳಿಗಳಿಗೆ ಹೊಂದಿಕೊಂಡಿರುವ ಪ್ರದೇಶದಲ್ಲಿ ಖಿನ್ನತೆಯಾಗಿ ತೀವ್ರಗೊಳ್ಳುವ ಸಾಧ್ಯತೆಯಿದೆ.
ಇದು ಪಶ್ಚಿಮ-ವಾಯುವ್ಯ ದಿಕ್ಕಿಗೆ ಉತ್ತರ ತಮಿಳುನಾಡು, ಪುದುಚೇರಿ ಮತ್ತು ದಕ್ಷಿಣ ಆಂಧ್ರಪ್ರದೇಶದ ಕರಾವಳಿಗಳ ಕಡೆಗೆ ಚಲಿಸುವ ಸಾಧ್ಯತೆಯಿದೆ ಮತ್ತು ನಂತರದ 24 ಗಂಟೆಗಳಲ್ಲಿ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆಯಿದೆ. ದಕ್ಷಿಣ ಅಂಡಮಾನ್ ಸಮುದ್ರ ಮತ್ತು ನೆರೆಹೊರೆಯಲ್ಲಿ ಮೇಲ್ಭಾಗದ ವಾಯು ಚಂಡ ಮಾರುತದ ಪ್ರಸರಣವಿದ್ದು, ಸರಾಸರಿ ಸಮುದ್ರ ಮಟ್ಟಕ್ಕಿಂತ 5.8 ಕಿ.ಮೀ. ವರೆಗೆ ವಿಸ್ತರಿಸಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.
ಈ ಭಾಗದಲ್ಲಿ ಆರೆಂಜ್ ಅಲರ್ಟ್: ಇನ್ನು ಕರ್ನಾಟಕದ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಚಾಮರಾಜನಗರ ಹಾಗೂ ಹಾಸನದಲ್ಲಿ ಭಾರೀ ಮಳೆ ಆಗುವ ಸಾಧ್ಯತೆ ಇದ್ದು ಈ ಭಾಗದಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಕರಾವಳಿಯಲ್ಲಿ ಆರೆಂಜ್ ಅಲರ್ಟ್: ಕರಾವಳಿಯ ಜಿಲ್ಲೆಗಳಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಭಾರಿ ಮಳೆ ಮುಂದುವರಿದಿದ್ದು, ಈ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಅಲ್ಲದೇ ಗಾಳಿಯ ವೇಗವು ಪ್ರತಿ ಗಂಟೆಗೆ 35-45 ಕಿ.ಮೀ. ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ಉಲ್ಲೇಖಿಸಿದೆ. ಉಳಿದಂತೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಸಾಧಾರಣ ಮಳೆ ಮುಂದುವರಿದಿದೆ.
ಮೀನುಗಾರರಿಗೆ ಎಚ್ಚರಿಕೆ: ಇನ್ನು ಕರಾವಳಿ ಸೇರಿದಂತೆ ಕರ್ನಾಟಕದ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಆಗುತ್ತಿದ್ದು ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.
ಈ ಜಿಲ್ಲೆಗಳಲ್ಲಿ ಧಾರಾಕಾರ ಮಳೆ
ಅಲ್ಲದೇ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಹಾಗೂ ತುಮಕೂರಲ್ಲಿ ಜಿಲ್ಲೆಗಳಲ್ಲೂ ಮಳೆ ಆರ್ಭಟ ಮುಂದುವರಿದಿದೆ. ಇನ್ನು ಉತ್ತರ ಒಳನಾಡಿನ ಬಳ್ಳಾರಿ, ವಿಜಯನಗರದಲ್ಲಿ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳಲ್ಲೂ ಮಳೆ ಆರ್ಭಟ ಶುರುವಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.












Click it and Unblock the Notifications