ಕರ್ನಾಟಕ ಮಹಾ ಮಳೆ: ಮೃತಪಟ್ಟವರ ಸಂಖ್ಯೆ 13ಕ್ಕೆ ಏರಿಕೆ

ಬೆಂಗಳೂರು, ಆಗಸ್ಟ್ 10: ಕರ್ನಾಟಕದ ಭಾರಿ ಮಳೆಗೆ ಸಿಲುಕಿ ಮೃತಪಟ್ಟವರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ.

Recommended Video

      ಸರ್ಕಾರ ಹಾಗೂ ಮಂತ್ರಿಗಳಿಗೆ ಮೇಷ್ಟ್ರ ಪ್ರಶ್ನೆ..? | Oneindia Kannada

      ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಆಯುಕ್ತ ಮನೋಜ್ ರಂಜನ್ ಈ ಕುರಿತು ಮಾಹಿತಿ ನೀಡಿದ್ದಾರೆ. ಕಳೆದ ಎರಡು ದಿನಗಳಿಂದ ಎಲ್ಲಾ ಜಲಾಶಯಗಳ ನೀರಿನ ಒಳಹರಿವು ಹಾಗೂ ಹೊರಹರಿವು ಹೆಚ್ಚಾಗಿದೆ. ರಾಜ್ಯದಲ್ಲಿ ಒಟ್ಟು 13 ಮಂದಿ ಮಳೆಗೆ ಸಿಲುಕಿ ಪ್ರಾಣ ಕಳೆದುಕೊಂಡಿದ್ದಾರೆ.

      ಕಳೆದ ಒಂದು ವಾರದಿಂದ 13 ಮಂದಿ ಸಾವನ್ನಪ್ಪಿದ್ದಾರೆ. ಭೂಕುಸಿತ ಉಂಟಾದ ಪರಿಣಾಮ ತಲಕಾವೇರಿಯ ದೇವಸ್ಥಾನದ ಅರ್ಚಕರು ನಾಪತ್ತೆಯಾಗಿದ್ದಾರೆ.

       Karnataka Rains: Death Toll Rise To 13 In State

      ಮುಂದಿನ 24 ಗಂಟೆಗಳಲ್ಲಿ ಕರ್ನಾಟಕ ಕರಾವಳಿ ಪ್ರದೇಶದಲ್ಲಿ ಭಾರಿ ಮಳೆಯ ಮುನ್ಸೂಚನೆಯನ್ನು ನೀಡಲಾಗಿದೆ. ಹಾಗೆಯೇ ಹಲವು ನದಿಗಳ ಹರಿವು ಕೂಡ ಹೆಚ್ಚಾಗಿದ್ದು, ಅಲ್ಲಲ್ಲಿ ಭೂಕುಸಿತ ಉಂಟಾಗುವ ಸಾಧ್ಯತೆ ಇದೆ.

      ಕರಾವಳಿ ಪ್ರದೇಶದಲ್ಲಿ ಅತಿ ಹೆಚ್ಚು ಮಳೆಯಾಗುತ್ತಿದೆ. ಮಲೆನಾಡು ಭಾಗ ಹಾಗೂ ಉತ್ತರ ಒಳನಾಡಿನಲ್ಲಿ ಕೂಡ ಸಾಧಾರಣ ಮಳೆಯಾಗಲಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಮಾತ್ರ ಗಾಳಿಯಿಂದ ಕೂಡಿದ ಭಾರಿ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

      ಕೃಷ್ಣರಾಜ ಸಾಗರ, ಹಾರಂಗಿ, ಹೇಮಾವತಿ, ಕಬಿನಿ ಜಲಾಶಯ ಬಹುತೇಕ ಭರ್ತಿಯಾಗಿದೆ. ಮೈಸೂರಿನ ಹೆಬ್ಬಾಳ ನದಿ ತುಂಬಿ ಹರಿಯುತ್ತಿದೆ. ಎಂಟು ನೆರೆ ಪರಿಹಾರ ಶಿಬಿರವನ್ನು ನಿಯಜಿಸಲಾಗಿದೆ. 278 ಮನೆಗಳಿಗೆ ಹಾನಿಯಾಗಿದೆ. 2140 ಮನೆಗಳಿಗೆ ಸಾಧಾರಣ ಹಾನಿಯಾಗಿದ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+