Karnataka Rains: ರಾಜ್ಯದಲ್ಲಿ ವಾಡಿಕೆಗಿಂತ ಅಧಿಕ ಮಳೆ-ಜಿಲ್ಲಾವಾರು ಅಂಕಿಅಂಶಗಳ ವಿವರ ಇಲ್ಲಿದೆ
Karnataka Rains: ಕಳೆದ ಬಾರಿ ಅಂದರೆ, 2023ರಲ್ಲಿ ಮುಂಗಾರು ಮಳೆ ಕೈಕೊಟ್ಟ ಕಾರಣ ಬರದ ಚಾಯೆ ಆವರಿಸಿತ್ತು. ಆದರೆ, ಈ ಬಾರಿ ಜೂನ್ ಆರಂಭವಾಗುತ್ತಿದ್ದಂತೆ ಮುಂಗಾರು ಅಬ್ಬರಿಸಿ ಬೊಬ್ಬೆರೆದ ಹಿನ್ನೆಲೆ ದೊಡ್ಡ ದೊಡ್ಡ ಅವಾಂತರಗಳೇ ಸೃಷ್ಟಿಯಾಗಿದ್ದವು. ಈ ಮೂಲಕ ಈ ಬಾರಿ ವಾಡಿಕೆಗಿಂತ ಅತ್ಯಧಿಕ ಮಳೆಯಾಗಿದೆ. ಅಂಕಿಅಂಶಗಳ ವಿವರ ಇಲ್ಲಿದೆ ಗಮನಿಸಿ.
ರಾಜ್ಯದಲ್ಲಿ ಭಾರೀ ಮಳೆಯಾದ ಪರಿಣಾಮ ಅಕ್ಟೋಬರ್ ತಿಂಗಳಿನಲ್ಲಿ ವಾಡಿಕೆಗಿಂತ ಶೇಕಡ 41ರಷ್ಟು ಹೆಚ್ಚು ಮಳೆಯಾಗಿದೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮಾಹಿತಿ ಪ್ರಕಾರ, ಅಕ್ಟೋಬರ್ ಒಂದರಿಂದ 31ರ ನಡುವಿನ ಒಂದು ತಿಂಗಳ ಅವಧಿಯಲ್ಲಿ 131 ಮಿಲಿ ಮೀಟರ್ ಮಳೆಯಾಗಲಿದೆ ಎಂದು ಅಂದಾಜಿಸಲಾಗಿತ್ತು. ಆದರೆ ಈ ಅವಧಿಯಲ್ಲಿ 184.8 ಮಿ.ಮೀ.ನಷ್ಟು ಮಳೆಯಾಗಿದ್ದು, ವಾಡಿಕೆಗಿಂತ ಶೇಕಡ 41ರಷ್ಟು ಹೆಚ್ಚಳ ಆಗಿದೆ.

ರಾಜ್ಯದ ದಕ್ಷಿಣ ಒಳನಾಡಿನಲ್ಲಿ 157.7ಮಿ.ಮೀ. ಮಳೆಯಾಗಲಿದೆ ಎಂದು ಅಂದಾಜಿಸಲಾಗಿತ್ತು. ಆದರೆ 220.3 ಮಿ.ಮೀ.ಮಳೆಯಾಗಿದ್ದು, ಈ ಮೂಲಕ ವಾಡಿಕೆಗಿಂತ ಶೇಕಡ 60ರಷ್ಟು ಅಧಿಕ ಪ್ರಮಾಣದ ಮಳೆ ಸುರಿದಿದೆ. ಉತ್ತರ ಕರ್ನಾಟಕ ಭಾಗದಲ್ಲೂ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಈ ಭಾಗದಲ್ಲು 107 7ಮಿ.ಮೀ. ಮಳೆಯಾಗಲಿದೆ ಎಂದು ಅಂದಾಜಿಸಲಾಗಿತ್ತು. ಆದರೆ, 129.6 ಮಿ.ಮೀ.ನಷ್ಟು ಮಳೆಯಾಗಿದ್ದು, ವಾಡಿಕೆಗಿಂತ ಶೇಕಡ 21ರಷ್ಟು ಹೆಚ್ಚು ಮಳೆಯಾಗಿದೆ.
ಮಲೆನಾಡು & ಕರಾವಳಿ ಭಾಗದ ಮಳೆ ವಿವರ: ಇನ್ನು ಮಲೆನಾಡಿನಲ್ಲಿ 159.3 7 ಮಿಲಿ ಮೀಟರ್ ಮಳೆಯಾಗಲಿದೆ ಎಂದು ಅಂದಾಜಿಸಲಾಗಿತ್ತು. ಆದರೆ, 240.6 7ಮಿ.ಮೀ. ಮಳೆಯಾಗಿದ್ದು, ವಾಡಿಕೆಗಿಂತ ಶೇಕಡ 51ರಷ್ಟು ಮಳೆಯಾಗಿದೆ. ಕರಾವಳಿ ಭಾಗದಲ್ಲಿ 187.87 ಮಿಲಿ ಮೀಟರ್ ಮಳೆಯಾಗಲಿದೆ ಎಂದು ಅಂದಾಜು ಮಾಡಲಾಗಿತ್ತು. ಆದರೆ, 261.3 ಮಳೆಯಾಗಿದ್ದು, ವಾಡಿಕೆಗಿಂತ ಶೇಕಡ 39ರಷ್ಟು ಹೆಚ್ಚು ಮಳೆಯಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
978 ಮಿ.ಮೀ.ನಷ್ಟು ಮಳೆ: ಮುಂಗಾರು ಮಳೆಯ ಅವಧಿಯಾದ ಜೂನ್ ಒಂದರಿಂದ ಸೆಪ್ಟೆಂಬರ್ 30ರ ನಡುವಿನ ಅವಧಿಯಲ್ಲೂ ರಾಜ್ಯದಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಇದರಿಂದ ಎಲ್ಲಾ ಪ್ರಮುಖ ಜಲಾಶಯಗಳು ಭರ್ತಿಯಾಗಿವೆ. ಈ ಅವಧಿಯಲ್ಲಿ ರಾಜ್ಯದದಲ್ಲಿ ಒಟ್ಟು 852 ಮಿ.ಮೀ. ಮಳೆಯಾಗಲಿದೆ ಎಂದು ಅಂದಾಜು ಮಾಡಲಾಗಿತ್ತು. ಆದರೆ, 978 ಮಿ.ಮೀ.ನಷ್ಟು ಮಳೆಯಾಗಿದ್ದು, ವಾಡಿಕೆಗಿಂತ ಶೇಕಡ 15ರಷ್ಟು ಹೆಚ್ಚು ಮಳೆಯಾಗಿದೆ.
ವಾಡಿಕೆಗಿಂತ ಮಳೆ ಹೆಚ್ಚಳ: ದಕ್ಷಿಣ ಒಳನಾಡಿನಲ್ಲಿ ಶೇಕಡ 11, ಉತ್ತರ ಒಳನಾಡಿನಲ್ಲಿ ಶೇಕಡ 12, ಮಲೆನಾಡು ಭಾಗದಲ್ಲಿ ಶೇಕಡ 13 ಹಾಗೂ ಕರಾವಳಿ ಭಾಗದಲ್ಲಿ ಶೇಕಡ 20ರಷ್ಟು ವಾಡಿಕೆಗಿಂತ ಹೆಚ್ಚು ಮಳೆಯಾಗಿತ್ತು. ಇನ್ನು ಜೂನ್ 1ರಿಂದ ಅಕ್ಟೋಬರ್ ಅಂತ್ಯದ ನಡುವಿನ ಅವಧಿಯಲ್ಲೂ ವಾಡಿಕೆಗಿಂತ ಶೇಕಡ 20ರಷ್ಟು ಹೆಚ್ಚು ಮಳೆಯಾಗಿದೆ. ಈ ಅವಧಿಯಲ್ಲಿ 1102 7ಮಿ.ಮೀ ಮಳೆಯಾಗಲಿದೆ ಎಂದು ಅಂದಾಜಿಸಲಾಗಿತ್ತು. ಆದರೆ, 1,322 ಮಿ.ಮೀ.ನಷ್ಟು ಮಳೆಯಾಗಿದೆ ಎಂದು ತಿಳಿದುಬಂದಿದೆ.












Click it and Unblock the Notifications