Karnataka Rains: ರಾಜ್ಯಾದ್ಯಂತ ಮುಂದಿನ 4 ದಿನ ಭಾರೀ ಮಳೆ ಮುನ್ಸೂಚನೆ; ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ ಸಾಧ್ಯತೆ

Karnataka Rains: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂಗಾರು ಮಳೆ ಚುರುಕು ಪಡೆದಿದೆ. ಹಾಗೆಯೇ ಮುಂದಿನ ನಾಲ್ಕು ದಿನಗಳ ಕಾಲ ಈ ಭಾಗಗಳಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ ಎಲ್ಲೆಲ್ಲಿ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾರಣ ಇದ್ದು, ಭಾರೀ ಮಳೆಯಾಗುವ ಸಾಧ್ಯತೆಯಿದೆ ಎನ್ನುವ ಮುನ್ಸೂಚನೆ ಇದೆ. ಹಾಗೆಯೇ ಬೆಂಳೂರು ಸೇರಿದಂತೆ ಹಲವು ಜಿಲ್ಲಗಳಲ್ಲೂ ವರುಣಾ ಆರ್ಭಟಿಸಲಿದ್ದಾನೆ ಅಂತಲೂ ಮುನ್ಸೂಚನೆ ನೀಡಿದೆ.

Karnataka Rains Heavy rain forecast across the state for next 4 days

ರಾಜ್ಯಾದ್ಯಂತ ಜುಲೈ 22 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನು ಇಂದು (ಜುಲೈ 18) ಭಾರೀ ಮಳೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಹವಾಮಾನ ಇಲಾಖೆ ಬೆಂಗಳೂರು, ಕೊಡಗು, ಮೈಸೂರು, ಶಿವಮೊಗ್ಗ, ಚಿಕ್ಕಮಗಳೂರು, ಚಿತ್ರದುರ್ಗ, ಧಾರವಾಡ, ಗದಗ, ಕೊಪ್ಪಳ, ಬೆಳಗಾವಿ, ವಿಜಯಪುರ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.

ಜುಲೈ 18ರಂದು ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಪ್ರತ್ಯೇಕವಾಗಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಜುಲೈ 19ರಂದು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ರಣಮಳೆ ಮಳೆ ಆಗಲಿದ್ದು, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಕೆಲವೆಡೆ ಭಾರೀ ಮಳೆಯಾಗಲಿದೆ. ಜೊತೆಗೆ ಈ ಭಾಗಗಳಲ್ಲಿ ಗಂಟೆಗೆ 30ರಿಂದ 40 ಕಿಲೋ ಮೀಟರ್‌ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಜುಲೈ 20ರಂದು ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಉಡುಪಿ ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿ ಬಿರುಗಾಳಿ ಸಹಿತ ಮಳೆಯಾದರೆ, ಇನ್ನೂ ಕೆಲವೆಡೆ ಸಾಧಾರಣ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶವನ್ನು ನೀಡಿದೆ.

ಜುಲೈ 18ರಿಂದ 20ರ ವರೆಗೂ ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಜುಲೈ 18 ಮತ್ತು 19ರಂದು ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಚಿಕ್ಕಬಳ್ಳಾಪುರ, ಶಿವಮೊಗ್ಗ, ಚಾಮರಾಜನಗರ, ಮೈಸೂರು, ಮಂಡ್ಯ, ಬೆಂಗಳೂರು ಗ್ರಾಮಾಂತರ ಹಾಗೂ ಬೆಂಗಳೂರು ನಗರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಗಂಟೆಗೆ 40-50 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮತ್ತೊಂದೆಡೆ ನೋಡೋದಾದ್ರೆ ಈಗಾಗಲೇ ಭಾರೀ ಮಳೆ ಹಿನ್ನೆಲೆ ಮಕ್ಕಳ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಕೆಲ ಜಿಲ್ಲೆಗಳಲ್ಲಿ ರಜೆಗಳನ್ನು ಘೋಷಣೆ ಮಾಡಲಾಗಿದೆ. ಅಲ್ಲದೆ, ಈ ರಜೆಗಳನ್ನು ಸರಿದೂಗಿಸುವ ಕಾರ್ಯ ಕೂಡ ನಡೆಯುತ್ತಿದೆ. ಅದರಲ್ಲೂ ಕರಾವಳಿ ಜಿಲ್ಲೆಗಳ ಕೆಲವೆಡೆ ಹಾಗೂ ಮಲೆನಾಡು ಜಿಲ್ಲೆಗಳಲ್ಲೇ ಭಾರೀ ಮಳೆಯಾದ ಕಾರಣ ಶಾಲಾ-ಕಾಲೇಜಿಗಳಿಗೆ ಹೆಚ್ಚು ರಜೆಗಳನ್ನು ನೀಡಲಾಗಿದೆ. ಇದೀಗ ಮತ್ತೆ ವರುಣಾರ್ಭಟ ಮುಂದುವರೆದಿದ್ದು, ಮುಂದಿನ ದಿನಗಳಲ್ಲಿ ಹೆಚ್ಚು ಮಳೆಯಾಗುವಂತಹ ಭಾಗಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವ ಸಾಧ್ಯತೆಯಿದೆ. ಅಲ್ಲದೆ, ಈ ರಜೆಗಳನ್ನು ಸರಿದೂಗಿಸಲು ಆಯಾ ಜಿಲ್ಲಾಡಳಿತಗಳು ಮೊದಲು ರೂಪಿಸಿದಂತೆ ಶನಿವಾರ ಪೂರ್ತಿ ತರಗತಿಗಳನ್ನು ನಡೆಸುವ ಕಾರ್ಯಕ್ಕೂ ಕೈಹಾಕಬಹುದು. ಯಾಕಂದ್ರೆ ವವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಯಾವುದೇ ತೊಂದರೆಯಾಗಬಾರದು ಎನ್ನುವ ನಿಟ್ಟಿನಲ್ಲಿ ಈ ನಿರ್ಧಾರ ಕೈಗೊಳ್ಳಲಾಗುತ್ತದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+