Karnataka Rains: ರಾಜ್ಯದಲ್ಲಿ ಬಿರುಗಾಳಿ ಮಳೆ ಮುನ್ಸೂಚನೆ: ರೆಡ್‌, ಆರೆಂಜ್‌, ಯೆಲ್ಲೋ ಅಲರ್ಟ್‌

Karnataka Rains: ಈಗಾಗಲೇ ರಾಜ್ಯಕ್ಕೆ ಮುಂಗಾರು ಪ್ರವೇಶ ಮಾಡಿದ್ದು, ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಿಂದ ದೊಡ್ಡ ದೊಡ್ಡ ಅವಾಂತರಗಳೇ ಸೃಷ್ಟಿಯಾಗಿವೆ. ಹಾಗೆಯೇ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ ಎನ್ನುವ ಮುನ್ಸೂಚನೆ ಇದೆ. ಹಾಗಾದ್ರೆ ಎಲ್ಲೆಲ್ಲಿ ವರುಣಾರ್ಭಟ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು (ಮೇ 28) ಬೆಳಗ್ಗೆಯೇ ಬಿಸಿಲು ಇದ್ದು, ಮಧ್ಯಾಹ್ನ ಅಥವಾ ಸಂಜೆ ವೇಳೆಗೆ ಭಾರೀ ಮಳೆ ಬೀಳುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ನಗರದಲ್ಲಿ ರಣಮಳೆ ಸುರಿದು ಅವಾಂತರಗಳೇ ಸೃಷ್ಟಿಯಾಗಿವೆ. ಹಾಗೆಯೇ ಮುಂದಿನ ಹಲವು ದಿನಗಳ ಕಾಲ ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ತಿಳಿಸಿದೆ.

Karnataka Rains Heavy Rain Forecast in These Districts for Next 3 days from may 28

ರೆಡ್‌, ಆರೆಂಜ್‌, ಯೆಲ್ಲೋ ಅಲರ್ಟ್: ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ ಇಂದು (ಮೇ 28) ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಮುಂಜಾಗ್ರತಾ ಕ್ರಮವಾಗಿ ಹವಾಮಾನ ಇಲಾಖೆ ರೆಡ್ ಅಲರ್ಟ್​ ನೀಡಿದೆ. ಕೊಡಗು, ಹಾಸನ, ವಿಜಯಪುರ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಿದೆ. ಬೀದರ್, ಧಾರವಾಡ, ಕಲಬುರಗಿ, ರಾಯಚೂರು, ಯಾದಗಿರಿ, ಬಳ್ಳಾರಿ, ಚಾಮರಾಜನಗರ, ದಾವಣಗೆರೆ, ಮೈಸೂರು, ವಿಜಯನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಿದೆ.

ಅಲ್ಲದೆ, ಈ ಜಿಲ್ಲೆಗಳು ಸೇರಿದಂತೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಮಳೆ ಮುಂದುವರೆಯುವ ಸಾಧ್ಯತೆಯಿದ್ದು, ಬಳಿಕ ಮಳೆ ಪ್ರಮಾಣ ತಗ್ಗಲಿದೆ ಅಂತಲೂ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಮಳೆರಾಯ ಅಬ್ಬರಿಸಿ ಬೊಬ್ಬೆರೆದಿದ್ದಾನೆ.

ಮುಂಗಾರು ಜೊತೆ, ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತದ ಪರಿಣಾಮ, ಮುಂದಿನ ದಿನಗಳಲ್ಲೂ ಹಲವು ಜಿಲ್ಲೆಗಳಿಗೆ ಗುಡುಗು, ಮಿಂಚು ಸಹಿತ ಬಿರುಗಾಳಿ ಮಳೆಯಾದ್ರೆ, ಇನ್ನೂ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ಸಂದೇಶವನ್ನು ರವಾನಿಸಿದೆ.

ಭಾರೀ ಮಳೆ ಮುಂದುರೆದ ಪರಿಣಾಮ ಮಕ್ಕಳ ಹಿತದೃಷ್ಟಿಯಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ಅಂಗನವಾಡಿ ಕೇಂದ್ರಗಳು, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ದಕ್ಷಿಣ ಕನ್ನಡ, ಕೊಡುಗು, ಉಡುಪಿ, ಮೈಸೂರು ಜಿಲ್ಲೆಗಳಲ್ಲಿ ರಜೆ ಘೋಷಣೆ ಮಾಡಲಾಗಿತ್ತು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಸಹ ರಜೆ ಮುಂದುವರೆಸಲಾಗಿದೆ.

ಮಂಗಳವಾರ ಮಂಗಳೂರು, ಕೊಡಗು, ಕಾರವಾರ, ಚಾಮರಾಜನಗರ, ಮೈಸೂರು, ಚಿಕ್ಕಮಗಳೂರು, ಶಿವಮೊಗ್ಗ, ವಿಜಯಪುರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿ ಅವಾಂತರಗಳೇ ಸೃಷ್ಟಿಯಾಗಿವೆ. ತಾಪಮಾನದ ವಿಚಾರಕ್ಕೆ ಬಂದರೆ, ಬೀದರ್​ನಲ್ಲಿ 32.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ನಿರ್ಮಾಣವಾಗಿದ್ದು, ಎಚ್​ಎಎಲ್​ನಲ್ಲಿ 27.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 26.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾದ ಬಗ್ಗೆ ವರದಿಯಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+