Karnataka Rains: ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಭಾರೀ ಮಳೆ ಮುನ್ಸೂಚನೆ; ರೆಡ್, ಆರೆಂಜ್ ಅಲರ್ಟ್
Karnataka Rains: ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನೆಲೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆ ಮುಂದುವರೆದಿದೆ. ಹಾಗೆಯೇ ಮುಂದಿನ ಒಂದು ವಾರ ಈ ಭಾಗಗಳಲ್ಲಿ ಧಾರಾಕಾರ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ ಎಲ್ಲೆಲ್ಲಿ ಮಳೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು (ಮೇ 26) ಬೆಳಗ್ಗೆ ಮೋಡ ಕವಿದ ವಾತಾವರಣ ಇದ್ದು, ಕೆಲವೇ ಕ್ಷಣಗಳಲ್ಲಿ ಮಳೆಯಾಗುವ ಎಲ್ಲಾ ಲಕ್ಷಣಗಳು ಎದ್ದು ಕಾಣುತ್ತಿದೆ. ಈಗಾಗಲೇ, ಕಳೆದ ಮೂರ್ನಾಲ್ಕು ದಿನಗಳಿಂದ ನಗರದಲ್ಲಿ ರಣಮಳೆ ಮುಂದುವರೆದಿದೆ. ಹಾಗೆಯೇ ಮುಂದಿನ ಹಲವು ದಿನಗಳ ಕಾಲ ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ ಎನ್ನುವ ಮುನ್ಸೂಚನೆ ನೀಡಿದೆ.

ಈಗಾಗಲೇ ಅವಧಿಗೂ ಮುಂಚಿತವಾಗಿ ರಾಜ್ಯಕ್ಕೆ ಮುಂಗಾರು ಎಂಟ್ರಿ ಕೊಟ್ಟಿದ್ದು, ಹಲವು ಜಿಲ್ಲೆಗಳಲ್ಲಿ ದೊಡ್ಡ ದೊಡ್ಡ ಅವಾಂತರಗಳೇ ಸೃಷ್ಟಿಯಾಗಿದೆ. ಹಾಗೆಯೇ ಇಂದು ಸಹ ಹಲವು ಭಾಗಗಳಲ್ಲಿ ಭಾರೀ ಮಳೆ ಮುಂದುವರೆಯುವ ಮುನ್ಸೂಚನೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ರೆಡ್ ಅಲರ್ಟ್ ಘೋಷಣೆ ಮಡಲಾಗಿದೆ.
ರೆಡ್, ಆರೆಂಜ್ ಅಲರ್ಟ್ ಘೋಷಣೆ: ರಾಜ್ಯದಲ್ಲಿ ಮುಂದಿನ ಒಂದು ವಾರ ವ್ಯಾಪಕವಾಗಿ ಮಳೆ ಸುರಿಯುವ ಸಾಧ್ಯತೆಯಿದೆ. ಮತ್ತೊಂದೆಡೆ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನೆಲೆ ರಾಜ್ಯದ ಕರಾವಳಿ, ದಕ್ಷಿಣ ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮೇ 28ರ ವರೆಗೆ ವ್ಯಾಪಕವಾಗಿ ಧಾರಾಕಾರ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಭಾರೀ ಮಳೆ ಮುಂದುವರೆಯುವ ಮುನ್ಸೂಚನೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಇಂದು (ಮೇ 26) ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ನೀಡಲಾಗಿದೆ. ಧಾರವಾಡ, ಗದಗ, ಹಾವೇರಿ, ಹಾಸನ, ಮೈಸೂರು ಜಿಲ್ಲೆಗೆ ಯೆಲ್ಲೊಅಲರ್ಟ್ ಘೋಷಣೆ ಮಾಡಲಾಗಿದೆ.
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆ ಮುಂದುವರೆದಿದ್ದು, ದೊಡ್ಡ ದೊಡ್ಡ ಅವಾಂತರಗಳೇ ಸೃಷ್ಟಿಯಾಗಿವೆ. ಅದರಲ್ಲೂ ಈ ಬಾರಿ ಅವಧಿಗೂ ಮುನ್ನ ಮುಂಗಾರು ಎಂಟ್ರಿ ಒಂದು ಕಡೆಯಾದ್ರೆ, ಮತ್ತೊಂದೆಡೆ ಅರಬ್ಬೀ ಸಮುದ್ರದಲ್ಲಿನ ವಾಯುಭಾರ ಕುಸಿತ ರಾಜ್ಯಕ್ಕೆ ತುಂಬಾ ಹೊಡೆತ ಕೊಡುತ್ತಿದೆ. ಮುಂದಿನ ದಿನಗಳಲ್ಲಿ ಇನ್ನೇನು ಕಾದಿದೆಯೋ ಎನ್ನುವ ಆತಂಕದಲ್ಲಿ ನದಿ ತೀರ ಪ್ರದೇಶಗಳ ಜನರ ಚಿಂತೆಯಾಗಿದೆ.
ಕಳೆದ ಬಾರಿ ಅಂದರೆ, 2024ರ ಜೂನ್ ಆರಂಭದಲ್ಲಿ ಮುಂಗಾರು ಕೇರಳಕ್ಕೆ ಎಂಟ್ರಿ ಕೊಟ್ಟು ಬಳಿಕ ಕರ್ನಾಟಕಕ್ಕೆ ಆಗಮಿಸಿ ದೊಡ್ಡ ಅವಾಂತರಗಳನ್ನ ಸೃಷ್ಟಿಸಿತ್ತು. ಬಳಿಕ ದೇಶದ ಎಲ್ಲಾ ಕಡೆಗಲೀಗೂ ಮುಂಗಾರು ಆವರಿಸಿಕೊಂಡಿತು. ಉತ್ತರ ಭಾರತದ ರಾಜ್ಯಗಳು ಸೇರಿದಂತೆ ದಕ್ಷಿಣ ಭಾರತದಲ್ಲಿಯೂ ಕಂಡು ಕೇಳರಿರಿಯದ ಮಳೆಯಾಗಿತ್ತು. ಈ ಹಿನ್ನೆಲೆ ಕೆರೆ-ಕಟ್ಟೆಗಳು, ನದಿಗಳು ಸೇರಿದಂತೆ ಪ್ರಮುಖ ಜಲಾಶಯಗಳು ತುಂಬಿ ಹರಿದಿದ್ದವು. ಇದರಿಂದ ರೈತರ ಮುಖದಲ್ಲಿ ಮಂದಹಾಸ ಹೆಚ್ಚಾದಂತಾಗಿತ್ತು.
ಮತ್ತೊಂದೆಡೆ ನೋಡೋದಾದ್ರೆ ಅವಾಂತರಗಳೇ ಸೃಷ್ಟಿಯಾಗಿ ಪ್ರಾಣಹಾನಿಗಳು ಕೂಡ ಸಂಭವಸಿದ್ದವು. ಇನ್ನೂ ಈ ಬಾರಿ ಅಂದರೆ 2025ರಲ್ಲಿ ಅವಧಿಗೂ ಮುನ್ನವೇ ಮುಂಗಾರು ಪ್ರವೇಶಿಸಿದ್ದು, ಕರ್ನಾಕದ ಹಲವು ಜಿಲ್ಲೆಗಳಲ್ಲಿ ಅವಾಂತರಗಳನ್ನು ಸೃಷ್ಟಿಸಿದೆ. ಇನ್ನೂ ಮುಂದಿನ ದಿನಗಳಲ್ಲಿ ಮಳೆ ಹೀಗೆ ಮುಂದುವರೆದರೆ, ಇನ್ನೇನು ಕಾದಿದೆಯೋ ಎನ್ನುವ ಚಿಂತೆ ರಾಜ್ಯದ ಜನರದ್ದಾಗಿದೆ.












Click it and Unblock the Notifications