Karnataka Rains: ರಾಜ್ಯದ ಈ ಜಿಲ್ಲೆಗಳಲ್ಲಿ ಕೆಲವೇ ಕ್ಷಣಗಳಲ್ಲಿ ಸುರಿಯಲಿದೆ ರಣಮಳೆ-ಐಎಂಡಿ ಅಲರ್ಟ್‌

Karnataka Rain: ರಾಜ್ಯಕ್ಕೆ ಜೂನ್‌ ಆರಂಭದಿಂದಲೇ ಮುಂಗಾರು ಎಂಟ್ರಿ ಕೊಟ್ಟಿದ್ದು, ಈಗಾಗಲೇ ಮಳೆರಾಯ ಹಲವೆಡೆ ಸಾಕಷ್ಟು ಅವಾಂತರಗಳನ್ನು ಸೃಷ್ಟಿಸಿದ್ದಾರೆ. ಹಾಗೆಯೇ ಇಂದು (ಜೂನ್‌ 09) ಈ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆರಾಯನ ಆರ್ಭಟ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶವನ್ನು ರವಾನಿಸಿದೆ. ಹಾಗಾದರೆ ಎಲ್ಲೆಲ್ಲಿ ಮಳೆಯಾಗಲಿದೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ತಿಳಿಯಿರಿ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ (ಜೂನ್‌ 8) ಮೋಡ ಕವಿದ ವಾತಾವರಣ ನಿರ್ಮಾಣವಾಗಿದ್ದು, ಕೆಲವೆಡೆ ಮಾತ್ರ ಜಿನುಗು ಮಳೆಯಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಇನ್ನು ಇಂದು (ಜೂನ್‌ 09) ನಗರದಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎನ್ನುವ ಮುನ್ಸೂಚನೆ ಇದೆ.

Karnataka Rain Heavy rain forecast in these districts in few moments June 09 weather report

ಈಗಾಗಲೇ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಬಾಗಲಕೋಟೆ, ಕೊಡಗು, ಹಾಸನ, ಚಿಕ್ಕಮಗಳೂರು, ಹುಬ್ಬಳ್ಳಿ, ಧಾರವಾಡ, ಬೆಳಗಾವಿ ಸೇರಿದಂತೆ ಹಲವು ಜಿಲ್ಲಗಳಲ್ಲಿ ಮಳೆರಾಯ ಅವಾಂತರಗಳನ್ನೇ ಸೃಷ್ಟಿಸಿದ್ದು, ಇಂದು ಕೂಡ ಹಲವೆಡೆ ರಣಾರ್ಭಟ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ವಿಜಯಪುರ, ಹಾವೇರಿ, ಧಾರವಾಡ, ಗದಗ, ಕಲಬುರಗಿ, ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳ ಕೆಲವು ಭಾಗಗಳಲ್ಲಿ ಪ್ರತ್ಯೇಕವಾಗಿ ಅಲ್ಲಲ್ಲಿ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ. ಹಾಗೆಯೇ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕಾರವಾರದಲ್ಲಿ ಗುಡುಗು ಸಹಿತ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ರವಾನಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+