Karnataka Rains: ಕೆಲವೇ ಕ್ಷಣಗಳಲ್ಲಿ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ

Karnataka Rains: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆರಾಯನ ಆರ್ಭಟ ಮುಂದುವರೆದಿದ್ದರೆ, ಇನ್ನು ಕೆಲವು ಜಿಲ್ಲೆಗಳಲ್ಲಿ ಮಳೆ ಅಬ್ಬರ ಕಡಿಮೆಯಾಗಿದೆ. ಮತ್ತೊಣಂದೆಡೆ ಇಂದು (ಆಗಸ್ಟ್‌ 04) ಇನ್ನೂ ಕೆಲವೇ ಕ್ಷಣಗಳಲ್ಲಿ ಈ ಭಾಗಗಳಲ್ಲಿ ಭಾರೀ ಮಳೆ ಸುರಿಯಲಿದೆ ಎನ್ನುವ ಮುನ್ಸೂಚನೆ ಇದೆ. ಮಾಹಿತಿ ಇಲ್ಲಿದೆ ತಿಳಿಯಿರಿ.

ಈಗಾಗಲೇ ಭಾರೀ ಮಳೆಯಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕೆರೆ-ಕಟ್ಟೆ, ನದಿಗಳು ಅಪಾಯದ ಮಟ್ಟದಲ್ಲಿ ತುಂಬಿ ಹರಿಯುತ್ತಿವೆ. ಮತ್ತೊಂದೆಡೆ ಹಲವಯ ಜಲಾಶಯಗಳು ಭರ್ತಿಯಾಗಿ ಹೆಚ್ಚಾದ ನೀರನ್ನು ನದಿಗಳಿಗೆ ಹರಿಸಲಾಗಿದೆ. ಹಾಗೆಯೇ ಇನ್ನು ಕೆಲವು ಡ್ಯಾಂಗಳು ತುಂಬುವ ಹಂತವನ್ನು ತಲುಪಿವೆ.

Karnataka Rains Heavy rain forecast in these districts in few moments on August 4th

ಮಳೆರಾಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಬೆಳಗಾವಿ, ಕೊಡಗು ಜಿಲ್ಲೆಗಳಲ್ಲಿ ಈಗಾಗಲೇ ಅವಾಂತರಗಳನ್ನೇ ಸೃಷ್ಟಿಸಿದ್ದಾನೆ. ಹಾಗೆಯೇ ಇನ್ನು ಕೆಲವೇ ಕ್ಷಣಗಳಲ್ಲಿ ಚಿಕ್ಕಮಗಳೂರು, ಶಿವಮೊಗ್ಗ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಹಾಸನ, ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎನ್ನುವ ಮುನ್ಸೂಚನೆ ಇದೆ.

ಮತ್ತೊಂದೆಡೆ ಮೈಸೂರು, ದಾವಣಗೆರೆ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು, ಬೀದರ್‌, ಕೊಪ್ಪಳ, ಕಲಬುರಗಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎನ್ನುವ ಮುನ್ಸೂಚನೆ ಇದೆ.

ರಾಜ್ಯದ ವೈದ್ಯರಿಂದ ತುರ್ತು ಸೇವೆ: ಈಗಾಗಲೇ ಕೇರಳದ ವಯನಾಡಿನಲ್ಲಿ ಭೂಕುಸಿತದಿಂದ ಅಪಾರ ಪ್ರಮಾಣದ ಹಾನಿ ಉಂಟಾಗಿದೆ. ಇನ್ನು ಇದೀಗ ಕೇರಳದ ವಯನಾಡು ಭೂ ಕುಸಿತ ದುರಂತದಲ್ಲಿ ಸಿಲುಕಿದ್ದವರಿಗೆ ರಾಜ್ಯದಿಂದ ಆರೋಗ್ಯ ನೆರವು ಸಿಕ್ಕಿದ್ದು, ಚಾಮರಾಜನಗರ ಮತ್ತು ಮೈಸೂರು ವೈದ್ಯರು ಕೇರಳದಲ್ಲಿ ತುರ್ತು ವೈದ್ಯಕೀಯ ಸೇವೆ ಸಲ್ಲಿಸುತ್ತಿದ್ದಾರೆ.

ಕೇರಳ ವಯನಾಡು ಗುಡ್ಡ ಕುಸಿತ ಸಂಬಂಧ ತುರ್ತು ಆರೋಗ್ಯ ಸೇವೆಗಾಗಿ ರಾಜ್ಯದಿಂದ 13 ಮಂದಿ ವೈದ್ಯರ ತಂಡವನ್ನು ನಿಯೋಜನೆ ಮಾಡಲಾಗಿದ್ದು, ಬುಧವಾರದಿಂದಲೇ ವೈದ್ಯರು ಸೇವೆ ಸಲ್ಲಿಸುತ್ತಿದ್ದಾರೆ‌.

ಗುಂಡ್ಲುಪೇಟೆ ಟಿಎಚ್‍ಓ ಡಾ.ಅಲೀಂ ಪಾಷಾ ನೇತೃತ್ವದಲ್ಲಿ ಚಾಮರಾಜನಗರದಿಂದ ಡಾ.ಮಹೇಶ್, ಡಾ.ತ್ರಿವೇಣಿ, ಡಾ.ಶ್ರೀಧರ್, ಡಾ.ಟೀನಾ, ಡಾ.ರಾಜು, ಡಾ.ಸಂದೀಪ್, ಮಹದೇವಸ್ವಾಮಿ, ಬಸವೇಗೌಡ ಹಾಗೂ ಮೈಸೂರು ಜಿಲ್ಲೆಯಿಂದ ಡಾ.ನಾಗೇಶ್ವರರಾವ್, ಡಾ.ಶ್ರೀನಿವಾಸ್, ಡಾ.ಶೇಷಾದ್ರಿ, ಉಮೇಶ್ ಬಾಬು ಸೇರಿದಂತೆ ಒಟ್ಟು 13 ಮಂದಿಯನ್ನು ಮೈಸೂರು ವಿಭಾಗೀಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಹಾಯಕ ನಿದೇರ್ಶಕರು ತುರ್ತು ಸೇವೆಗೆ ನಿಯೋಜನೆ ಮಾಡಿದ್ದಾರೆ.

ಗುಂಡ್ಲುಪೇಟೆ ಟಿಎಚ್‍ಓ ಡಾ.ಅಲೀಂ ಪಾಷಾ ನೇತೃತ್ವದ ತಂಡ ಕಲ್ಪೆಟ್ಟ ಸಾರ್ವಜನಿಕ ಆಸ್ಪತ್ರೆಯಲ್ಲಿ ಮೊಕ್ಕಾಂ ಹೂಡಿದೆ.
ವಯನಾಡಿನ ಮೆಪ್ಪಾಡಿಯ ಡಾ.ಮೂಪಾನ್ಸ್ ಮೆಡಿಕಲ್ ಕಾಲೇಜಿಗೆ ಇತರೆ ವೈದ್ಯರು ಗುರುವಾರ ಬೆಳಗ್ಗೆ ಭೇಟಿ ನೀಡಿ, ಅಲ್ಲಿಯ ವೈದ್ಯರ ತಂಡದ ಜೊತೆಗೆ ಸಮಾಲೋಚನೆ ನಡೆಸುವ ಜೊತೆಗೆ ಆಸ್ಪತ್ರೆಯ ವಿವಿಧ ವಾರ್ಡ್‍ಗಳಲ್ಲಿ ದಾಖಲಾದ ರೋಗಿಗಳಿಗೆ ಚಿಕಿತ್ಸೆ ನೀಡುವ ಕೆಲಸ ಮಾಡಿದ್ದಾರೆ. ಜೊತೆಗೆ ಕಾಳಜಿ ಕೇಂದ್ರಗಳಿಗೂ ತೆರಳಿ ವೈದ್ಯಕೀಯ ಸೇವೆ ಸಲ್ಲಿಸುತ್ತಿದ್ದಾರೆ.

ಕೇರಳ ರಾಜ್ಯದ ಮೇಪಾಡಿ ಗ್ರಾಮದಲ್ಲಿರುವ ಸೇಂಟ್‌ ಜೋಸೆಫ್‌ ಹೈಸ್ಕೂಲಿನಲ್ಲಿ ತೆರೆದಿರುವ ಕಾಳಜಿ ಕೇಂದ್ರದಲ್ಲಿ ಇರುವ ಗುಂಡ್ಲುಪೇಟೆ ಮತ್ತು ಚಾಮರಾಜನಗರ ತಾಲ್ಲೂಕಿಗೆ ಸಂಬಂದಪಟ್ಟ 10 ಮಂದಿಯನ್ನು ಟೆಂಪೋ ಟ್ರಾವೆಲ್‌ ವಾಹನದ ಮೂಲಕ ಕರೆದುಕೊಂಡು ಬರಲಾಗಿದೆ. ಬಳಿಕ ಗುಂಡ್ಲುಪೇಟೆ ತಾಲ್ಲೂಕಿನ ಕೋಡಹಳ್ಳಿ ಗ್ರಾಮ ಮತ್ತು ಚಾಮರಾಜನಗರ ತಾಲ್ಲೂಕು ಕೇಂದ್ರಕ್ಕೆ ನಿರಾಶ್ರಿತರನ್ನು ಬಿಡಲು ವ್ಯವಸ್ಥೆ ಮಾಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+