Karnataka Rains: ರಾಜ್ಯದ ಈ ಜಿಲ್ಲೆಗಳಲ್ಲಿ ಇನ್ನೂ ಕೆಲವೇ ಕ್ಷಣಗಳಲ್ಲಿ ಅಬ್ಬರದ ಮಳೆ ಮುನ್ಸೂಚನೆ

Karnataka Rains: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇದೀಗ ಮಳೆರಾಯನ ಆರ್ಭಟ ಕಡಿಮೆಯಾಗಿದ್ದು, ಕೆಲವು ಜಿಲ್ಲೆಗಳಲ್ಲಿ ಮಾತ್ರ ಮಳೆ ದಿನದಿಂದ ದಿನಕ್ಕೆ ಚುರುಕು ಪಡೆಯುತ್ತಲೇ ಇದೆ. ಹಾಗೆಯೇ ಇನ್ನೂ ಕೆಲವೇ ಕ್ಷಣಗಳಲ್ಲಿ ಈ ಭಾಗಗಳಲ್ಲಿ ಮಾತ್ರ ಅಬ್ಬರದ ಮಳೆ ಸುರಿಯಲಿದೆ ಎನ್ನುವ ಮುನ್ಸೂಚನೆ ಇದೆ. ಮಾಹಿತಿ ಇಲ್ಲಿದೆ ತಿಳಿಯಿರಿ.

ಈಗಾಗಲೇ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಬೆಳಗಾವಿ, ಕೊಡಗು ಜಿಲ್ಲೆಗಳಲ್ಲಿ ಮಳೆರಾಯ ಅವಾಂತಾರಗಳನ್ನೇ ಸೃಷ್ಟಿಸಿದ್ದಾನೆ. ಇನ್ನು ಧಾರವಾಡ, ದಾವಣಗೆರೆ, ಚಾಮರಾಜನಗರ, ಬೆಂಗಳೂರು, ಬೀದರ್‌ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಿದೆ.

Karnataka Rains Heavy rain forecast in these districts in few moments on july 29th

ಇಂದು (ಜುಲೈ 29) ಇನ್ನೂ ಕೆಲವೇ ಕ್ಷಣಗಳಲ್ಲಿ ಬೆಳಗಾವಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅಬ್ಬರದ ಮಳೆಯಾಗಲಿದ ಎನ್ನುವ ಮುನ್ಸೂಚನೆ ಇದೆ. ಮತ್ತೊಂದೆಡೆ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಕೊಡಗು, ದಾವಣಗೆರೆ, ಬೀದರ್‌ ಸೇರಿದಂತೆ ಹಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎನ್ನುವ ಮುನ್ಸೂಚನೆ ಇದೆ.

ಈಗಾಗಲೇ ಭಾರೀ ಮಳೆಯಿಂದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು, ಬೆಳಗಾವಿ ಜಿಲ್ಲೆಗಳ ಹಲವೆಡೆ ಪ್ರವಾಹದ ವಾತಾವರಣ ನಿರ್ಮಾಣವಾಗಿದೆ. ಅಲ್ಲದೆ, ಈ ಪೈಕಿ ಬೆಳಗಾವಿ ಜಿಲ್ಲೆ ಜನರು ಮಳೆ ಒಂದು ವಾರವಾದರೂ ನಿಲ್ಲಲಿ ಎಂದು ದೇವರ ಮೊರೆಹೋದ ಘಟನೆಗಳು ನಡೆದಿದ್ದವು. ಒಟ್ಟಿನಲ್ಲಿ ಕಳೆದ ವರ್ಷದ ಬರವನ್ನು ಈ ಬಾರಿ ಸುರಿದ ಮುಂಗಾರು ಮಳೆ ನೀಗಿಸಿದೆ ಎಂದರೆ ತಪ್ಪಾಗಲಾರದು.

ಹುಚ್ಚಾಟ ಮೆರೆದ ಪ್ರವಾಸಿಗರಿಗೆ ಬಸ್ಕಿ ಹೊಡೆಸಿದ ಪೊಲೀಸರು: ಈಗಾಲೇ ಭಾರೀ ಮಳೆಯಿಂದ ಹಲವು ಜಿಲ್ಲೆಗಳಲ್ಲಿ ಜಲಮೂಲಗಳು ಉಕ್ಕಿ ಹರಿಯುತ್ತಿದ್ದು, ಈ ಅದ್ಭುತ ದೃಶ್ಯಗಳನ್ನು ಸವಿಯಲು ಪ್ರವಾಸಿಗರ ದಂಡೇ ಹರಿದುಬರುತ್ತಿದೆ. ಅಲ್ಲಿ ಕೆಲವರು ಇಂತಹ ತಾಣಗಳಲ್ಲಿ ಹುಚ್ಚಾಟ ಮೆರೆದು ಸಂಕಷ್ಟಕ್ಕೆ ಸಿಲುಕಿರುವ ಉದಾಹರಣೆಗಳಿವೆ. ಅಂತಹದ್ದೇ ಘಟನೆ ಇದೀಗ ಭರಚಿಕ್ಕಿ ಜಲಪಾತದ ಬಳಿ ನಡೆದಿದೆ.

ಕಾವೇರಿ ಹೊರಹರಿವು ಹೆಚ್ಚಾಗಿರುವ ಹಿನ್ನೆಲೆ ಕೊಳ್ಳೇಗಾಲದ ಭರಚುಕ್ಕಿ ಜಲಪಾತ ಮೈ ದುಂಬಿ ಹರಿಯುತ್ತಿದ್ದು, ಈ ಮೂಲಕ ಮನಮೋಹಕ ಜಲಸಿರಿ ಸೃಷ್ಟಿಯಾಗಿದೆ. ಈ ಜಲವೈಯ್ಯಾರ ಕಾಣಲು ಪ್ರವಾಸಿಗರ ದಂಡೇ ಹರಿದು ಬರುತ್ತಿದ್ದು, ಹಲವರು ಫೋಟೋಗಾಗಿ ಹುಚ್ಚಾಟವನ್ನು ಮೆರೆಯುತ್ತಿದ್ದಾರೆ. ಇನ್ನು ಭರಚುಕ್ಕಿ ಜಲಪಾತದ ತುದಿಗೆ ತೆರಳಿ ಸೆಲ್ಫಿ ಕ್ಲಿಕ್ಕಿಸಿಕೊಳ್ಳುವ ಹುಚ್ಚಾಟ ಮೆರೆಯುತ್ತಿದ್ದವರಿಗೆ ಪೊಲೀಸರು ಬಸ್ಕಿ ಹೊಡೆಸಿ ಪಾಠ ಕಲಿಸಿದ ಘಟನೆ ನಡೆದಿದೆ.

ಭರಚುಕ್ಕಿ ಜಲಪಾತದ ನೀರು ಧುಮ್ಮಿಕ್ಕುವ ಹಿಂಭಾಗಕ್ಕೆ ಬಂದು ಫೋಟೋ ಕ್ರೇಜ್‌ಗಾಗಿ ಅಪಾಯಕಾರಿ ಸ್ಥಳದಲ್ಲಿ ಕೆಳಗಿಳಿಯುತ್ತಿದ್ದ ಮಾಹಿತಿ ಅರಿತ ಕೊಳ್ಳೇಗಾಲ ಗ್ರಾಮಾಂತರ ಠಾಣೆ ಪೊಲೀಸರು ಯುವಕರನ್ನು ಹಿಂದಕ್ಕೆ ಕರೆಸಿ ಬಸ್ಕಿ ಹೊಡೆಸಿದ್ದಾರೆ. ಬಳಿಕ ಒಂದು ಫೋಟೋಗಾಗಿ ಜೀವಕ್ಕೆ ಅಪಾಯ ತಂದುಕೊಳ್ಳಬೇಡಿ ಎಂದು 15ಕ್ಕೂ ಹೆಚ್ಚು ಯುವಕರಿಗೆ ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+