Karnataka Rains: ಕೆಲವೇ ಕ್ಷಣಗಳಲ್ಲಿ ರಾಜ್ಯದ ಈ ಜಿಲ್ಲೆಗಳಲ್ಲಿ ಮಳೆ ಮತ್ತಷ್ಟು ಚುರುಕು ಪಡೆಯುವ ಮುನ್ಸೂಚನೆ-ರೆಡ್ ಅಲರ್ಟ್
Karnataka Rains: ಪಕ್ಕದ ರಾಜ್ಯ ಕೇರಳದ ವಯನಾಡಿನಲ್ಲಿ ಭೂಕುಸಿತ ಉಂಟಾಗಿದ್ದು, ಪರಿಣಾಮ ದೊಡ್ಡ ದೊಡ್ಡ ಅವಾಂತರಗಳೇ ಸೃಷ್ಟಿಯಾಗಿವೆ. ಇನ್ನು ಎರಡು ದಿನಗಳ ಕಾಲ ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ ವಯನಾಡಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಇದರ ಪ್ರಭಾವ ಕರ್ನಾಟಕದ ಹಲವು ಜಿಲ್ಲೆಗಳ ಮೇಲೂ ಬೀರಲಿದೆ ಎನ್ನುವ ಎಚ್ಚರಿಕೆ ಸಂದೇಶವನ್ನು ರವಾನಿಸಿದೆ. ಹಾಗೆಯೇ ರಾಜ್ಯದ ಮಲೆನಾಡು, ಕರಾವಳಿ ಜಿಲ್ಲೆಗಳಿಗೂ ರೆಡ್ ಅಲರ್ಟ್, ಉಡುಪಿಗೆ ಆರೆಂಜ್ ಅಲರ್ಟ್ ಅನ್ನು ಹವಾಮಾನ ಇಲಾಖೆ ಘೋಷಣೆ ಮಾಡಿದೆ.
ಕೇರಳದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಇನ್ನೂ ಕೂಡ ಏನೆಲ್ಲಾ ಅನಾಹುತಗಳು ಸಂಭವಿಸುತ್ತವೆಯೇ ಎನ್ನುವ ಆತಂಕದಲ್ಲಿ ಈ ಭಾಗದ ಜನರಿದ್ದಾರೆ. ಇನ್ನು ಇದರ ಪ್ರಭಾವ ಕರ್ನಾಟಕದ ಮೈಸೂರು, ಕೊಡಗು ಜಿಲ್ಲೆಗಳ ಮೇಲೂ ಬೀರುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೆ, ಕರ್ನಾಟಕದಲ್ಲಿ ರಾಜ್ಯದಲ್ಲಿ ಇನ್ನೂ ಎರಡು ಭಾರೀ ಮಳೆಯಾಗಲಿದೆ ಎಂದು ತಿಳಿಸಿದೆ.

ಅದರಲ್ಲೂ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರೀ ಮಳೆಯಾಗುವ ಮುನ್ಸೂಚನೆ ಹಿನ್ನೆಲೆ ರೆಡ್ ಅಲರ್ಟ್, ಉಡುಪಿ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಅಲ್ಲದೆ, ಈ ಮುಂಜಾಗ್ರತಾ ಕ್ರಮವಾಗಿ ವಿಧ್ಯಾರ್ಥಿಗಳ ಹಿತದೃಷ್ಟಿಯಿಂದ ಈ ಭಾಗದ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಈಗಾಗಲೇ ಕೇರಳದಂತೆ ಮಲೆನಾಡು ಭಾಗದಲ್ಲೂ ಕೂಡ ಭಾರೀ ಮಳೆ ಮುಂದುವರೆದ ಹಿನ್ನೆಲೆ ಬೆಟ್ಟ-ಗೊಡ್ಡ ಕುಸಿಯುತ್ತಿದ್ದು, ಈ ಭಾಗದ ಜನರು ಜೀವವನ್ನು ಕೈಯಲ್ಲಿ ಹಿಡಿದು ಜೀವನ ಸಾಗಿಸುವಂತಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಗೆ ಜುಲೈ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ನದಿಗಳಾದ ಕುಮಾರಧಾರಾ ಹಾಗೂ ನೇತ್ರಾವತಿ ನದಿ ಈಗಾಗಲೇ ಅಪಾಯದ ಮಟ್ಟದಲ್ಲು ತುಂಬಿ ಹರಿಯುತ್ತಿದ್ದು, ನೇತ್ರಾವತಿ ನದಿ ತೀರದ ಬಂಟ್ವಾಳ ತಾಲೂಕಿನ ಹಲವು ಗ್ರಾಮಗಳು ನೀರಿನಲ್ಲಿ ಮುಳುಗಿದ್ದು, ಈ ಭಾಗದ ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಇನ್ನು ಕರಾವಳಿ ಜಿಲ್ಲೆಗಳಾದ ಉಡುಪಿ ಹಾಗೂ ಉತ್ತರ ಕನ್ನಡಕ್ಕೆ ಜುಲೈ 31, ಆಗಷ್ಟ್ 1 ಹಾಗೂ 2ರಂದು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಚಿಕ್ಕಮಗಳೂರು, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಗಳಿಗೂ ಎರಡು ದಿನ ಆರೆಂಜ್ ಅಲರ್ಟ್ ನೀಡಲಾಗಿದೆ. ಇನ್ನು ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಆಗಷ್ಟ್ 3 & 4ರಂದು ಯೆಲ್ಲೋ ಅಲರ್ಟ್, ಕೊಡಗು, ಬೆಳಗಾವಿ ಜಿಲ್ಲೆಗಳಿಗೆ ಆಗಷ್ಟ್ 2ರಂದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಇಂದು (ಜುಲೈ 31) ಇನ್ನೂ ಕೆಲವೇ ಕ್ಷಣಗಳಲ್ಲಿ ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಬೆಳಗಾವಿ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯಲಿದೆ ಎನ್ನುವ ಮುನ್ಸೂಚನೆ ಇದೆ. ಇನ್ನು ಧಾವವಾಡ, ಬೀದರ್, ರಾಯಚೂರು, ಕಲಬುರಗಿ, ದಾವಣಗೆರೆ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಬೀಳಲಿದೆ ಎನ್ನುವ ಮುನ್ಸೂಚನೆ ಇದೆ. ಅಲ್ಲದೆ, ಈಗಾಗಲೇ ಈ ಭಾಗದ ಜನರಿಗೆ ಜಿಲ್ಲಾಡಳಿತಗಳು ಸುರಕ್ಷಿತ ಸ್ಥಳಕ್ಕೆ ತೆರಳುವಂತೆಯೂ ಮುನ್ಸೂಚನೆ ನೀಡಿವೆ.












Click it and Unblock the Notifications