Karnataka Rains: ಮುಂದಿನ 3 ಗಂಟೆಗಳಲ್ಲಿ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಎಚ್ಚರಿಕೆ
Karnaka Rains: ರಾಜ್ಯದಲ್ಲಿ ಈಗಾಗಲೇ ಮುಂಗಾರು ಆರ್ಭಟವನ್ನು ಶರು ಮಾಡಿದೆ. ಇನ್ನು ಇಂದು (ಜೂನ್ 08) ಮುಂದಿನ 3 ಗಂಟೆಗಳಲ್ಲಿ ಉಡುಪಿ, ಉತ್ತರ ಕನ್ನಡ ಸೇರಿದಂತೆ ಇಲ್ಲಿನ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬಿರುಗಾಳಿಯೊಂದಿಗೆ ತೀವ್ರ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶವನ್ನು ರವಾನಿಸಿದೆ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು (ಜೂನ್ 08) ಬೆಳಗ್ಗೆಯಿಂದಲೂ ಮೋಡ ಕವಿದ ವಾತಾವರಣ ನಿರ್ಮಾಣವಾಗಿದ್ದು, ಮಧ್ಯಾಹ್ನದ ಬಿಸಿಲಿನ ವಾತಾವರಣ ಮುಂದುವರೆದಿದೆ. ಇನ್ನು ಸಂಜೆ ವೇಳೆಗೆ ನಗರದಲ್ಲಿ ಮಳೆರಾಯ ಅಬ್ಬರಿಸಿ ಬೊಬ್ಬರೆಯಲಿದ್ದಾನೆ ಎನ್ನುವ ಮುನ್ಸೂಚನೆ ಇದೆ.
#ಮಳೆ #ಎಚ್ಚರಿಕೆ: ಮುಂದಿನ 3 ಗಂಟೆಗಳಲ್ಲಿ ಉಡುಪಿ, ಉತ್ತರ ಕನ್ನಡದ ಒಂದು ಅಥವಾ ಎರಡು ಸ್ಥಳಗಳಲ್ಲಿ ಮೇಲ್ಮೈ ಗಾಳಿಯೊಂದಿಗೆ ತೀವ್ರ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.#ಕೆಂಪುಅಲರ್ಟ್ ಘೋಷಣೆ.
— Karnataka State Natural Disaster Monitoring Centre (@KarnatakaSNDMC) June 8, 2024
ಮೂಲ: ಭಾ. ಹ. ಇ
Issued by : KSDMA
Validity Time : 08 Jun, 13:30 to 16:30
Alert generated through CAP-SACHET. #Nowcast pic.twitter.com/V27w9ny8dl

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೊಡಗು, ಚಿಕ್ಕಮಗಳೂರು, ಧಾರವಾಡ, ದಾವಣಗೆರೆ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಚಾಮರಾಜನಗರ, ಮೈಸೂರು ಸೇರಿದಂತೆ ಹಲವೆಡೆ ಮಳೆರಾಯ ಆರ್ಭಟಿಸುತ್ತಲೇ ಇದ್ದಾನೆ. ಹಾಗೆಯೇ ಇನ್ನು ಮೂರು ಗಂಟೆಗಳಲ್ಲಿ ಮತ್ತೆ ತನ್ನ ಆರ್ಭಟವನ್ನು ಮುಂದುವರೆಸಲಿದ್ದಾನೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶವನ್ನು ರವಾನಿಸಿದೆ.
ಜೂನ್ ಆರಂಭದಿಂದ ರಾಜ್ಯಕ್ಕೆ ಎಂಟ್ರಿ ಕೊಟ್ಟಿರುವ ಮುಂಗಾರು ಇದೀಗ ಮತ್ತಷ್ಟು ಚುರುಕು ಪಡೆದಿದೆ. ಭಾರೀ ಮಳೆ ಹಿನ್ನೆಲೆ ಹಲವೆಡೆ ಕೆರೆ-ಕಟ್ಟೆಗಳು ತುಂಬಿ ಹರಿಯುತ್ತಿವೆ. ಅಲ್ಲದೆ, ಬತ್ತಿಹೋಗುವ ಹಂತವನ್ನು ತಲುಪಿದ್ದ ಜಲಾಶಗಳಿಗೆ ಜೀವಕಳೆ ಬಂದಂತಾಗಿದ್ದು, ಒಳಹರಿವಿನ ಪ್ರಮಾಣ ಹೆಚ್ಚಾಗುತ್ತಲೇ ಇದೆ.












Click it and Unblock the Notifications