Karnataka Rains: ಬೆಂಗಳೂರು ಸೇರಿ ಕರ್ನಾಟಕದಲ್ಲಿ 6 ದಿನ ಭರ್ಜರಿ ಮಳೆ: ಐಎಂಡಿ ರಿಪೋರ್ಟ್!

Karnataka Rains: ಕರ್ನಾಟಕದ ವಿವಿಧ ಭಾಗದಲ್ಲಿ ಮಳೆ ಮುಂದುವರಿದಿದೆ. ವಾಯುಭಾರ ಕುಸಿತ ಹಾಗೂ ಮುಂಗಾರು ಪೂರ್ವ ಮಳೆ ಚುರುಕುಪಡೆದುಕೊಂಡ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಪಶ್ಚಿಮ ವಿದರ್ಭ ಮಾರ್ಗವಾಗಿ ಮನ್ನಾರ್ ಕೊಲ್ಲಿಯವರೆಗೆ ವಾಯುಭಾರ ಕುಸಿತ ಉಂಟಾಗಿದೆ. ಉತ್ತರ ಕೇರಳದ ಮಾರ್ಗವಾಗಿ ಮರಾಠವಾಡ, ಕರ್ನಾಟಕದ ಒಳನಾಡಿನಾದ್ಯಂತ ಸಮುದ್ರ ಮಟ್ಟದಿಂದ 1.5 ಕಿ.ಮೀ ಎತ್ತರದಲ್ಲಿದೆ ವಾಯುಭಾರ / ಚಂಡಮಾರುತ ಪರಿಚಲನೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಇದರ ಭಾಗವಾಗಿ ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಭಾಗದಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ಐಎಂಡಿ ರಿಪೋರ್ಟ್ ಹೇಳಿದೆ.

ಕರ್ನಾಟಕದಲ್ಲಿ ಮೇ 4ರ ವರೆಗೆ ಮಳೆ ಮುಂದುವರಿಯಲಿದೆ. ಗರಿಷ್ಠ ತಾಪಮಾನದಲ್ಲಿ ಮಹತ್ವದ ಬದಲಾವಣೆಗಳು ಇಲ್ಲ ಎಂದು ಹೇಳಲಾಗಿದೆ. ಆದರೆ ಕರಾವಳಿ ಸೇರಿದಂತೆ ವಿವಿಧ ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಉತ್ತರ ಕರ್ನಾಟಕ ಭಾಗದಲ್ಲೂ ಮಳೆಯಾಗುತ್ತಿದೆ. ಆದರೆ, ಕರ್ನಾಟಕದ ದಕ್ಷಿಣ ಭಾಗದಲ್ಲಿ ಮಳೆ ಪ್ರಮಾಣ ತುಸು ಇಳಿಕೆಯಾಗಿದೆ. ಉತ್ತರ ಕರ್ನಾಟಕ ಭಾಗದಲ್ಲಿ ಮುಂದಿನ 2 ದಿನದ ಅವಧಿಯಲ್ಲಿ ಗರಿಷ್ಠ ತಾಪಮಾನವು 2ರಿಂದ 3 ಡಿಗ್ರಿ ಸೆಲ್ಸಿಯಸ್‌ ಹೆಚ್ಚಾಗಲಿದೆ. ಇನ್ನು ಗರಿಷ್ಠ ತಾಪಮಾನದಲ್ಲಿ ಕರಾವಳಿ ಹಾಗೂ ದಕ್ಷಿಣ ಕರ್ನಾಟಕದ ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ವರೆಗೆ ಮಹತ್ವದ ಬದಲಾವಣೆ ಇಲ್ಲ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಇಂದಿನಿಂದ (ಏಪ್ರಿಲ್‌ 29) ಎಲ್ಲೆಲ್ಲಿ ಮಳೆಯಾಗಲಿದೆ ಎನ್ನುವುದನ್ನು ನೋಡೋಣ..

Karnataka Rains Heavy Rain in Karnataka 6 Days IMD Report

ಏಪ್ರಿಲ್‌ 29: ರಾಜ್ಯದ ವಿವಿಧ ಭಾಗದಲ್ಲಿ ಇಂದು ಮಳೆಯಾಗಲಿದೆ. ಕರಾವಳಿಯ ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲಿ ಇಂದು ಮಳೆಯಾಗಲಿದೆ. ಉತ್ತರ ಕನ್ನಡದಲ್ಲಿ ಒಣಹವೆ ಮುಂದುವರಿಯಲಿದೆ. ಇನ್ನು ಉತ್ತರ ಕರ್ನಾಟಕದ ಭಾಗದಲ್ಲಿ ಗಾಳಿಯ ವೇಗವು ಗಂಟೆಗೆ ಬರೋಬ್ಬರಿ 50-60 ಕಿ.ಮೀ ವೇಗದಲ್ಲಿ ಇರಲಿದೆ. ಬೆಳಗಾವಿ, ಧಾರವಾಡ, ಹಾವೇರಿ, ಗದಗ, ರಾಯಚೂರು, ಯಾದಗಿರಿ, ಕಲಬುರಗಿ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದೆ. ದಕ್ಷಿಣ ಕರ್ನಾಟಕ ಹಾಗೂ ಮಲೆನಾಡಿನಲ್ಲೂ ಮಳೆ ಮುಂದುವರಿಯಲಿದೆ. ಕೊಡಗು, ಚಿಕ್ಕಮಗಳೂರು, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ, ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಮಂಡ್ಯ, ತುಮಕೂರು ಮತ್ತು ಮೈಸೂರು ಜಿಲ್ಲೆಗಳಲ್ಲಿ ಮಿಂಚು - ಗುಡುಗು ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಏಪ್ರಿಲ್‌ 30: ಕರಾವಳಿಯ ಉಡುಪಿ & ಉತ್ತರ ಕನ್ನಡ ಭಾಗದಲ್ಲಿ ಮಳೆಯಾಗಲಿದೆ. ಉತ್ತರ ಕರ್ನಾಟಕದ ಕೊಪ್ಪಳ, ವಿಜಯಪುರ, ಕಲಬುರಗಿ ಹಾಗೂ ಗದಗ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ. ಗಂಟೆಗೆ 50-60 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ವಿವಿಧ ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಾಗಲಕೋಟೆ, ಬೀದರ್, ರಾಯಚೂರು, ಯಾದಗಿರಿ, ಹಾವೇರಿ ಹಾಗೂ ಧಾರವಾಡ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ.

ಮೇ 1ರಿಂದ ಮೇ 4: ಕರ್ನಾಟಕದ ವಿವಿಧ ಭಾಗದಲ್ಲಿ ಮೇ 1ರಿಂದ ಮೇ 4ರ ವರೆಗೆ ಮಳೆ ಮುಂದುವರಿಯಲಿದೆ. ಬೆಂಗಳೂರು ಸೇರಿದಂತೆ ದಕ್ಷಿಣ ಕರ್ನಾಟಕ, ಕರಾವಳಿ ಹಾಗೂ ಉತ್ತರ ಕರ್ನಾಟಕದ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಆಗಲಿದೆ. ಆಲಿಕಲ್ಲು ಸಹಿತ ಮಳೆಯಾಗುವ ಸಾಧ್ಯತೆಯೂ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉಳಿದಂತೆ ಗರಿಷ್ಠ ತಾಪಮಾನದಲ್ಲಿ ಯಾವುದೇ ಬದಲಾವಣೆ ಇಲ್ಲ. ಮೀನುಗಾರರಿಗೆ ಯಾವುದೇ ಮುನ್ಸೂಚನೆ ನೀಡಿಲ್ಲ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+