Karnataka Rains: ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ ನಾಲ್ಕೈದು ದಿನ ಗುಡುಗು ಸಹಿತ ಮಳೆ ಮುನ್ಸೂಚನೆ
Karnataka Rains: ಇದೀಗ ನಿಧಾನವಾಗಿ ಚಳಿಗಾಲ ಆವರಿಸುತ್ತಿದೆ. ಈ ನಡುವೆಯೇ ರಾಜ್ಯದ ಹಲವೆಡೆ ಮಳೆರಾಯ ಆರ್ಭಟಿಸುತ್ತಿದ್ದಾನೆ. ಹಾಗೆಯೇ ಮುಂದಿ ನಾಲ್ಕೈದು ಕಾಲ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ, ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು (ನವೆಂಬರ್ 9) ಬೆಳ್ಳಗ್ಗೆ ಚಳಿ ಇದ್ದು, 10 ಗಂಟೆ ಆಗುತ್ತಿದ್ದಂತೆ ಬಿರುಬಿಸಿಲು ಮುಂದುವರೆದಿದೆ. ಸಂಜೆ ವೇಳೆಗೆ ಮತ್ತೆ ಚಳಿ ಆವರಿಸಲಿದ್ದು, ಈ ನಡುವೆಯೇ ಹಲವೆಡೆ ಮಳೆಯಾದರೂ ಆಗಬಹುದು ಎನ್ನುವ ಮುನ್ಸೂಚನೆ ನೀಡಿದೆ. ಹಾಗೆಯೇ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮುಂದಿನ ಹಲವು ದಿನ ಮಳೆಯಾಗುವ ಸಾಧ್ಯೆತೆಯಿದೆ ಎಂದು ತಿಳಿಸಿದೆ.

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳವರೆಗೆ ಹಗುರದಿಂದ ಸಾಧಾರಣ ಮಳೆ ಸುರಿಯುವ ಸಾಧ್ಯತೆಯಿದೆ. ಅಲ್ಲದೆ, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದ ವ್ಯಾಪಕವಾಗಿ ಗುಡುಗು ಸಹಿತ ಬಿರುಗಾಳಿ ಬೀಸುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ಸಂದೇಶವನ್ನು ರವಾನೆ ಮಾಡಿದೆ.
ತಾಪಮಾನದಲ್ಲಿ ಗಮನಾರ್ಹ ಇಳಿಕೆ: ಹೆಚ್ಚಿನ ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲಿ ತಾಪಮಾನದಲ್ಲಿ ಭಾರೀ ಇಳಿಕೆಯಾಗುವ ಸಾಧ್ಯತೆಯಿದೆ. ಈಗಾಗಲೇ ಹಲವು ಭಾಗಗಳಲ್ಲಿ ತಾಪಮಾನದಲ್ಲಿ ಗಣನೀಯವಾಗಿ ಇಳಿಕೆಯಾಗಿದೆ. ಈ ನಡುವೆಯೇ ಹಲವೆಡೆ ಭಾರೀ ಮಳೆ ಸುರಿಯುವ ಸಾದ್ಯತೆಯಿದೆ ಅಂತಲೂ ಮುನ್ಸೂಚನೆ ನೀಡಿದೆ.
ಎಲ್ಲೆಲ್ಲಿ ಮಳೆ? ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಚಾಮರಾಜನಗರ, ಕೊಡಗು, ಚಿಕ್ಕಬಳ್ಳಾಪುರ, ಹಾವೇರಿ, ಗದಗ, ಧಾರವಾಡ ಸೇರಿ ಹಲವು ಜಿಲ್ಲೆಗಳಲ್ಲಿ ಮುಂದಿನ ನಾಲ್ಕೈದು ದಿನ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶವನ್ನು ರವಾನೆ ಮಾಡಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಶಿವಮೊಗ್ಗ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಬೆಳಗ್ಗೆ ಹಾಗೂ ಸಂಜೆ ವೇಳೆಗೆ ಚಳಿ ಇರಲಿದ್ದು, ಈ ನಡುವೆಯೇ ಹಲವೆಡೆ ಮಳೆಯಾಗುವ ಸಾಧ್ಯತೆಯಿದೆ ಅಂತಲೂ ಮುನ್ಸೂಚನೆ ನೀಡಿದೆ.
ಮುಂದಿನ ದಿನಗಳಲ್ಲಿ ಬಹುತೇಕ ಭಾಗಗಳಲ್ಲಿ ತಾಪಮಾನದಲ್ಲಿ ಗಮನಾರ್ಹವಾಗಿ ಕಡಿಮೆ ಆಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದೀಗ ಕರವಾಳಿ ಭಾಗಕ್ಕೆ ಭಾರೀ ಮಳೆಯಾಗುವ ಮುನ್ಸೂಚನೆ ಇದ್ದು, ಈ ಹಿನ್ನೆಲೆ ಮೀನುಗಾರರು ಆದಷ್ಟು ಎಚ್ಚರಿಕೆಯಿಂದ ಇರುವುದು ಒಳಿತು ಅಂತಲೂ ಮುಂಜಾಗ್ರತಾ ಕ್ರಮವಾಗಿ ಮುಮ್ಸೂಚನೆ ನೀಡಿದೆ. ಈಗಾಗಲೇ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಮುಂದುವರೆದಿದೆ. ಪರಿಣಾಮ ಅತೀವೃಷ್ಠಿಯಾಗಿ ಬೆಳೆಗಳು ನೆಲಸಮವಾಗಿರುವ ಘಟನೆಗಳು ನಡೆದಿವೆ. ಮತ್ತೊಂದೆಡೆ ಇದೀಗ ಚಳಿ ನಡುವೆಯೂ ಹಲವೆಡೆ ಮಳೆ ಮುಂದುವರೆದಿದೆ. ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಚಳಿ ಆವರಿಸಲಿದೆ ಎಂದು ಮುನ್ಸೂಚನೆ ನೀಡಿದೆ.












Click it and Unblock the Notifications