Karnataka Rains: ಚಂಡಮಾರುತ ಪರಿಣಾಮ ಬೆಂಗಳೂರು ಸೇರಿ ರಾಜ್ಯದ ಈ ಜಿಲ್ಲೆಗಳಲ್ಲಿ 5 ದಿನ ಭಾರೀ ಮಳೆ ಮುನ್ಸೂಚನೆ
Karnataka Rains: ರಾಜ್ಯದಲ್ಲಿ ಮತ್ತೆ ಮಳೆ ಆರ್ಭಟ ಮುಂದುವರೆದಿದೆ. ಇದೀಗ ಮೋಂಥಾ ಚಂಡಮಾರುತ ಪರಿಣಾಮ ಹಲವು ಭಾಗಗಳಲ್ಲಿ ಮುಂದಿನ 5 ದಿನಗಳ ಕಾಲ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ, ಎಲ್ಲೆಲ್ಲಿ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು (ಅಕ್ಟೋಬರ್ 31) ಮೋಡ ಕವಿದ ವಾತಾವರಣ ಇದ್ದು, ಮಧ್ಯಾಹ್ನ ಅಥವಾ ಸಂಜೆ ವೇಳೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಈಗಾಗಲೇ ನಗರದ ಹಲವೆಡೆ ಮಳೆಯಿಂದ ಅವಾಂತರಗಳೇ ಸೃಷ್ಟಿಯಾಗಿದೆ. ಹಾಗೆಯೇ ಚಂಡಮಾರುತ ಹಿನ್ನೆಲೆ ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎನ್ನುವ ಮುನ್ಸೂಚನೆ ಇದೆ.

ಈಗಾಗಲೇ ಮೋಂತಾ ಚಂಡಮಾರುತ ಪರಿಣಾಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಿದೆ. ಹಾಗೆಯೇ ಮುಂದಿನ ಐದು ದಿನಗಳ ಕಾಲ ಹಲವು ಭಾಗಗಳಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅದರಲ್ಲೂ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ಸಂದೇಶವನ್ನು ರವಾನೆ ಮಾಡಿದೆ.
ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಗುಡುಗು ಸಹಿತ ಮಳೆ ಬೀಳುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ.
ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬೀದರ್, ಕಲಬುರಗಿ, ಯಾದಗಿರಿ, ವಿಜಯಪುರ, ಬಾಗಲಕೋಟೆ, ರಾಯಚೂರು, ಕೊಪ್ಪಳ ಮತ್ತು ಗದಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಳೆದ ಒಂದು ವಾರದಿಂದ ಬಂಗಾಳಕೊಲ್ಲಿಯಲ್ಲಿ ಮೋಥಾ ಚಂಡಮಾರುತ ಪರಿಣಾಮ ಆಂಧ್ರಪ್ರದೇಶದ ಗಡಿಜಿಲ್ಲೆಗಳಲ್ಲಿ ಮಳೆಯಾಗಿದೆ. ಇನ್ನೂ ಇದೀಗ ಇದು ಅರಬ್ಬೀ ಸಮುದ್ರದವರೆಗೂ ವಿಸ್ತರಿಸಿದ್ದು, ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.
ಈ ಬಾರಿ ರಾಜ್ಯಕ್ಕೆ ಮುಂಗಾರು ಜೂನ್ ಆರಂಭದಲ್ಲೇ ಎಂಟ್ರಿ ಕೊಟ್ಟಿದ್ದು, ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿ ದೊಡ್ಡ ದೊಡ್ಡ ಅವಾಂತರಗಳೇ ಸೃಷ್ಟಿಯಾಗಿದೆ. ಕೆರೆ-ಕಟ್ಟೆಗಳು, ನದಿಗಳು ಅಪಾಯದ ಮಟ್ಟ ಮೀರಿ ಹರಿದು ಹವೆಡೆ ಬೆಳೆಗಳೆಲ್ಲ ಜವಾವೃತವಾಗಿವೆ. ಮತ್ತೊಂದೆಡೆ ಬಹುತೇಕ ಪ್ರಮುಖ ಜಲಾಶಯಗಳು ಭರ್ತಿಯಾಗಿದ್ದು, ಇದರಿಂದ ರೈತರ ಮುಖದಲ್ಲಿ ಮಂದಹಾಸ ಹೆಚ್ಚಾಗಿದೆ. ಕುಡಿಯುವ ಹಾಗೂ ನೀರಾವರಿ ನೀರಿನ ಕೊರತೆ ಎದುರಾಗದಂತಾಗಿದ್ದು, ಇದೇ ರೈತರ ಮುಖದಲ್ಲಿ ಮಂದಹಾಸವನ್ನು ಹೆಚ್ಚಾಗುವಂತೆ ಮಾಡಿದೆ. ಇದೀಗ ಚಂಡಮಾರುತ ಪರಿಣಾಮ ಹಲವು ಜಿಲ್ಲೆಗಳಲ್ಲಿ ಮತ್ತೆ ರಣಮಳೆ ಶುರುವಾಗಿದೆ. ಅರಬ್ಬೀ ಸಮುದ್ರದವರೆಗೂ ಚಂಡಮಾರುತದ ಅಲೆಗಳು ವಿಸ್ತರಿಸಿದ್ದು, ಕರವಾಳಿ ಜಿಲ್ಲೆಗಳ ಜನರಿಗೆ ಪ್ರವಾಹದ ಆತಂಕ ಎದುರಾಗಿದೆ. ಅಲ್ಲದೆ, ಈ ಭಾಗಗಳ ಜನರಿಗೆ ಎಚ್ಚರಿಕೆಯಿಂದ ಇರುವಂತೆ ಸೂಚನೆಯನ್ನೂ ಕೂಡ ನೀಡಲಾಗಿದೆ.












Click it and Unblock the Notifications