Karnataka Rains: ರಾಜ್ಯದ ಈ ಜಿಲ್ಲೆಗಳಲ್ಲಿ ಭೀಕರ ಚಳಿ ನಡುವೆ ಮುಂದಿನ 6 ದಿನ ಭಾರೀ ಮಳೆ ಮುನ್ಸೂಚನೆ
Karnataka Rains: ರಾಜ್ಯದ ಬಹುತೇಕ ಭಾಗಗಳಲ್ಲಿ ಇದೀಗ ಚಳಿ ಆವರಿಸಿಬಿಟ್ಟಿದೆ. ಈ ನಡುವೆಯೇ ಹಲವೆಡೆ ಮಳೆಯೂ ಆಗುತ್ತಿದೆ. ಹಾಗೆಯೇ ಮುಂದಿನ 6 ದಿನಗಳ ಕಾಲ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಭವಿಷ್ಯ ನುಡಿದಿದೆ. ಹಾಗಾದ್ರೆ ಎಲ್ಲೆಲ್ಲಿ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು (ನವೆಂಬರ್ 16) ಬೆಳಗ್ಗೆ ಮಂಜು ಮುಸುಕಿದ ವಾತಾವರಣ ಇದ್ದು, 9 ಗಂಟೆ ಆಗುತ್ತಿದ್ದಂತೆ ಬಿಸಿಲಿನ ವಾತಾವರಣ ಮುಂದುವರೆದಿದೆ. ಕೆಲವೆಡೆ ಮೋಡ ಕವಿದ ವಾತಾವರಣ ಇದ್ದು, ಮಳೆಯಾಗುವ ಸಾಧ್ಯತೆಯಿದೆ. ಹಾಗೆಯೇ ಮುಂದಿನ ಹಲವು ದಿನಗಳಲ್ಲಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆ ಸುರಿಯುವ ನಿರೀಕ್ಷೆಯಿದೆ ಎನ್ನುವ ಮುನ್ಸೂಚನೆ ಇದೆ.

ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮುಂದಿನ 6 ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ. ಅದರಲ್ಲೂ ಹಾಸನ, ಮೈಸೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಮೂಲಕ ಮತ್ತೆ ರಾಜ್ಯದಲ್ಲಿ ಮತ್ತೆ ಮಳೆರಾಯನ ಆರ್ಭಟ ಮುಂದುವರೆಯಲಿದೆ ಎಂದು ತಿಳಿಸಿದೆ.
ದಕ್ಷಿಣ ಒಳನಾಡಿದ ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು, ಕೊಡಗು, ದಾವಣಗೆರೆ, ಚಾಮರಾಜನಗರ ಸೇರಿ ಹಲವು ಜಿಲ್ಲೆಗಳಲ್ಲಿ ಇಂದಿನಿದ ಮಳೆಯಾಗುವ ಸಾಧ್ಯತೆಯಿದೆ ಹಾಗೆಯೇ ಕರಾವಾಳಿ ಭಾಗದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮಳೆರಾಯ ಆರ್ಭಟಿಸುವ ಸಾಧ್ಯತೆಯಿದೆ ಅಂತಲೂ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಇಂದು ಹಾಗೂ ನಾಳೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ಮುಂಗಾರು ಸಂಪೂರ್ಣ ತಗ್ಗಿದೆ. ಈ ಬಾರಿ ರಾಜ್ಯಕ್ಕೆ ಜೂನ್ ಆರಂಭದಲ್ಲೇ ಮುಂಗಾರು ಎಂಟ್ರಿ ಕೊಟ್ಟಿದ್ದು, ಬಹುತೇಕ ಜಿಲ್ಲೆಗಳಲ್ಲಿ ಅಬ್ಬರದ ಮಳೆಯಾಗಿದೆ. ಪರಿಣಾಮ ಕೆರೆ-ಕಟ್ಟೆಗಳು, ನದಿಗಳು, ಹಳ್ಳ-ಕೊಳ್ಳಗಳು, ಪ್ರಮುಖ ಜಲಾಶಯಗಳು ಭರ್ತಿಯಾಗಿವೆ. ಇದರಿಂದ ರೈತರ ಮುಖದಲ್ಲಿ ಮಂದಹಾಸ ಮನೆ ಮಾಡಿದೆ. ಮತ್ತೊಂದೆಡೆ ಅತಿವೃಷ್ಟಿಯಿಂದ ಬೆಳೆಗಳು ಹಾನಿಯಾದ ಘಟನೆಗಳು ಸಹ ನಡೆದಿವೆ.
ಇದೀಗ ರಾಜ್ಯದ ಹಲವು ಜಿಲ್ಲೆಗಳಲ್ಲಿ ಚಳಿ ವಾತಾವರಣ ನಿರ್ಮಾಣ ಆಗಿದೆ. ನವೆಂಬರ್ ತಿಂಗಳಾತ್ಯದಲ್ಲಿ ಚಳಿಗಾಲ ಆರಂಭ ಆಗಲಿದ್ದು, ಎಲ್ಲಾ ಜಿಲ್ಲೆಗಳಲ್ಲೂ ಚಳಿ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ವೇಳೆ ಜನರು ಆರೋಗ್ಯ ಸುರಕ್ಷತೆಯಿಂದ ಮುಂಜಾಗ್ರತಾ ಕ್ರಮವಾಗಿ ಹತ್ತಿಯಿಂದ ಮಾಡಲಾದ ಶ್ವೆಟ್ಟರ್, ಟೋಪಿಗಳನ್ನು ಧರಿಸುವುದು ಉತ್ತಮ ಅಂತಲೂ ಸಲಹೆ ನೀಡಲಾಗಿದೆ. ಅದರಲ್ಲೂ ಈ ವೇಳೆಯೇ ಮಕ್ಕಳಿಗೆ ಕೆಮ್ಮು, ಜ್ವರ, ನೆಗಡಿ ಇಂತಹ ಸಣ್ಣಪುಟ್ಟ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುವುದು ಹೆಚ್ಚು. ಆದ್ದರಿಂದ ಮಕ್ಕಳು ಮನೆಯಿಂದ ಹೊರಗಡೆ ಅಥವಾ ಶಾಲೆಗೆ ಹೋಗುವಾಗ ಅವರಿಗೆ ಶ್ವೆಟ್ಟರ್, ಟೋಪಿ ಹಾಕಿ ಕಳುಹಿಸುವುದು ಉತ್ತಮ.












Click it and Unblock the Notifications