Karnataka Rains: ರಾಜ್ಯದ ಈ ಜಿಲ್ಲೆಗಳಲ್ಲಿ ಒಂದು ವಾರ ರಣಭೀಕರ ಮಳೆ ಮುನ್ಸೂಚನೆ
Karnataka Rains: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆರಾಯನ ಆರ್ಭಟ ಮತ್ತೆ ಮುಂದುವರೆದಿದೆ. ಹಾಗೆಯೇ ಈ ಭಾಗಗಳಲ್ಲಿ ಮುಂದಿನ ಒಂದು ವಾರ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ ಎಲ್ಲೆಲ್ಲಿ ಮಳೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು (ಅಕ್ಟೋಬರ್ 4) ಬೆಳಗ್ಗೆ ವಾತಾವರಣ ಇದ್ದು, ಮಧ್ಯಾಹ್ನ ಅಥವಾ ಸಂಜೆ ವೇಳೆಗೆ ನಗರದ ಹಲವೆಡೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಭಾರೀ ಮಳೆಯಾಗುವ ಮುನ್ಸೂಚನೆ ಇದೆ.

ಈಗಾಗಲೇ ಭಾರೀ ಮಳೆಯಿಂದ ರಾಜ್ಯದಲ್ಲಿ ಕೆರೆ-ಕಟ್ಟೆ, ನದಿಗಳು, ಪ್ರಮುಖ ಜಲಾಶಯಗಳು ಭರ್ತಿಯಾಗಿವೆ. ಮತ್ತೊಂದೆಡೆ ಅಬ್ಬರದ ಮಳೆಯಿಂದಾಗಿ ಹಲವು ಜಿಲ್ಲೆಗಳಲ್ಲಿ ದೊಡ್ಡ-ದೊಡ್ಡ ಅವಾಂತರಗಳೇ ಸಂಭವಿಸಿವೆ. ಇದೀಗ ಮತ್ತೆ ಕಳೆದ ಕೆಲ ದಿನಗಳಿಂದ ಹಲವು ಜಿಲ್ಲೆಗಳಲ್ಲಿ ಮಳೆ ಮತ್ತೆ ಚುರುಕು ಪಡೆದಿದೆ. ಹಾಗೆಯೇ ಮುಂದಿನ ಹಲವು ದಿನಗಳ ಕಾಲ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.
ಬೆಂಗಳೂರು ಸೇರಿ ರಾಜ್ಯದಲ್ಲಿ ಮುಂದಿನ ವಾರ ಭಾರೀ ಮಳೆ ಆಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ ಮಳೆ ಹಿನ್ನೆಲೆ ರಾಜ್ಯದ ಹಲವು ಜಿಲ್ಲೆಗಳಿಗೆ ಇಂದು (ಅಕ್ಟೋಬರ್ 4) ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಂಗಳೂರು ಸೇರಿ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನು ಮಲೆನಾಡು ಜಿಲ್ಲೆಗಳು ಉತ್ತರ ಒಳನಾಡು, ದಕ್ಚಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.
ಭಾರೀ ಮಳೆ ಹಿನ್ನೆಲೆ ಇಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಹಾಸನ, ಕೊಡಗು, ಶಿವಮೊಗ್ಗ, ಹಾವೇರಿ, ಧಾರವಾಡ, ಬೆಳಗಾವಿ, ಗದಗ, ಚಿಕ್ಕಮಗಳೂರು, ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಇನ್ನು ಅಕ್ಟೋಬರ್ 5ರಂದು ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಬೆಳಗಾವಿ ಜಿಲ್ಲೆಗಳಿಗೆ ಮುಂಜಾಗ್ರತಾ ಕ್ರಮವಾಗಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಅಲ್ಲದೆ, ಮುಂದಿನ ಒಂದು ವಾರ ಮಲೆನಾಡು ಜಿಲ್ಲೆಗಳು, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶವನ್ನು ರವಾನೆ ಮಾಡಿದೆ. ಈಗಾಗಲೇ ಕಳೆದ ಕೆಲವು ದಿನಗಳಿಂದ ಕೆಲವಡೆ ಸಾಧಾರಣ ಮಳೆಯಾದರೆ, ಇನ್ನೂ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎನ್ನುವ ಮುನ್ಸೂಚನೆ ಇದೆ. ರಾಜ್ಯಕ್ಕೆ ವಾಡಿಕೆಯಂತೆ ಜೂನ್ ಆರಂಭದಲ್ಲೇ ಮುಂಗಾರು ಎಂಟ್ರಿ ಕೊಟ್ಟಿತ್ತು. ಭಾರೀ ಮಳೆಯಿಂದ ಜಲಮೂಲಗಳು ಭರ್ತಿಯಾಗಿದ್ದು, ರೈತರ ಮುಖದಲ್ಲಿ ಮಂದಹಾಸ ಮೂಡಿದೆ. ಮತ್ತೊಂದಡೆ ಉತ್ತರ ಕರ್ನಾಟಕ ಹಲವು ಭಾಗಗಳಲ್ಲಿ ಅತೀವೃಷ್ಠಿಯಿಂದ ಬೆಳೆಗಳು ಹಾನಿಯಾಗಿರುವ ಬಗ್ಗೆ ವರದಿಯಾಗಿದೆ.
-
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
IMD Weather Forecast: ದೇಶದ ಈ ಭಾಗಗಳಲ್ಲಿ ಮಾರ್ಚ್ ಅಂತ್ಯದಲ್ಲಿ ಭಾರೀ ಮಳೆ ಮುನ್ಸೂಚನೆ: ಐಎಂಡಿ ಎಚ್ಚರಿಕೆ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
Bengaluru Airport: ಮಳೆ ಅಬ್ಬರಕ್ಕೆ 30 ವಿಮಾನಗಳ ಮಾರ್ಗ ಬದಲು, ಏರ್ಪೋರ್ಟ್ ಟರ್ಮಿನಲ್ನಲ್ಲಿ ನೀರು ಸೋರಿಕೆ -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ












Click it and Unblock the Notifications