Karnataka Rains: ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಗುಡುಗು ಸಹಿತ ಮಳೆ ಮುನ್ಸೂಚನೆ

Karnataka Rains: ರಾಜ್ಯಗಳಲ್ಲಿ "ಮೋಂಥಾ" ಚಂಡಮಾರುತ ಪರಿಣಾಮ ಹಲವು ಜಿಲ್ಲೆಗಳಲ್ಲಿ ಈಗಾಗಲೇ ಭಾರೀ ಮಳೆಯಾಗಿದೆ. ಈಗಲೂ ಕೂಡ ಕೆಲವೆಡೆ ವರುಣನ ಆರ್ಭಟ ಮುಂದುವರೆದಿದೆ. ಹಾಗೆಯೇ ಮುಂದಿನ ಮೂರು ದಿನ ಬೆಂಗಳೂರು ಸೇರಿ ಈ ಭಾಗಗಳಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ ಎಲ್ಲೆಲ್ಲಿ ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ ನೋಡಿ.

ಈಗಾಗಲೇ ಶಕ್ತಿ ಹಾಗೂ ಮೋಂಥಾ ಚಂಡಮಾರುತಗಳ ವೇಳೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿತ್ತು. ಈಗಲೂ ಕೂಡ ಕೆಲವು ಭಾಗಗಳಲ್ಲಿ ಮಳೆರಾಯ ಬಿಟ್ಟುಬಿಡದೇ ಆರ್ಭಟಿಸುತ್ತಿದ್ದಾನೆ. ಹೀಗೆ ಕೆಲವು ಭಾಗಗಳಲ್ಲಿ ಮುಂದಿನ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎನ್ನುವ ಮುನ್ಸೂಚನೆ ಇದೆ.

Karnataka Rains Heavy Rain in these districts for Next Three Days From November 6

ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿಇಂದು (ನವೆಂಬರ್ 6) ಮಧ್ಯಾಹ್ಯ ಅಥವಾ ಸಂಜೆ ವೇಳೆಗೆ ಜಿನುಗು ಮಳೆಯಾಗುವ ಸಾಧ್ಯತೆಯಿದೆ. ಅಲ್ಲದೆ, ಮುಂದಿನ ಮೂರು ದಿನ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕೆಲವು ಭಾಗಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇದೇ ವೇಳೆ ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳ ಅಲ್ಲಲ್ಲಿ ಪ್ರತೇಕವಾಗಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಅಲ್ಲದೆ, ಬಳ್ಳಾರಿ, ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಜಿಲ್ಲೆಗಳ ಕೆಲವೆಡೆಯೂ ಗುಡುಗು ಸಹಿತ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ತಾಪಮಾನದ ವಿಚಾರಕ್ಕೆ ಬಂದರೆ, ಇಂದು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇದ್ದರೆ, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್‌ವರೆಗೂ ದಾಖಲಾಗುವ ಸಾಧ್ಯತೆಯಿದೆ. ಈ ನಡುವೆಯೂ ನಗರದ ಕೆಲವೆಡೆ ಮೋಡ ಕವಿದ ವಾತಾವರಣ ಇರಲಿದ್ದು, ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ. ಇದೀಗ ಸದ್ಯ ರಾಜ್ಯ ಬಹುತೇಕ ಜಿಲ್ಲೆಗಳಲ್ಲಿ ಚಳಿ ಆರಂಭವಾಗಿದೆ. ಈ ನಡುವೆಯೂ ಹಲವೆಡೆ ಮಳೆರಾಯ ಅಬ್ಬರಿಸಿ ಬೊಬ್ಬೆರೆಯುತ್ತಿದ್ದಾನೆ.

ಈ ಬಾರಿ ರಾಜ್ಯಕ್ಕೆ ಜೂನ್ ಆರಂಭದಲ್ಲೇ ಮುಂಗಾರು ಎಂಟ್ರಿ ಕೊಟ್ಟಿದ್ದು, ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದೆ. ಈ ಹಿನ್ನೆಲೆ ಕೆರೆ-ಕಟ್ಟೆಗಳು, ನದಿಗಳು ಅಪಾಯದ ಮಟ್ಟದಲ್ಲಿ ತುಂಬಿ ಹರಿದಿವೆ. ಮತ್ತೊಂದೆಡೆ, ಜಲಾಶಯಗಳು ಕೂಡ ಭರ್ತಿಯಾಗಿದ್ದು, ಇದರಿಂದ ನೀರಿನ ಅಭಾವ ಎದುರಾಗದಂತಾಗಿದೆ. ಮತ್ತೊಂದೆಡೆ ನೋಡೋದಾದ್ರೆ, ಭಾರೀ ಮಳೆಯಿಂದ ದೊಡ್ಡ ದೊಡ್ಡ ಅವಾಂತರಗಳು ಸೃಷ್ಟಿಯಾಗಿವೆ. ಕೆಲವೆಡೆ ಅನಾವೃಷ್ಟಿಯಿಂದ ಬೆಳೆಗಳು ಜಲಾವೃತವಾಗಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿರುವ ಉದಾಹರಣೆಗಳಿವೆ. ಇದೀಗ ಸದ್ಯ ಮಳೆರಾಯನ ಆರ್ಭಟ ತಗ್ಗಿದ್ದು, ಕೆಲವು ಭಾಗಗಳಲ್ಲಿ ಮಾತ್ರ ಈಗಲೂ ಮಳೆ ಮುಂದುವರೆದಿದೆ. ಕೆಲವೇ ದಿನಗಳಲ್ಲಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭೀಕರ ಚಳಿ ಪ್ರಮಾಣ ನೀರ್ಮಾಣವಾಗಲಿದೆ ಅಂತಲೂ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+