Karnataka Rains: ಬೆಂಗಳೂರು ಸೇರಿ ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಬಿರುಗಾಳಿ ಮಳೆ ಮುನ್ಸೂಚನೆ
Karnataka Rains: ರಾಜ್ಯದಲ್ಲಿ ತಗ್ಗಿದ್ದ ಮಳೆರಾಯನ ಆರ್ಭಟ ಮತ್ತೆ ಮುಂದುವರೆದಿದೆ. ಇನ್ನೂ ಮುಂದಿನ ಎರಡು ದಿನಗಳ ಕಾಲ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನಿಡಿದೆ. ಹಾಗಾದ್ರೆ ಎಲ್ಲೆಲ್ಲಿ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು (ಸೆಪ್ಟೆಂಬರ್ 26) ಬೆಳಗ್ಗೆ ಮೋಡ ಕವಿದ ವಾತಾವರಣ ಇದ್ದು, ಹಲವೆಡೆ ಮಳೆಯಾಗುತ್ತಿದೆ. ಈಗಾಗಲೇ ಕಳೆದ ಕೆಲ ದಿನಗಳಿಂದ ನಗರದ ಹಲವಡೆ ಭಾರೀ ಮಳೆಯಾಗಿದೆ. ಹಾಗೆಯೇ ಮುಂದಿನ ಹಲವು ದಿನಗಳ ಕಾಲ ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.

ಎಲ್ಲೆಲ್ಲಿ ಮಳೆ?: ರಾಜ್ಯಾದ್ಯಂತ ಸೆಪ್ಟೆಂಬರ್ ಅಂತ್ಯದವರೆಗೂ ಭಾರೀ ಮಳೆ ಬೀಳುವ ಸಾಧ್ಯತೆಯಿದೆ. ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ 14 ಜಿಲ್ಲೆಗಳಿಗೆ ಮುಂಜಾಗ್ರತಾ ಕ್ರಮವಾಗಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿಕ್ಕಮಗಳೂರು, ಶಿವಮೊಗ್ಗ, ವಿಜಯನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.
ಇನ್ನು ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರದ, ಬೆಳಗಾವಿ, ಧಾರವಾಡ, ಗದಗ, ಬೆಂಗಳೂರು ನಗರದಲ್ಲಿಯೂ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿಕ್ಕಮಗಳೂರು, ಶಿವಮೊಗ್ಗ, ವಿಜಯನಗರ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರೀ ಮಳೆಯಾಗಲಿದ್ದು, ಇಂದು ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಿದೆ.
ಇನ್ನು ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಳಗಾವಿ, ಧಾರವಾಡ, ಗದಗ, ಬೆಂಗಳೂರಿನಲ್ಲಿಯೂ ಸಹ ಅಲ್ಲಲ್ಲಿ ಮಳೆ ಸುರಿಯುವ ಸಾಧ್ಯತೆಯಿದೆ ಅಂತಲೂ ಮುನ್ಸೂಚನೆ ನೀಡಿದೆ.
ಈಗಾಗಲೇ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದ್ದು, ಹಲವು ಜಿಲ್ಲೆಗಳಲ್ಲಿ ದೊಡ್ಡ ದೊಡ್ಡ ಅವಾಂತರಗಳೇ ಸಂಭವಿಸಿರುವ ಉದಾಹರಣೆಗಳಿವೆ. ಕೆರೆ-ಕಟ್ಟೆಗಳು, ನದಿಗಳು ಅಪಾಯದ ತುಂಬಿ ಅಪಾಯದ ಮಟ್ಟ ಮೀರಿ ಹರಿದು ಅವಾಂತರಗಳೇ ಸಂಭವಿಸಿವೆ. ಮತ್ತೊಂದೆಡೆ ಮಳೆಯಾದ ಹಿನ್ನೆಲೆ ಅನ್ನದಾತರ ಮುಖದಲ್ಲಿ ಮಂದಹಾಸ ಮೂಡಿದೆ. ಇನ್ನೂ ಕೆಲವೆಡೆ ಅತೀವೃಷ್ಠಿಯಿಂದ ಬೆಳೆಗಳು ಜಲಾವೃತವ ಘಟನೆಗಳು ನಡೆದಿವೆ. ವಾಡಿಕೆಯಂತೆ ರಾಜ್ಯಕ್ಕೆ ಜೂನ್ ಆರಂಭದಲ್ಲೇ ಮುಂಗಾರು ಎಂಟ್ರಿ ಕೊಟ್ಟಿದ್ದು, ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದೆ. ಕಳೆದ ಕೆಲ ದಿನಗಳಿಂದ ನಿಂತಿದ್ದ ಮಳೆರಾಯನ ಆರ್ಭಟ ಇದೀಗ ಮತ್ತೆ ಚುರುಕು ಪಡೆದಿದೆ. ಇದರಿಂದ ಮುಂದಿನ ದಿನಗಳಲ್ಲಿ ಇನ್ನೇನು ಅನಾಹುತಗಳು ಕಾದಿವೆಯೋ ಎನ್ನುವ ಆತಂಕದಲ್ಲಿ ಜನರಿದ್ದಾರೆ. ಅದರಲ್ಲೂ ನದಿ ತೀರ ಪ್ರದೇಶಗಳ ಜನರಿಗೆ ನಡುಕ ಶುರುವಾಗಿದೆ.












Click it and Unblock the Notifications