Karnataka Rains: ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಧಾರಾಕಾರ ಮಳೆ! ಕೆಲವೆಡೆ ಮುಂಗಾರು ದುರ್ಬಲ..
Karnataka Rains: ವಾಯುಭಾರ ಕುಸಿತ ಹಾಗೂ ಅರಬ್ಬಿ ಸಮುದ್ರ ಭಾಗದಲ್ಲಿ ಟ್ರಫ್ ಸೃಷ್ಟಿಯಾಗಿರುವುದು ಮುಂದುವರಿದಿದ್ದು. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಶುಕ್ರವಾರವೂ ಮಳೆ ಅಬ್ಬರ ಜೋರಾಗಿದೆ. ಕಳೆದ ಕೆಲವು ದಿನಗಳಿಂದ ಬೆಂಗಳೂರಿನಲ್ಲಿ ಮಳೆ ಆಗಿರಲಿಲ್ಲ. ಗುರುವಾರ ಬೆಂಗಳೂರಿನಲ್ಲಿ ಮಳೆಯಾಗಿದ್ದು ಶುಕ್ರವಾರವೂ ಬೆಂಗಳೂರು ಸೇರಿ ವಿವಿಧ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅದರ ವಿವರ ನೋಡೋಣ.
ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಜುಲೈ 16ರ ವರೆಗೆ ಧಾರಾಕಾರ ಮಳೆ ಮುಂದುವರಿಯಲಿದೆ. ಕರಾವಳಿ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಕೇರಳ ಹಾಗೂ ನೆರೆಯ ಮಹಾರಾಷ್ಟ್ರ ರಾಜ್ಯಗಳಲ್ಲಿ ಧಾರಾಕಾರ ಮಳೆ ಆಗುತ್ತಿದ್ದು ಸಮುದ್ರಭಾಗದಲ್ಲಿ ಸೃಷ್ಟಿಯಾಗಿರು ಟ್ರಫ್ ಕರ್ನಾಟಕದ ಮೇಲೂ ಪ್ರಭಾವ ಬೀರಿದೆ. ಇದರಿಂದ ಮುಂದಿನ ಐದು ದಿನಗಳ ಕಾಲ ರಾಜ್ಯದಲ್ಲಿ ಮಳೆ ಆರ್ಭಟ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ವರದಿ ಉಲ್ಲೇಖಿಸಿದೆ.

ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮಳೆ ಆರ್ಭಟ ಮುಂದುವರಿದಿದೆ. ಉತ್ತರ ಒಳನಾಡಿನ ಬೀದರ್, ಬೆಳಗಾವಿ, ಗದಗ, ವಿಜಯಪುರ, ಕಲಬುರಗಿ, ಬಾಗಲಕೋಟೆ, ಹಾವೇರಿ, ಧಾರವಾಡ, ರಾಯಚೂರು, ಕೊಪ್ಪಳ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಜುಲೈ 11ರಂದು ಧಾರಾಕಾರ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ಉಲ್ಲೇಖಿಸಿದೆ.
ಇನ್ನು ಮಲೆನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಹಾಗೂ ಕೊಡಗು ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಆಗಲಿದೆ. ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಾಮರಾಜನಗರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಮೈಸೂರು, ಮಂಡ್ಯ, ರಾಮನಗರ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಮಳೆ ಆರ್ಭಟ ಇರಲಿದೆ ಎಂದು ಐಎಂಡಿ ರಿಪೋರ್ಟ್ ಹೇಳಿದೆ.
ವಿವಿಧ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಆಗುವ ಸಾಧ್ಯತೆ ಇರುವುದರಿಂದ ಕೆಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಮುಂದುವರಿದಿದೆ. ಉಳಿದಂತೆ ವಿವಿಧ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಇರಲಿದ್ದು ಮುಂಗಾರು ದುರ್ಬಲವಾಗಿರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ಉಲ್ಲೇಖಿಸಿದೆ.
ಬೆಂಗಳೂರಿನಲ್ಲಿ ಮಳೆ ಆರ್ಭಟ: ಇನ್ನು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮುಂಗಾರು ಮಳೆ ದುರ್ಬಲವಾಗಿರುವಾಗಲೇ ಬೆಂಗಳೂರಿನಲ್ಲಿ ಧಾರಾಕಾರ ಮಳೆ ಆಗುವ ಮುನ್ಸೂಚನೆ ಸಿಕ್ಕಿದೆ. ಬೆಂಗಳೂರಿನಲ್ಲಿ ಶುಕ್ರವಾರ ಹಾಗೂ ವಾರಾಂತ್ಯದಲ್ಲಿ ಮಳೆ ಆರ್ಭಟ ಇರಲಿದೆ ಎಂದು ಹೇಳಲಾಗಿದೆ. ಇನ್ನು ಬೆಂಗಳೂರಿನಲ್ಲಿ ಇಂದಿನಿಂದ ಮೋಡ ಕವಿದ ವಾತಾವರಣ ಇರಲಿದ್ದು, ಗರಿಷ್ಠ ತಾಪಮಾನವು 29 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನವು 20 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹೇಳಲಾಗಿದೆ.












Click it and Unblock the Notifications