Karnataka Rains: ರಾಜ್ಯದ ಈ ಜಿಲ್ಲೆಗಳಲ್ಲಿ ಆಗಸ್ಟ್‌ 31ರ ವರೆಗೆ ಭಾರಿ ಮಳೆ ಮುನ್ಸೂಚನೆ

Karnataka Rains: ಈಗಾಗಲೇ ಭಾರೀ ಮಳೆಯಿಂದಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಅವಾಂತರಗಳೇ ಸಂಭವಿಸಿವೆ. ಆದರೆ, ಇದೀಗ ಮುಂಗಾರು ಮಳೆ ಪ್ರಮಾಣ ತಗ್ಗಿದ್ದು, ಕೆಲವೇ ದಿನಗಳಲ್ಲಿ ಮತ್ತೆ ಚುರುಕು ಪಡೆಯಲಿದೆ ಎಂದು ಹವಾಮಾನ ಇಲಾಖೆ ನೀಡಿದೆ. ಹಾಗಾದ್ರೆ, ಯಾವಾಗಿನಿಂದ ಹಾಗೂ ಎಲ್ಲೆಲ್ಲಿ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು (ಆಗಸ್ಟ್‌ 24) ಬೆಳಗ್ಗೆ ಮಧ್ಯಾಹ್ನ ಅಥವಾ ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆಯಿದೆ ಎನ್ನುವ ಮುನ್ಸೂಚನೆ ನೀಡಿದೆ. ಇನ್ನು ಮುಂದಿನ ದಿನಗಳಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Karnataka Rains Heavy Rain in these districts Till August 31

ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಿಂದ ದೊಡ್ಡ ದೊಡ್ಡ ಅವಾಂತರಗಳೇ ಸೃಷ್ಟಿಯಾಗಿವೆ. ಇನ್ನು ಇದೀಗ ಮಳೆ ಆರ್ಭಟ ತಗ್ಗಿದ್ದು, ಆಗಸ್ಟ್ 27ರಿಂದ ಮತ್ತೆ ಚುರುಕು ಪಡೆಯಲಿದೆ ಎನ್ನುವ ಮುನ್ಸೂಚನೆ ನೀಡಿದೆ. ಆಗಸ್ಟ್‌ 27ರಿಂದ ಮುಂದಿನ 4 ದಿನಗಳ ಕಾಲ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಭಾರೀ ಮಳೆ ಹಿನ್ನೆಲೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ ಮಾಡಲಾಗಿದೆ. ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಹಾಸನ, ದಾವಣಗೆರೆ, ಹಾಸನ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿಯಲ್ಲಿ ಸಹ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕಳೆದ ಕೆಲ ದಿನಗಳಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಸು ದೊಡ್ಡ ದೊಡ್ಡ ಅವಾಂತರಗಳೇ ಸೃಷ್ಟಿಯಾಗಿವೆ. ಕೆರೆ-ಕಟ್ಟೆಗಳು, ನದಿಗಳು ಅಪಾಯದ ಮಟ್ಟದಲ್ಲಿ ಮೀರಿ ಹರಿಯುತ್ತಿದ್ದು, ಇದರಿಂದ ಜನಜೀವನ ಅಸ್ತವ್ಯಸ್ತವಾಗಿರುವ ಘಟನೆಗಳು ನಡೆದಿವೆ. ಮತ್ತೊಂದೆಡೆ ಪ್ರಮುಖ ಜಲಾಶಯಗಳು ಭರ್ತಿಯಾಗಿದ್ದು,ಇದರಿಂದ ರೈತರ ಮುಖದಲ್ಲಿ ಮಂದಹಾಸ ಮನೆ ಮಾಡಿದೆ.

ಇನ್ನು ಕಳೆದ ಎರಡು ದಿನಗಳಿಂದ ರಾಜ್ಯಾದಲ್ಲಿ ಮಳೆ ಬಿಡುವು ನೀಡಿದೆ. ಎಂಎಂ ಹಿಲ್ಸ್​, ಕ್ಯಾಸಲ್​​ರಾಕ್, ಮಂಕಿ, ಲೋಂಡಾ, ಗೇರುಸೊಪ್ಪ, ಬೆಂಗಳೂರು ಎಚ್‌ಎ​​ಎಎಲ್​​, ಅಂಕೋಲಾದಲ್ಲಿ ಮಳೆಯಾಗಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವತಣ ಇದ್ದು, ಬಿಸಿಲು ಸಹ ಇದೆ.

ಎಚ್​​ಎಎಲ್​​ನಲ್ಲಿ 29.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾದ ಬಗ್ಗೆ ವರದಿ ಆಗಿದೆ. ಕಳೆದ ಬಾರಿ ಸಹ ಮುಂಗಾರು ರಾಜ್ಯಕ್ಕೆ ಜೂನ್‌ನಲ್ಲಿ ಎಂಟ್ರಿ ಕೊಟ್ಟಿತ್ತು. ಆ ವೇಳೆಯೂ ಸಹ ಭಾರೀ ಮಳೆಯಿಂದಾಗಿ ರಾಜ್ಯದಲ್ಲಿನ ಪ್ರಮುಖ ಜಲಾಶಯಗಳು ಭರ್ತಿಯಾಗಿದ್ದು, ಹಲವೆಡೆ ಅವಾಂತರಗಳು ಸೃಷ್ಟಿಯಾಗಿದ್ದವು. ಮತ್ತೊಂದೆಡೆ ರೈತರ ಮುಖದಲ್ಲಿ ಮಂದಹಾಸ ಮನೆ ಮಾಡಿತ್ತು. ಇನ್ನೂ ಈ ಬಾರಿಯೂ ಮುಂಗಾರು ಅಬ್ಬರಿಸಿದ್ದು, ಪ್ರಮುಖ ಜಲಾಶಯಗಳು ಭರ್ತಿಯಾಗಿವೆ. ಮುಂದಿನ ದಿನಗಳಲ್ಲಿ ಮತ್ತೆ ಭಾರೀ ಮಳೆಯಾಗು ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+