Karnataka Rains: ರಾಜ್ಯದ ಈ ಜಿಲ್ಲೆಗಳಲ್ಲಿ ಜೂ.29 ವರೆಗೆ ಭಾರೀ ಮಳೆ, ಯೆಲ್ಲೋ ಅಲರ್ಟ್!

Karnataka Rains: ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ರಣಭೀಕರ ಮಳೆ ಮುನ್ಸೂಚನೆ ನೀಡಲಾಗಿದೆ. ಜೂನ್ 29ರ ವರೆಗೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಆಗಲಿದೆ. ರಾಜ್ಯದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಕರ್ನಾಟಕದ ವಿವಿಧ ಭಾಗದಲ್ಲಿ ಮತ್ತು ಉತ್ತರ ಒಳನಾಡಿನ ಕೆಲವು ಪ್ರಮುಖ ಜಿಲ್ಲೆಗಳಲ್ಲಿ ಮಳೆಯಬ್ಬರ ಜೋರಾಗಿದೆ. ಉಳಿದಂತೆ ವಿವಿಧೆಡೆ ಮಳೆ ಅಬ್ಬರ ಇಲ್ಲ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಎಲ್ಲೆಲ್ಲಿ ಮಳೆಯಾಗಲಿದೆ ಹಾಗೂ ಯಾವ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎನ್ನುವುದನ್ನು ತಿಳಿಯೋಣ.

ರಾಜ್ಯದಲ್ಲಿ ಒಟ್ಟಾರೆ ಮಳೆಯಬ್ಬರ ತುಸು ಇಳಿಕೆಯಾಗಿದೆ. ಆದರೆ ವಿವಿಧ ಜಿಲ್ಲೆಗಳಲ್ಲಿ ರಣಭೀಕರ ಮಳೆ ಮುಂದುವರಿದಿದೆ. ಕರ್ನಾಟಕದಾದ್ಯಂತ ಕಳೆದ 24 ಗಂಟೆಯ ಅವಧಿಯಲ್ಲಿ ಭಾರೀ ಮಳೆಯಾಗಿದೆ. ಮುಂದಿನ 5 ದಿನಗಳ ಕಾಲ ಮಳೆ ಮುಂದುವರಿಯಲಿದೆ. ಬೆಂಗಳೂರು ಸೇರಿದಂತೆ ಜಿಲ್ಲೆಗಳಲ್ಲಿ ಮಳೆ ಆಗಲಿದೆ. ಈ ಅವಧಿಯಲ್ಲಿ ಗಾಳಿಯ ವೇಗವು ಗಂಟೆಗೆ 30 ಕಿ.ಮೀನಿಂದ 40 ಕಿ.ಮೀ ವೇಗದಲ್ಲಿ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.

Karnataka Rains Heavy rain in these districts till June 29 imd yellow alert weather report

ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆ ಮುಂದುವರಿದಿದೆ. ಈ ಜಿಲ್ಲೆಗಳಲ್ಲಿ ಜೂನ್ 29ರ ವರೆಗೆ ಧಾರಾಕಾರ ಮಳೆ ಮುಂದುವರಿಯಲಿದೆ. ಈ ಅವಧಿಯಲ್ಲಿ ಗಾಳಿಯ ವೇಗವು 30 ರಿಂದ 40 ಕಿ.ಮೀ ವೇಗದಲ್ಲಿ ಇರಲಿದೆ ಎಂದು ಹೇಳಲಾಗಿದೆ.

ಕರಾವಳಿ ಜಿಲ್ಲೆಗಳಲ್ಲಿ ಇಂದೂ ಸಹ ಮಳೆಯಾರ್ಭಟ ಮುಂದುವರಿದಿದೆ. ಬೆಳಗಾವಿ ಹಾಗೂ ಧಾರವಾಡದಲ್ಲೂ ಇಂದು ಧಾರಾಕಾರ ಮಳೆ ಮುಂದುವರಿಯಲಿದೆ. ಅಲ್ಲದೇ ಗದಗ, ಹಾವೇರಿ, ಬಾಗಲಕೋಟೆ, ಕೊಪ್ಪಳ, ಬೀದರ್, ಕಲಬುರಗಿ, ವಿಜಯಪುರ, ರಾಯಚೂರು ಹಾಗೂ ಯಾದಗಿರಿಯಲ್ಲಿ ಮಳೆಯಬ್ಬರ ಜೋರಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ಉಲ್ಲೇಖಿಸಿದೆ.

ಇನ್ನು ದಕ್ಷಿಣ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲೂ ಮಳೆಯಬ್ಬರ ಮುಂದುವರಿದಿದೆ. ಈ ಅವಧಿಯಲ್ಲಿ ಗಾಳಿಯ ವೇಗವು 40 ರಿಂದ 50 ಕಿ.ಮೀ ವೇಗದಲ್ಲಿ ಇರಲಿದೆ. ಚಿಕ್ಕಮಗಳೂರು, ಕೊಡಗು ಹಾಗೂ ಶಿವಮೊಗ್ಗದಲ್ಲಿ ಮಳೆಯಬ್ಬರ ಇರಲಿದೆ. ದಾವಣಗೆರೆ, ಹಾಸನ, ಮೈಸೂರು ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ಮಳೆ ಮುಂದುವರಿಯಲಿದೆ. ಇನ್ನು ಉಳಿದಂತೆ ಬೆಂಗಳೂರು, ಬೆಂಗಳೂರು ಗ್ರಾಮಾಂತರ ಪ್ರದೇಶ, ಚಾಮರಾಜನಗರ, ರಾಮನಗರ, ಬಳ್ಳಾರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ತುಮಕೂರು ಹಾಗೂ ವಿಜಯನಗರದಲ್ಲಿ ಸಾಧಾರಣ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.

ಮುಂದಿನ ಮೂರು ದಿನ ಮಳೆ: ಇನ್ನು ರಾಜ್ಯದಾದ್ಯಂತ ಮುಂದಿನ ಮೂರು ದಿನಗಳ ಅವಧಿಗೆ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಉಳಿದಂತೆ ಮೀನುಗಾರರಿಗೆ ಯಾವುದೇ ಮುನ್ಸೂಚನೆಯನ್ನು ನೀಡಿಲ್ಲ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+