Karnataka Rains: ರಾಜ್ಯದ ಈ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 15ರ ವರೆಗೆ ಗುಡುಗು ಸಹಿತ ಬಿರುಗಾಳಿ ಮಳೆ ಮುನ್ಸೂಚನೆ
Karnataka Rains: ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ತಗ್ಗಿದ್ದ ಮುಂಗಾರು ಆರ್ಭಟ ಮತ್ತೆ ಚುರುಕು ಪಡೆದಿದೆ. ಈಗಾಗಲೇ ಭಾರೀ ಮಳೆಯಿಂದ ಹಲವು ಜಿಲ್ಲೆಗಳಲ್ಲಿ ದೊಡ್ಡ ದೊಡ್ಡ ಅವಾಂತರಗಳೇ ಸಂಭವಿಸಿವೆ. ಇನ್ನು ಸೆಪ್ಟೆಂಬರ್ 15ರ ವರೆಗೆ ಈ ಭಾಗಗಳಲ್ಲಿ ಬಿರುಗಾಳಿ ಸಹಿತ ಸುನಾಮಿ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ, ಎಲ್ಲೆಲ್ಲಿ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು (ಸೆಪ್ಟೆಂಬರ್ 13) ಬೆಳ್ಳಂಗೆಯೇ ಮಳೆರಾಯ ಆರ್ಭಟ ಮುಂದುವರೆಸಿದ್ದಾನೆ. ನಿನ್ನೆ ಅಂದರೆ ಸೆಪ್ಟೆಂಬರ್ 12ರಂದು ಸಹ ನಗರದ ಹಲವೆಡೆ ಮಳೆಯಾಗಿದೆ. ಹಾಗೆಯೇ ಮುಂದಿನ ದಿನಗಳಲ್ಲಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮತ್ತೆ ಭಾರೀ ಮಳೆ ಮುಂದುವರೆಯಲಿದೆ ಎನ್ನುವ ಮುನ್ಸೂಚನೆ ಇದೆ.

ಕಳೆದ ಕೆಲವು ದಿನಗಳಿಂದ ಬಿಡುವು ನೀಡಿದ್ದ ಮಳೆರಾಯ ಮತ್ತೆ ಆರ್ಭಟ ಶುರು ಮಾಡಿದ್ದಾನೆ. ಇನ್ನು ರಾಜ್ಯದ ಬೀದರ್, ಕಲಬುರಗಿ, ಯಾದಗಿರಿ, ಕೊಪ್ಪಳ, ಗದಗ, ಬಾಗಲಕೋಟೆ, ವಿಜಯಪುರ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 15ರ ವರೆಗೆ ಮುಂದಿನ ಎರಡು ದಿನ ಗುಡುಗು ಸಹತ ಬಿರುಗಾಳಿ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಅಲ್ಲದೆ, ಬಳ್ಳಾರಿ, ವಿಜಯನಗರ, ಚಿತ್ರದುರ್ಗ, ದಾವಣಗೆರೆ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲೂ ಸಹ ಇದೇ ವೇಳೆ ಭಾರೀ ಸುರಿಯುವ ಸಾಧ್ಯತೆಯಿದೆ. ಇನ್ನು ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಳಗಾವಿ, ಧಾರವಾಡ, ಹಾವೇರಿ, ರಾಯಚೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದ್ದು, ಗಾಳಿ ವೇಗ ಮಾತ್ರ ಹೆಚ್ಚಿರಲಿದೆ. ಇನ್ನು ರಾಜ್ಯ ರಾಜಧಾನಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲೂ ಸಹ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂಗಾರು ಮಳೆ ಆರ್ಭಟಿಸಿದೆ. ಪರಿಣಾಮ ಹಲವು ಜಿಲ್ಲೆಗಳಲ್ಲಿ ಅವಾಂತರಗಳೇ ಸಂಭವಿಸಿವೆ.
ಭಾರೀ ಮಳೆಯಿಂದಾಗಿ ರಾಜ್ಯದ ಬಹುತೇಕ ಪ್ರಮುಖ ಜಲಾಶಯಗಳು ಭರ್ತಿಯಾಗಿದ್ದು, ಈಗಾಗಲೇ ಹಲವು ಜಲಾಶಯಗಳಿಗೆ ಹೆಚ್ಚುವರಿ ನೀರನ್ನು ಹೊರಗಡೆ ಬೀಡಲಾಗಿದೆ. ಇನ್ನು ಈ ಬಾರಿ ಅವಧಿಗೂ ಮುನ್ನ ಎಂಟ್ರಿ ಕೊಟ್ಟ ಮುಂಗಾರು ಮಳೆ ಆರ್ಭಟದಿಂದ ಕೆಲ ಜಲಾಶಗಳು ಎರಡೆರಡು ಬಾರಿ ಭರ್ತಿ ಆಗಿದ್ದು, ರೈತರ ಕೃಷಿ ಹಾಗೂ ಕುಡಿಯುವ ನೀರಿಗೆ ಕೊರತೆ ಕಾಡದಂತೆ ಆಗಿದೆ. ಇದರಿಂದ ರೈತರ ಮುಖದಲ್ಲಿ ಮಂದಹಾಸ ಮನೆ ಮಾಡಿದ್ದರೆ, ಮತ್ತೊಂದೆಡೆ ಇನ್ನೂ ಕೆಲವೆಡೆ ಭಾರೀ ಮಳೆ ಹಿನ್ನೆಲೆ ಅತೀವೃಷ್ಟಿಯಾಗಿ ಬೆಳೆಗಳು ನೀರಿನಲ್ಲಿ ಕೊಚ್ಚಿಕೊಂಡು ಹೋದ ಘಟನೆಗಳು ನಡೆದಿವೆ.
ಈಗಾಗಲೇ ಕರಾವಳಿ ಜಿಲ್ಲೆಗಳಲ್ಲಿ ಮುಂಗಾರು ಮಳೆ ಆರ್ಭಟ ತಗ್ಗಿದ್ದರೆ, ಮಲೆನಾಡು ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳ ಕೆಲವೆಡೆ ಮತ್ತೆ ಚುರುಕು ಪಡದಿದೆ. ಮುಂದಿನ ದಿನಗಳಲ್ಲಿ ಈ ಭಾಗಗಳಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಅಂತಲೂ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.












Click it and Unblock the Notifications