Karnataka Rains: ರಾಜ್ಯದ ಈ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 8ರ ವರೆಗೂ ಸುನಾಮಿ ಮಳೆ ಮುನ್ಸೂಚನೆ: ರಜೆ ಘೋಷಣೆ ಸಾಧ್ಯತೆ..
Karnataka Rains: ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಮುಂಗಾರು ಮಳೆ ಅಬ್ಬರಿಸಿ ಬೊಬ್ಬೆರೆಯುತ್ತಿದೆ. ಪರಿಣಾಮ ಹಲವು ಜಿಲ್ಲೆಗಳಲ್ಲಿ ದೊಡ್ಡ ದೊಡ್ಡ ಅವಾಂತರಗಳೇ ಸಂಭವಿಸಿವೆ. ಹಾಗೆಯೇ ಮುಂದಿನ ಐದು ದಿನ ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಈ ಭಾಗಗಳಲ್ಲಿ ಬಿರುಗಾಳಿ ಸಹಿತ ಸುನಾಮಿ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ ಎಲ್ಲೆಲ್ಲಿ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು (ಸೆಪ್ಟೆಂಬರ್ 3) ಬೆಳಗ್ಗೆ ಮೋಡ ಕವಿದ ವಾತಾವರಣ ಇದ್ದು, ಹಲವೆಡೆ ಜಿನುಗು ಮಳೆ ಆರಂಭವಾಗಿದೆ. ಮಧ್ಯಾಹ್ನ ಅಥವಾ ಸಂಜೆ ವೇಳೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಅಲ್ಲದೆ, ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಹಲವು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎನ್ನುವ ಮುನ್ಸೂಚನೆ ಇದೆ.

ಈಗಾಗಲೇ ಭಾರೀ ಮಳೆಯಿಂದಾಗಿ ಹಲವು ಜಿಲ್ಲೆಗಳಲ್ಲಿ ಕೆರೆ-ಕಟ್ಟೆಗಳು, ನದಿಗಳು ಅಪಾಯದ ಮಟ್ಟದಲ್ಲಿ ತುಂಬಿ ಹರಿಯುತ್ತಿವೆ. ಹಾಗೆಯೇ ರಾಜ್ಯಾದ್ಯಂತ ಇಂದು ಹಾಗೂ ಮುಂದಿನ ಹಲವು ದಿನಗಳ ಕಾಲ ರಣಮಳೆ ಮುಂದುವರೆಯುವ ಸಾಧ್ಯತೆಯಿದ ಎಂದು ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶವನ್ನು ರವಾನೆ ಮಾಡಿದೆ.
ಜೂನ್‌ಗೂ ಮೊದಲೇ ಅಂದ್ರೆ ವಾಡಿಕೆಗೂ ಮೊದಲೇ ರಾಜ್ಯಕ್ಕೆ ಮುಂಗಾರು ಎಂಟ್ರಿ ಕೊಟ್ಟಿದ್ದು, ಆಗಿನಿಂದಲೂ ಬಹುತೇಕ ಜಿಲ್ಲೆಗಳಲ್ಲಿ ರಣಮಳೆ ಮುಂದುವರೆದಿದೆ. ಆದರೆ, ಆಗಸ್ಟ್ ಮಧ್ಯದಿಂದ ಕೆಲವು ದಿನಗಳ ಕಾಲ ಬಿಡುವು ನೀಡಿದ್ದ ಮಳೆರಾಯ ಮತ್ತೆ ಇದೀಗ ಅಬ್ಬರಿಸಿ ಬೊಬ್ಬರೆಯುತ್ತಿದ್ದಾನೆ.
ಇನ್ನು ಇದೀಗ ಸೆಪ್ಟೆಂಬರ್ ತಿಂಗಳು ಆರಂಭವಾಗಿದ್ದು, ಈ ತಿಂಗಳಿನಲ್ಲೂ ಕೂಡ ಹಲವೆಡೆ ಸಾಧಾರಣ ಮಳೆಯಾದ್ರೆ, ಇನ್ನೂ ಕಲವೆಡೆ ರಣಭೀಕರ ಮಳೆ ಮುಂದುವರೆದಿದೆ. ಅದರಲ್ಲೂ ಉತ್ತರ ಮತ್ತು ದಕ್ಷಿಣ ಒಳನಾಡಿನ ಭಾಗದಲ್ಲಿ ಮಳೆ ಪ್ರಮಾಣ ತುಸು ತಗ್ಗಿದೆ. ಆದರೆ, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಭಾಗಗಳಲ್ಲಿ ಭಾರೀ ಮಳೆ ಮುಂದುವರೆದಿದೆ.
ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದು (ಸೆಪ್ಟೆಂಬರ್ 3) ಅಲ್ಲಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಮತ್ತೊಂದೆಡೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕವಾಗಿ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ. ಇನ್ನು ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳ ಹಲವೆಡೆ ರಣಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳ ಹಲವೆಡೆ ಸೆಪ್ಟೆಂಬರ್ 8ರ ವರೆಗೂ ಸುನಾಮಿ ಮಳೆ ಸುರಿಯುವ ಸಾಧ್ಯತೆ ಇದೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇನ್ನು ಇಂದು ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ಮುಂಜಾಗ್ರತಾ ಕ್ರಮವಾಗಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಆದರೆ, ಬೇರೆ ಯಾವುದೇ ಜಿಲ್ಲೆಗಳಿಗೆ ಯಾವುದೇ ರೀತಿಯ ಅಲರ್ಟ್ ನೀಡಲಾಗಿಲ್ಲ ಎನ್ನುವ ಮಾಹಿತಿ ಇದೆ. ಇನ್ನು ಇಂದು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 20-27 ಡಿಗ್ರಿ ಸೆಲ್ಸಿಯಸ್‌ವರೆಗೆ ದಾಖಲಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶವನ್ನು ನೀಡಿದೆ. ಈಗಾಗಲೇ ಭಾರೀ ಮಳೆಯಾದಂತಹ ಸಂದರ್ಭಗಳಲ್ಲಿ ಹಲವು ಜಿಲ್ಲೆಗಳಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ರಜೆ ಘೋಷಣೆ ಮಾಡಲಾಗಿದೆ. ಅಲ್ಲದೆ, ಈ ರಜೆಗಳನ್ನು ತುಂಬವ ಕೆಲಸಗಳು ಕೂಡ ನಡೆಯುತ್ತಿವೆ. ಇದೀಗ ಮತ್ತೆ ಭಾರೀ ಮಳೆ ಮುಂದುವರೆದರೆ, ಶಾಲೆಗಳಿಗೆ ರಜೆ ಘೋಷಣೆ ಮಾಡುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.












Click it and Unblock the Notifications