Heavy Rains: ರಾಜ್ಯದ ಈ ಜಿಲ್ಲೆಗಳಲ್ಲಿ ಧಾರಾಕಾರ ಮಳೆ: ಯೆಲ್ಲೋ & ಆರೆಂಜ್ ಅಲರ್ಟ್ ಘೋಷಿಸಿದ IMD
Karnataka Rains: ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಕರಾವಳಿ ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಮುಂದುವರಿದಿದ್ದು. ಜುಲೈ 08ರಂದು ವಿವಿಧ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಆಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ರಾಜ್ಯದಲ್ಲಿ ಮುಂಗಾರು ಮಳೆ ಆರ್ಭಟ ಜೋರಾಗಿದೆ. ಮುಂಗಾರು ಮಳೆಯಿಂದ ಜಲಾಶಯಗಳು ಸಹ ಭರ್ತಿ ಆಗುತ್ತಿವೆ. ಇನ್ನು ಇಂದು ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಕೆಲವು ಜಿಲ್ಲೆಗಳಲ್ಲಿ ಶಾಲಾ - ಕಾಲೇಜುಗಳಿಗೆ ರಜೆ ಸಹ ಘೋಷಿಸುವ ಸಾಧ್ಯತೆ ಇದೆ. ಆದರೆ ಈ ಬಗ್ಗೆ ಅಧಿಕೃತ ಆದೇಶ ಇಲ್ಲಿಯ ವರೆಗೆ ಆಗಿಲ್ಲ. ಅದರ ಸಂಪೂರ್ಣ ವಿವರ ಇಲ್ಲಿದೆ.
ರಾಜ್ಯದ 12ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಂಗಳವಾರ ಧಾರಾಕಾರ ಮಳೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಮುಂದಿನ ಐದು ದಿನಗಳ ವರೆಗೆ ಭಾರೀ ಮಳೆ ಆಗಲಿದೆ. ಇಂದು ವಿವಿಧ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಆಗಲಿದೆ. ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಇಂದು ವಿವಿಧ ಜಿಲ್ಲೆಗಳಿಗೆ ಯೆಲ್ಲೋ ಹಾಗೂ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕರ್ನಾಟಕದಲ್ಲಿ ಭಾರೀ ಮಳೆ ಮುಂದುವರಿದಿದ್ದು. ಜುಲೈ 12ರ ವರೆಗೆ ರಾಜ್ಯದಲ್ಲಿ ಮಳೆ ಅಬ್ಬರ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ಉಲ್ಲೇಖಿಸಿದೆ.

ಈ ಜಿಲ್ಲೆಗಳಲ್ಲಿ ಭಾರೀ ಮಳೆ: ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಈ ಭಾಗದಲ್ಲಿ ಆರೆಂಜ್ ಅಲರ್ಟ್ ಕೊಡಲಾಗಿದೆ. ಇನ್ನು ಮಲೆನಾಡು ಹಾಗೂ ಉತ್ತರ ಕರ್ನಾಟಕ ಭಾಗದಲ್ಲೂ ಧಾರಾಕಾರ ಮಳೆ ಮುಂದುವರಿಯುವ ಸಾಧ್ಯತೆ ಇದೆ. ಈ ಭಾಗದ ಹಾಸನ, ಚಿಕ್ಕಮಗಳೂರು, ಕೊಡಗು ಹಾಗೂ ಶಿವಮೊಗ್ಗದಲ್ಲಿ ಧಾರಾಕಾರ ಮಳೆ ಇರಲಿದೆ. ಅಲ್ಲದೇ ಬೆಳಗಾವಿ ಭಾಗದಲ್ಲೂ ಧಾರಾಕಾರ ಮಳೆ ಆಗಲಿದೆ. ಹೀಗಾಗಿ ಈ ಭಾಗಗಳಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಬೆಂಗಳೂರು ಸೇರಿದಂತೆ ವಿವಿಧ ಭಾಗದಲ್ಲೂ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಇದೀಗ ಮತ್ತೆ ಮುಂಗಾರು ಚುರುಕು ಪಡೆದುಕೊಂಡಿದ್ದು ವಿವಿಧ ಜಿಲ್ಲೆಗಳಲ್ಲಿ ವರ್ಷಧಾರೆ ಜೋರಾಗಿದೆ. ಕೇರಳದಲ್ಲಿ ಸೃಷ್ಟಿಯಾಗಿರುವ ಚಂಡಮಾರುತ ರಾಜ್ಯದ ಮೇಲೆ ಪ್ರಭಾವ ಬೀರುತ್ತಿದೆ. ಇನ್ನು ಮಹಾರಾಷ್ಟ್ರ ಭಾಗದಲ್ಲಿ ಧಾರಾಕಾರ ಮಳೆ ಆಗುತ್ತಿರುವುದು ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳ ಜಲಾಶಯದ ಒಳಹರಿವು ಹೆಚ್ಚಳವಾಗಿದೆ.












Click it and Unblock the Notifications