ರಾಜ್ಯದ ಹಲವು ಜಿಲ್ಲೆಗಳಲ್ಲಿ ಗಾಳಿ, ಮಳೆ: ಜನರ ಪರದಾಟ
ಬೆಂಗಳೂರು, ಮೇ 1: ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಇಂದು ಭಾರೀ ಗಾಳಿ, ಮಳೆಯಾಗಿದೆ. ಹಲವಾರು ಕಡೆಗಳಲ್ಲಿ ಆಲಿಕಲ್ಲು ಮಳೆಯು ಕೂಡಾ ಆಗಿದ್ದು, ಜನರು ಪರದಾಡುವಂತಾಗಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಇಂದು ಮಳೆಯಾಗಿದೆ.
ರಾಮನಗರದಲ್ಲಿ ಮಳೆಗೆ ವಿದ್ಯುತ್ ಕಂಬ ಧರೆಗುರುಳಿದೆ. ಕೋಲಾರದಲ್ಲಿಯೂ ಭಾರೀ ಮಳೆಯಾಗುದ್ದು ಮನೆಯ ಶೀಟ್‌ಗಳು ಹಾರಿ ಹೋಗಿದೆ. ಆನೇಕಲ್‌ನಲ್ಲಿ ಭಾರೀ ಮಳೆಗೆ ವಿದ್ಯುತ್ ವ್ಯತ್ಯಯ ಉಂಟಾಗಿದೆ. ಮೈಸೂರಿನಲ್ಲಿಯೂ ಭಾರೀ ಮಳೆಯಾಗಿದೆ. ಇನ್ನು ಬೆಂಗಳೂರಿನಲ್ಲಿ ಆಲಿಕಲ್ಲು ಮಳೆಯಾಗಿದೆ.
ದಕ್ಷಿಣ ಕನ್ನಡದ ಸುಳ್ಯ, ಮೈಸೂರಿನ ಹಲವು ಭಾಗಗಳಲ್ಲಿ, ಟಿ ನರಸೀಪುರ, ಚಾಮರಾಜನಗರ, ಶ್ರೀರಂಗಪಟ್ಟಣ, ಪರಶುರಾಂಪುರ, ಹಳ್ಳಿ ಮೈಸೂರು, ಹುಣಸೂರು, ಎಚ್‌ಡಿ ಕೋಟೆ, ನಂಜನಗೂಡು, ಕೋಲಾರ, ಜಿಕೆವಿಕೆ, ಬಿಳಿಕೆರೆ, ಕೃಷ್ಣರಾಜಪೇಟೆ, ಪೊನ್ನಂಪೇಟೆ, ರಾಮನಗರದ ಹಲವಾರು ಭಾಗಗಳಲ್ಲಿ ಮಳೆಯಾಗಿದೆ.

ಹಲವು ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ
ಇನ್ನು ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಕೊಪ್ಪಳ, ಯಾದಗಿರಿ, ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗಾ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಿಂಚಿನ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆಯು ತಿಳಿಸಿದೆ.
ಇನ್ನು ಕರ್ನಾಟಕದ ಹಲವಾರು ರಾಜ್ಯಗಳಲ್ಲಿ ಮಳೆ ಸುರಿಯುತ್ತಿರುವಾಗ, ಇತರೆ ಉತ್ತರದ ಕೆಲವು ರಾಜ್ಯಗಳಲ್ಲಿ ತಾಪಮಾನ ಭಾರೀ ಏರಿಕೆ ಕಾಣುತ್ತಿದೆ. ಆದರೆ ಈಶಾನ್ಯ ಭಾರತದಲ್ಲಿ ಮೇ 4ರವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯು ತಿಳಿಸಿದೆ. ನಾಗಾಲ್ಯಾಂಡ್, ಮಣಿಪುರ ರಾಜ್ಯಗಳಲ್ಇ ಮಳೆ ಸುರಿಯಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ. ಇನ್ನು ಭಾರೀ ಮಳೆಯಿಂದಾಗಿ ಉಂಟಾದ ಅವಘಡದಲ್ಲಿ ಪಶ್ಚಿಮ ಬಂಗಾಳದಲ್ಲಿ ಮೂವರು ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.












Click it and Unblock the Notifications