Karnataka Rains: ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಿಗೆ ಮುಂದಿನ ಮೂರು ಗಂಟೆಗಳಲ್ಲಿ ಭಾರೀ ಮಳೆ ಮುನ್ಸೂಚನೆ
Karnataka Rains: ಬೇಸಿಗೆಯ ಬಿರುಬಿಸಿಲಿನ ವಾತಾವರಣದ ನಡುವೆಯೂ ರಾಜ್ಯದ ಹಲವೆಡೆ ಮಳೆರಾಯನ ಆರ್ಭಟ ಮುಂದುವರೆದಿದೆ. ಹಾಗೆಯೇ ಇದೀಗ ಮುಂದಿನ ಮೂರು ಗಂಟೆಗಳಲ್ಲಿ ಬೆಂಗಳೂರು ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ, ಎಲ್ಲೆಲ್ಲಿ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು (ಮಾರ್ಚ್ 29) ಬೆಳಗ್ಗೆಯಿಂದಲೂ ಬಿಸಿಲಿನ ವಾತಾವರಣ ಮುಂದುವರೆದಿದ್ದು, ರಾತ್ರಿ 8 ಗಂಟೆ ಆಗುತ್ತಿದ್ದಂತೆ ನಗರದ ಹಲವೆಡೆ ದಿಢೀರ್ ಮಳೆರಾಯ ಎಂಟ್ರಿ ಕೊಟ್ಟಿದ್ದಾನೆ. ಕೋರಮಂಗಲ, ಎಸ್‌ಎಸ್‌ಆರ್ ಲೇಔಟ್, ಬಿಟಿಎಂ ಲೇಔಟ್, ಡೈರಿ ಸರ್ಕಲ್, ಮೆಜೆಸ್ಟಿಕ್, ವಿಧಾನಸೌಧ, ಕೆಆರ್ ಮಾರ್ಕೆಟ್, ಮಲ್ಲೇಶ್ವರಂ ಸೇರಿದಂತೆ ನಗರದ ಹಲವೆಡೆ ಮಳೆ ಮುಂದುವರೆದಿದೆ. ಪರಿಣಾಮ ವಾಹನ ಸವಾರರು ಪರದಾಡಿದ ಘಟನೆಗಳು ನಡೆದಿವೆ.

ಮುಂದಿನ ಮೂರು ಗಂಟೆಯಲ್ಲಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ಚಾಮರಾಜನಗರ, ರಾಮನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಗಾಳಿಯ ವೇಗ ಗಂಟೆಗೆ 40-50 ಕಿಲೋ ಮೀಟರ್ ಇರಲಿದೆ ಅಂತಲೂ ಎಚ್ಚರಿಕೆ ಸಂದೇಶವನ್ನು ರವಾನೆ ಮಾಡಿದೆ.












Click it and Unblock the Notifications