Karnataka Rains: ಇನ್ನು ಕೆಲವೇ ಗಂಟೆಗಳಲ್ಲಿ ರಾಜ್ಯದ ಈ ಜಿಲ್ಲೆಗಳಲ್ಲಿ ಸುರಿಯಲಿದೆ ರಣಮಳೆ: IMD ಮುನ್ಸೂಚನೆ
Karnataka Rain: 2024ರ ಜೂನ್ ಆರಂಭದಿಂದಲೂ ಮುಂಗಾರು ಚುರುಕು ಪಡೆದಿದೆ. ಈಗಾಗಲೇ ಅಬ್ಬರದ ಮಳೆಯಿಂದಾಗಿ ಹಲವು ಜಿಲ್ಲೆಗಳಲ್ಲಿ ದೊಡ್ಡ ದೊಡ್ಡ ಅನಾಹುತಗಳೇ ಸೃಷ್ಟಿಯಾಗಿವೆ. ಇನ್ನು ಕಲವೆಡೆ ಸಾಧಾರಣ ಮಳೆ ಮುಂದುವರೆದಿದೆ. ಹಾಗೆಯೇ ಇಂದು (ಜೂನ್ 06) ಕೆಲವೆಡೆ ಗಂಟೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಎಲ್ಲೆಲ್ಲಿ ಮಳೆ ಸುರಿಯಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ (ಜೂನ್ 05) ಬೆಳಗ್ಗೆ ಮೋಡ ಕವಿದ ವಾತಾವರಣ ನಿರ್ಮಾಣವಾಗಿತ್ತು. ಆದರೆ ಮಧ್ಯಾಹ್ನದ ವೇಳೆಗೆ ಬಿಸಿಲಿನ ವಾತಾವರಣ ಮುಂದುವರೆದಿದ್ದು, ಸಂಜೆ ವೇಳೆಗೆ ಮತ್ತೆ ಮೋಡ ಕವಿದು ನಗರದ ಹಲವೆಡೆ ಮಳೆ ಸುರಿದಿದೆ. ಇನ್ನು ಇಂದು (ಜೂನ್ 06) ಬೆಳಗ್ಗೆಯಿಂದಲೂ ಮೋಡ ಕವಿದ ವಾತಾವಾರಣ ಇದ್ದು, ಇನ್ನು ಕೆಲವೇ ಗಂಟೆಗಳಲ್ಲಿ ಮಳೆ ಬೀಳಲಿದೆ ಎನ್ನುವ ಮುನ್ಸೂಚನೆ ಇದೆ.

ಹಾಗೆಯೇ ಇಂದು (ಜೂನ್ 06) ಕಲಬುರಗಿ, ಬೀದರ್, ಧಾರವಾಡ, ವಿಜಯಪುರ, ಬಾಗಲಕೋಟೆ, ಗದಗ, ಕೊಪ್ಪಳ, ಹಾವೇರಿ, ಬೆಳಗಾವಿಯಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗಲಿದೆ ಎಂದು ತಿಳಿಸಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ತುಮಕೂರು, ರಾಮನಗರ, ಮಂಡ್ಯ, ಚಾಮರಾಜನಗರದ ಕೆಲವು ಭಾಗಗಳಲ್ಲಿ ಪ್ರತ್ಯೇಕವಾಗಿ ಸಾಧರಣವಾಗಿ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ಇನ್ನು ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅಲ್ಲಲ್ಲಿ ಪ್ರತ್ಯೇಕವಾಗಿ ಗುಡುಗು ಸಹಿತ ಮಳೆ ಸುರಿಯಲಿದೆ ಎಂದು ತಿಳಿಸಿದೆ.












Click it and Unblock the Notifications