Karnataka Rains: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಬೆಂಗಳೂರು ಸೇರಿ ರಾಜ್ಯದ ಈ ಜಿಲ್ಲೆಗಳಲ್ಲಿ 5 ದಿನ ಭಾರಿ ಮಳೆ ಮುನ್ಸೂಚನೆ

Karnataka Rains: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇದೀಗ ವರುಣನ ಆರ್ಭಟ ಮುಂದುವರೆದಿದೆ. ಹಾಗೆಯೇ ಇದೀಗ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ರಾಜಧಾನಿ ಬೆಂಗಳೂರು ಸೇರಿದಂತೆ ಈ ಭಾಗಳಲ್ಲಿ ಮುಂದಿನ ಐದು ದಿನಗಳ ಕಾಲ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.

ರಾಜ್ಯದಲ್ಲಿ ಸದ್ಯ ವರುಣನ ಆರ್ಭಟ ತಗ್ಗುವ ಲಕ್ಷಣಗಳು ಕಾಣಿಸುತ್ತಿಲ್ಲ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಅಕ್ಟೋಬರ್ 25 ಮತ್ತು 26ರ ಸುಮಾರಿಗೆ ತೀವ್ರ ಚಂಡಮಾರುತವಾಗಿ ಪರಿವರ್ತನೆಯಾಗುವ ಲಕ್ಷಣಗಳಿವೆ. ಇದರ ಜೊತೆಗೆ ದಕ್ಷಿಣ ಕೇರಳ ಕರಾವಳಿಯಲ್ಲಿ ವಾಯುಸುಳಿಗಾಳಿ ಉಂಟಾಗಿರುವುದರಿಂದ, ಇದರ ಪರಿಣಾಮ ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನಾದ್ಯಂತ ಅಕ್ಟೋಬರ್ 29ರ ವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶವನ್ನು ರವಾನೆ ಮಾಡಿದೆ.

Karnataka Rains Heavy Rainfall Alert for Coastal and Malnad Regions for 5 Days including Bengaluru

ಮಲೆನಾಡು, ದಕ್ಷಿಣ ಒಳನಾಡಿನಲ್ಲಿ ಮಳೆ

ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಅಕ್ಟೋಬರ್ 26ರ ಗುಡುಗು ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದ್ದರೆ, ಕೊಡಗು ಜಿಲ್ಲೆಯಲ್ಲಿ ಅಕ್ಟೋಬರ್ 27ರ ವರೆಗೆ ವರುಣನ ಆರ್ಭಟ ಮುಂದುವರೆಯಲಿದ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕೇರಳ ಕರಾವಳಿಯ ವಾಯುಸುಳಿಗಾಳಿಯ ಚಲನೆಯಿಂದಾಗಿ ದಕ್ಷಿಣ ಒಳನಾಡಿನಲ್ಲಿ ಈಗಾಗಲೇ ತುಂತುರು ಮಳೆ ಆರಂಭವಾಗಿದೆ. ಅಕ್ಟೋಬರ್ 26ರ ವರೆಗೆ ಚಾಮರಾಜನಗರ, ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ನಗರ, ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ ಹಾಗೂ ವಿಜಯನಗರ ಭಾಗಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಕರವಾಳಿಯ ಯಾವೆಲ್ಲಾ ಜಿಲ್ಲೆಗಳಲ್ಲಿ ಮಳೆ?

ಕರವಾಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಭಾಗಗಳಲ್ಲಿ ಇಂದು (ಅಕ್ಟೋಬರ್ 24) ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ಮತ್ತು ರಾತ್ರಿ ವೇಳೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಅದರಲ್ಲೂ ಉಡುಪಿ, ದಕ್ಷಿಣ ಕನ್ನಡದಲ್ಲಿ ಅಕ್ಟೋಬರ್ 26ರ ವರೆಗೆ ಮಳೆಯ ಆರ್ಭಟ ಇರಲಿದೆ ಎಂದು ತಿಳಿಸಿದೆ.

ಉತ್ತರ ಒಳನಾಡಿನ ಹವಾಮಾನದ ವಿವರ

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ಇಂದು (ಅಕ್ಟೋಬರ್ 24) ಮಧ್ಯಾಹ್ನದ ನಂತರ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ಉಳಿದ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆ ಇದ್ದರೂ, ಬಂಗಾಳಕೊಲ್ಲಿಯಲ್ಲಿ ಸೃಷ್ಟಿಯಾಗುತ್ತಿರುವ ಚಂಡಮಾರುತದ ಚಲನೆಯ ಪರಿಣಾಮ ಪರಿಸ್ಥಿತಿ ಬದಲಾಗಲಿದೆ.

ಸಾರ್ವಜನಿಕರಿಗೆ ಮುನ್ನೆಚ್ಚರಿಕೆ ಸಲಹೆಗಳು

ವಾತಾವರಣದಲ್ಲಿ ದಿಢೀರ್ ಬದಲಾವಣೆಗಳು ಉಂಟಾಗುತ್ತಿರುವುದರಿಂದ, ಸಂಜೆ ವೇಳೆ ಪ್ರಯಾಣಿಸುವ ಸಾರ್ವಜನಿಕರು ಹಾಗೂ ವಾಹನ ಸವಾರರು ಎಚ್ಚರಿಕೆಯಿಂದ ಇರಬೇಕು ಎಂದು ಹವಾಮಾನ ಇಲಾಖೆ ಸಲಹೆ ನೀಡಿದೆ.

ರಾಜ್ಯದಲ್ಲಿ ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಮತ್ತು ವಾಯುಭಾರ ಕುಸಿತದ ಪ್ರಭಾವದಿಂದಾಗಿ ಮುಂದಿನ ಕೆಲವು ದಿನಗಳು ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಸಾರ್ವಜನಿಕರು ಸಂಜೆ ಹಾಗೂ ರಾತ್ರಿ ವೇಳೆ ಅನಗತ್ಯ ಪ್ರಯಾಣವನ್ನು ತಪ್ಪಿಸಿ, ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯಿರಿ.

* ವಾಹನ ಸವಾರರ ಗಮನಕ್ಕೆ: ಮಳೆಯಿಂದಾಗಿ ರಸ್ತೆಗಳು ಜಾರುವಂತಿರುತ್ತವೆ ಮತ್ತು ದೃಷ್ಟಿಗೋಚರತೆ ಕಡಿಮೆ ಇರುವ ಪ್ರದೇಶಗಳಲ್ಲಿ ವಾಹನ ಸವಾರರು ವೇಗವನ್ನು ನಿಯಂತ್ರಿಸಿ, ಹೆಡ್‌ಲೈಟ್‌ಗಳನ್ನು ಹಾಕಿಕೊಂಡು ಜಾಗರೂಕತೆಯಿಂದ ವಾಹನ ಚಾಲನೆ ಮಾಡಿ.

* ರೈತರಿಗೆ ಸಲಹೆ: ಕೊಯ್ಲಿಗೆ ಬಂದಿರುವ ಬೆಳೆಗಳನ್ನು ತಕ್ಷಣವೇ ಸುರಕ್ಷಿತ ಜಾಗಕ್ಕೆ ಸ್ಥಳಾಂತರಿಸಿ. ಕೃಷಿ ಯಂತ್ರೋಪಕರಣಗಳು ಹಾಗೂ ಧಾನ್ಯಗಳು ನೀರಿನಲ್ಲಿ ನೆನೆಯದಂತೆ ಪ್ಲಾಸ್ಟಿಕ್ ಶೀಟ್‌ಗಳಿಂದ ಮುಚ್ಚಿ ಅಗತ್ಯ ಮುನ್ನೆಚ್ಚರಿಕೆ ವಹಿಸಿ.

* ಕರಾವಳಿ ಭಾಗಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಈ ಭಾಗಗಳ ಜನರು ನದಿ ಮತ್ತು ಸಮುದ್ರ ತೀರಕ್ಕೆ ಹೋಗಬೇಡಿ. ವಿದ್ಯುತ್ ಕಂಬಗಳು ಹಾಗೂ ಮರಗಳ ಕೆಳಗೆ ನಿಲ್ಲುವುದನ್ನು ತಪ್ಪಿಸಿ. ತುರ್ತು ಸಹಾಯಕ್ಕಾಗಿ ಸ್ಥಳೀಯ ಆಡಳಿತದ ಸಹಾಯವಾಣಿಯನ್ನು ಸಂಪರ್ಕಿಸಿ ಎಂದು ಸಲಹೆ ನೀಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+