Karnataka Rains: ಬೆಂಗಳೂರು ಸೇರಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 3ರಿಂದ ಭಾರೀ ಮಳೆ ಮುನ್ಸೂಚನೆ
Karnataka Rains: ರಾಜ್ಯದಲ್ಲಿ ಈಗಾಗಲೇ ಆರ್ಭಟಿಸಿ ಅವಾಂತರ ಸೃಷ್ಟಿಸಿದ ಮುಂಗಾರು ಮಳೆ ಮತ್ತೆ ಚುರುಕು ಪಡೆದಿದೆ. ಅದರಲ್ಲೂ, ಸೆಪ್ಟೆಂಬರ್ 3ರಿಂದ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ, ಎಲ್ಲೆಲ್ಲಿ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು (ಸೆಪ್ಟೆಂಬರ್ 1) ಮೋಡ ಕವಿದ ವಾತಾವರಣ ಇದ್ದು, ಮಧ್ಯಾಹ್ನ ಅಥವಾ ಸಂಜೆ ವೇಳೆಗೆ ರಣಮಳೆ ಸುರಿಯುವ ಸಾಧ್ಯತೆಯಿದೆ ಎನ್ನುವ ಮುನ್ಸೂಚನೆ ಇದೆ. ಈಗಾಗಲೇ ಕಳೆದ ಮೂರ್ನಾಲ್ಕು ದಿನಗಳಿಂದ ಸುರಿದ ಭಾರೀ ಮಳೆಯಿಮದಾಗಿ ನಗರದ ಹಲವೆಡೆ ಅವಾಂತಗಳೇ ಸೃಷ್ಟಿಯಾಗಿವೆ.
ಭಾರೀ ಮಳೆಯಿಂದಾಗಿ ನಗರದ ಹಲವೆಡೆ ರಸ್ತೆಗಳು ಚರಂಡಿಯಂತೆ ಮಾರ್ಪಟ್ಟು ವಾಹನ ಸವಾರರು ಪರದಾಡಿದರೆ, ಮತ್ತೊಂದೆಡೆ ಬೀದಿ ಬೀದಿ ವ್ಯಾಪಾರಿಗಳ ಜೀವನ ಅಸ್ತವ್ಯಸ್ತ ಆದಾಂತಾಗಿದೆ. ಹಾಗೆಯೇ ಮುಂದಿನ ಹಲವು ದಿನಗಳ ಕಾಲ ಬೆಂಗಳೂರು ಸೇರಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಈಗಾಗಲೇ ಭಾರೀ ಮಳೆಯಿಂದ ದೊಡ್ಡ ಅವಾಂತರಗಳೇ ಸೃಷ್ಟಿಯಾಗಿ ಜನಜೀವನ ಅಸ್ತವ್ಯಸ್ತವಾದ ಘಟನೆಗಳು ನಡೆದಿವೆ. ಕಳೆದ ಒಂದು ವಾರದಿಂದ ಬಿಡುವು ನೀಡಿದ್ದ ಮಳೆರಾಯ ಮತ್ತೆ ಆರ್ಭಟ ಶುರು ಮಾಡಿದ್ದು, ಕರವಾಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಭಾಗಗಳಲ್ಲಿ ಮುಂದಿನ ಒಂದು ವಾರ ವ್ಯಾಪಕವಾಗಿ ಧಾರಾಕಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ರಣ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅದರಲ್ಲೂ ಚೆನ್ನೈನಲ್ಲಿ ಮೇಘಸ್ಪೋಟ ಪರಿಣಾಮ ಕರ್ನಾಟಕ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎನ್ನುವ ಎಚ್ಚರಿಕೆಯನ್ನು ಸಹ ನೀಡಿದೆ.
ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ, ಕರಾವಳಿಯ ದಕ್ಷಿಣ ಕನ್ನಡ , ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಿಗೆ ಒಂದು ಯೆಲ್ಲೋ ಅಲರ್ಟ್ ನೀಡಲಾಗಿದೆ. ಅದರಲ್ಲೂ ಈ ಭಾಗಗಳಲ್ಲಿ ಸೆಪ್ಟೆಂಬರ್ 3 ಮತ್ತಯ 4 ಹೆಚ್ಚು ಮಳೆ ಸುರಿಯುವ ಸಾಧ್ಯತೆಯಿದೆ ಎನ್ನುವ ಮುನ್ಸೂಚನೆ ಇದ್ದು, ಈ ಎರಡು ದಿನ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಇನ್ನು ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 2 ಹಾಗೂ 3ರಂದು ಸಾಧಾರಣ ಸುರುಯುವ ಸಾಧ್ಯತೆಯಿದೆ. ಆದರೆ, ಬಳಿಕ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಇಂದು (ಸೆಪ್ಟೆಂಬರ್ 1) ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬಳಿಕ ಮುಂದಿನ ದಿನಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಅಂತಲೂ ಮುನ್ಸೂಚನೆ ನೀಡಿದೆ. ಈಗಾಗಲೇ ಭಾರೀ ಮಳೆಯಿಂದಾಗಿ ಹಲವು ಜಿಲ್ಲೆಗಳಲ್ಲಿ ಅವಾಂತರಗಳೆ ಸೃಷ್ಟಿಯಾಗಿವೆ. ಕೆಲವು ದಿನಗಳಿಂದ ಬಿಡುವು ನೀಡಿದ್ದ ಮಳೆರಾಯ ಮತ್ತೆ ಆರ್ಭಟಿಸುವ ಮುನ್ಸೂಚನೆ ಇದ್ದು, ಇನ್ನೂ ಏನೆಲ್ಲಾ ಅವಾಂತರಗಳು ಕಾದಿವೆಯೋ ಎನ್ನುವ ಆತಂಕದಲ್ಲಿ ಜನರಿದ್ದಾರೆ. ಈಗಾಗಲೇ ಭಾನುವಾರ (ಆಗಸ್ಟ್ 31) ಹಲವು ಜಿಲ್ಲೆಗಳಲ್ಲಿ ರಣಭೀಕರ ಮಳೆಯಾಗಿರುವ ಬಗ್ಗೆ ವರದಿಯಾಗಿದೆ.











Click it and Unblock the Notifications