Karnataka Rains: ರಾಜ್ಯಾದ್ಯಂತ ಮುಂದಿನ 2 ವಾರ ಭಾರೀ ಮಳೆ ಮುನ್ಸೂಚನೆ

Karnataka Rains: ಈಗಾಗಗಲೇ ರಾಜ್ಯದ್ಯಂತ ಮುಂಗಾರು ಮಳೆ ಆರ್ಭಟಿಸಿ ದೊಡ್ಡ ದೊಡ್ಡ ಅವಾಂತರಗಳನ್ನೇ ಸೃಷ್ಟಿಸಿದ್ದಾನೆ. ಇದೀಗ ಚಳಿಗಾಲದ ಆರಂಭವಾಗಿದ್ದು, ಇದರ ನಡುವೆಯೇ ಹಲವೆಡೆ ಮಳೆ ಮುಂದುವರೆದಿದೆ. ಹಾಗೆಯೇ ಮುಂದಿನ ಎರಡು ವಾರ ರಾಜ್ಯಾದ್ಯಂತ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯ ರಾಜಧಾನಿ ಬೆಂಗಳೂರಿನ ಹಲವೆಡೆ ಕಳೆದ ಮೂರು ದಿನಗಳಿಂದ ನಿನ್ನೆವರೆಗೂ ಅಂದರೆ ನವೆಂಬರ್ 16ರ ವರೆಗೆ ಮಳೆರಾಯ ಅಬ್ಬರಿಸಿದ್ದ. ಇನ್ನು ಇಂದು (ನವೆಂಬರ್ 17) ಬೆಳಗ್ಗೆಯಿಂದ ಸಂಜೆವರೆಗೂ ಮೋಡ ಕವಿದ ವಾತಾವರಣ ನಿರ್ಮಾಣವಾಗಿದ್ದು, ಮುಂದಿನ ಜೆಲವು ಗಂಟೆಗಳಲ್ಲಿ ಮಳೆ ಸುರಿಯುವ ಸಾಧ್ಯತೆಯಿದೆ ಎನ್ನುವ ಮುನ್ಸೂಚನೆ ಇದೆ. ಹಾಗೆಯೇ ಬೆಂಗಳೂರು ಸೇರಿದಂತೆ ಹಲವು ಜಿಲ್ಲಗಳಲ್ಲೂ ಕೂಡ ಇಂದು ಮಳೆಯಾಗಲಿದೆ ಎಂದು ತಿಳಿಸಿದೆ.

Karnataka Rains Heavy Rainfall Forecast for Next 2 Weeks Across State from November 17

ನವೆಂಬರ್ 25ರ ವರೆಗೆ ಎಲ್ಲೆಲ್ಲಿ ಮಳೆ?: ನವೆಂಬರ್ 17ರಿಂದ 25ರ ವರೆಗೂ ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಕೊಡಗು, ಹಾಸನ, ಮಂಡ್ಯ, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇದೇ ವೇಳೆ ಬಳ್ಳಾರಿ, ದಾವಣಗೆರೆ, ಶಿವಮೊಗ್ಗ, ತುಮಕೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ಚಿತ್ರದುರ್ಗ, ವಿಜಯನಗರ, ಬೆಳಗಾವಿ, ಧಾರವಾಡ, ಉತ್ತರ ಕನ್ನಡ, ಹಾವೇರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಡಿಸೆಂಬರ್ 3ರ ವರೆಗೆ ಎಲ್ಲೆಲ್ಲಿ ಮಳೆ?: ಇನ್ನು ಮತ್ತೊಂದೆಡೆ ನವೆಂಬರ್ 25ರಿಂದ ಡಿಸೆಂಬರ್ 3ರ ವರೆಗೂ ರಾಜ್ಯಾದ್ಯಂತ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಮೈಸೂರು, ಕೊಡಗು, ಚಾಮರಾಜನಗರ, ಮಂಡ್ಯ, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.

ವಿಜಯಪುರ, ಬಳ್ಳಾರಿ, ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಹುಬ್ಬಳ್ಳಿ, ಹಾವೇರಿ, ಚಿಕ್ಕಬಳ್ಳಾಪುರ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ, ವಿಜಯನಗರ, ತುಮಕೂರು, ರಾಮನಗರ, ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಎಚ್ಚರಿಕೆ ಸಂದೇಶವನ್ನು ನೀಡಿದೆ.

ಜಲಾಶಯಗಳು ಭರ್ತಿ: ಈಗಾಗಲೇ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾದ ಪರಿಣಾಮ ಬಹುತೇಕ ಪ್ರಮುಖ ಜಲಾಶಯಗಳು ಭರ್ತಿಯಾಗಿವೆ. ಈ ಭಾರೀ ಮುಂಗಾರು ಮಳೆ ಆರ್ಭಟಿಸಿದ ಹಿನ್ನೆಲೆ ಬಹುತೇಕ ಜಿಲ್ಲೆಗಳಲ್ಲಿ ಕೆರೆ-ಕಟ್ಟೆಗಳು, ಜಲಾಶಯಗಳು ಭರ್ತಿಯಾಗಿದ್ದು, ಇದರಿಂದ ಅನ್ನದಾತರ ಮುಖದಲ್ಲಿ ಮಂದಹಾಸ ಮೂಡಿದಂತಾಗಿದೆ. ಕೆಆರ್‌ಎಸ್‌, ಕಬಿನಿ, ಹೇಮಾವತಿ, ಹಾರಂಗಿ, ತುಂಗಭದ್ರಾ, ಭದ್ರಾ, ಆಲಮಟ್ಟಿ, ಘಟಪ್ರಭಾ ಸೇರಿದಂತೆ ರಾಜ್ಯದ ಬಹುತೇಕ ಪ್ರಮುಖ ಜಲಾಶಯಗಳು ಈ ಬಾರಿ ಭರ್ತಿಯಾಗಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+