Karnataka Rains: ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಅಬ್ಬರದ ಮಳೆ ಮುನ್ಸೂಚನೆ

Karnataka Rains: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆರಾಯ ಅಬ್ಬರಿಸಿ ಬೊಬ್ಬರೆದು ಅವಾಂತರಗಳನ್ನೇ ಸೃಷ್ಟಿಸಿದ್ದಾನೆ. ಇನ್ನು ಕೆಲವೆಡೆ ಜಿನುಗು ಮಳೆ ಮುಂದುವರೆದಿದೆ. ಹಾಗೆಯೇ ಮುಂದಿನ ಎರಡು ದಿನಗಳ ಕಾಲ ಈ ಭಾಗಗಳಲ್ಲಿ ಸುನಾಮಿಯಂತಹ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಾಹಿತಿ ಇಲ್ಲಿದೆ ತಿಳಿಯಿರಿ.

ಭಾರೀ ಮಳೆಯಿಂದ ಈಗಾಗಲೇ ಹಲವು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಬೆಳಗಾವಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಪ್ರವಾಹನ ವಾತಾವರಣ ನಿರ್ಮಾಣವಾಗಿದೆ. ಹಾಗೆಯೇ ಜುಲೈ 26ರವರೆಗೆ ಕರಾವಳಿ, ದಕ್ಷಿಣ ಒಳನಾಡು ಭಾಗದಲ್ಲಿ ಮಳೆ ಮತ್ತಷ್ಟು ಚುರುಕು ಪಡೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಈ ಭಾಗದ ಜನರು ಪ್ರವಾಹದ ಭೀತಿಯಲ್ಲಿ ಜೀವವನ್ನು ಕೈಯಲ್ಲಿಡಿದು ಜೀವನ ಸಾಗಿಸುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

Karnataka Rains Heavy rainfall forecast for next three days in these districts from july 24th

ಇನ್ನು ಇಂದಿನಿಂದ (ಜುಲೈ 24) ಜುಲೈ 27ರವರೆಗೂ ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ ಉತ್ತರ ಕನ್ನಡ, ಉಡುಪಿ, ದಕ್ಷಿಣ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಶಿವಮೊಗ್ಗ, ಕೊಡಗು, ಬೆಳಗಾವಿ, ಚಿಕ್ಕಮಗಳೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಮತ್ತೊಂದೆಡೆ ಇದೇ ವೇಳೆ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ಕಲಬುರಗಿ, ಬೀದರ್‌, ಬಾಗಲಕೋಟೆ, ದಾವಣಗೆರೆ, ಚಿತ್ರದುರ್ಗ, ತುಮಕೂರು ಸೇರಿದಂತೆ ಹಲವು ಜಿಲ್ಲೆಳಲ್ಲಿ ಸಾಧಾರಣ ಮಳೆಯಾಗಲಿದ ಎಂದು ತಿಳಿಸಿದೆ.

ಅದರಲ್ಲೂ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಪ್ರತ್ಯೇಕವಾದ ಭಾರೀ ಮಳೆಯಾಗು ಮುನ್ಸೂಚನೆ ಇದ್ದು, ಈ ಭಗದಲ್ಲಿ ಗಾಳಿಯ ವೇಗ ಗಂಟೆಗೆ 30-40 ಕಿಲೋ ಮೀಟರ್‌ವರೆಗೆ ಬೀಸುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಎಲ್ಲಾ ಜಿಲ್ಲೆಗಳ ಹಲವು ಭಾಗಗಳಲ್ಲಿ, ದಕ್ಷಿಣ ಒಳನಾಡಿದ ಕೆಲವೆಡೆ ಸಾಧಾರಣ ಮಳೆಯಾಗಲಿದೆ ಎಂದು ಎಂದು ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+