Karnataka Rains: ವಾಯುಭಾರ ಕುಸಿತ: ಮುಂದಿನ ನಾಲ್ಕು ದಿನ ರಣಚಂಡಿ ಮಳೆ ಮುನ್ಸೂಚನೆ: ಹವಾಮಾನ ಇಲಾಖೆ ಎಚ್ಚರಿಕೆ ಏನು?
Karnataka Monsoon Rains: ರಾಜ್ಯದಲ್ಲಿ ಮುಂಗಾರು ಮಳೆ ಚುರುಕು ಪಡೆದಿದೆ. ಮತ್ತೊಂದೆಡೆ ಬಂಗಾಳಕೊಲ್ಲಿ ವಾಯುಭಾರ ಕುಸಿತ ಪರಿಣಾಮ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಿಂದಾಗಿ ಕೆರೆ-ಕಟ್ಟೆಗಳು, ನದಿಗಳು ಅಪಾಯದ ಮಟ್ಟದಲ್ಲಿ ತುಂಬಿ ಹರಿಯುತ್ತಿವೆ. ಹಾಗೆಯೇ ಮುಂದಿನ ನಾಲ್ಕು ದಿನಗಳ ಕಾಲ ಈ ಭಾಗಗಳಲ್ಲಿ ಮಳೆರಾಯ ರಣಚಂಡಿ ಅವಾತಾರ ತಾಳಲಿದ್ದಾನೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ ಎಲ್ಲೆಲ್ಲಿ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಎರು ವಾರಗಳಿಂದ ಜಿನುಗು ಮಳೆ ಸುರಿಯುತ್ತಲಿದೆ. ಇಂದು (ಆಗಸ್ಟ್ 20) ಬೆಳಗ್ಗೆ ಸಹ ನಗರದ ಹಲವೆಡೆ ಮೋಡ ಕವಿದ ವಾತಾವರಣ ಇದ್ದು, ಭಾರೀ ಮಳೆಯಾಗುವ ಸಾಧ್ಯತೆಯಿದೆ. ಹಾಗೆಯೇ ಮುಂದಿನ ಹಲವು ದಿನಗಳ ಕಾಲ ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ರಣಭೀಕರ ಮಳೆ ಬೀಳುವ ಸಾಧ್ಯತೆಯಿದೆ ಎನ್ನುವ ಮುನ್ಸೂಚನೆ ಇದೆ.

ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ ಇಂದು ಬೆಳಗಾವಿ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಅಲ್ಲದೆ, ಆಗಸ್ಟ್ 21ರಂದು ಸಹ ಕರಾವಳಿಯ ಎಲ್ಲಾ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಇನ್ನು ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ರಾಮನಗರ, ತುಮಕೂರು ಸೇರಿದಂತೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ವಿಜಯಪುರ, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ರಾಮನಗರ, ತುಮಕೂರು ಸೇರಿದಂತೆ ಬಹುತೇಕ ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಮುಂದಿನ ಹಲವು ದಿನಗಳ ಕಾಲ ಈ ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಅಂತಲೂ ಎಚ್ಚರಿಕೆ ಸಂದೇಶವನ್ನು ರವಾನಿಸಿದೆ.
ಅದರಲ್ಲೂ ಗಾಳಿಯ ವೇಗ ಗಂಟೆಗೆ 40-50 ಕಿಲೂ ಮೀಟರ್ ವೇಗದಲ್ಲಿ ಬೀಸುವ ಸಾಧ್ಯತೆ ಇದ್ದು, ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಜೊತೆಗೆ ನದಿ ತೀರದ ಜನರು ಎಚ್ಚರಿಕೆಯಿಂದ ಇರುವಂತರಯೂ ಸೂಚಿಸಲಾಗಿದೆ. ಇನ್ನು ಬೆಂಗಳೂರಿನಲ್ಲಿಂದು ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಎಲ್ಲೆಲ್ಲಿ ರಜೆ?: ಭಾರೀ ಮಳೆ ಹಿನ್ನೆಲೆ ಇಂದು (ಆಗಸ್ಟ್ 20) ಮಕ್ಕಳ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಹವಾಮಾನ ಇಲಾಖೆ, ಹಾವೇರಿ, ಬೆಳಗಾವಿ, ಧಾರವಾಡ , ಉತ್ತರ ಕನ್ನಡ , ಬಾಗಲಕೋಟೆ ಸೇರಿದಂತೆ ಒಟ್ಟು 5 ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಭಾರೀ ಮಳೆ ಮುಂದುವರೆದ ಹಿನ್ನೆಲೆ ಮಕ್ಕಳ ಹಿತದೃಷ್ಟಿಯಿಂದ ಬೆಳಗಾವಿ ಸೇರಿದಂತೆ ಜಿಲ್ಲೆಯ ಬೈಲಹೊಂಗಲ, ಕಿತ್ತೂರ, ಖಾನಾಪುರ, ರಾಮದುರ್ಗ, ಸವದತ್ತಿ, ಚಿಕ್ಕೋಡಿ, ಹುಕ್ಕೇರಿ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಬೆಳಗಾವಿ, ಬೈಲಹೊಂಗಲ, ಕಿತ್ತೂರು, ಖಾನಾಪುರ, ರಾಮದುರ್ಗ ಹಾಗೂ ಸವದತ್ತಿ ತಾಲೂಕಿನಲ್ಲಿ ಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಈಗಾಗಲೇ ಭಾರೀ ಮಳೆ ಹಿನ್ನೆಲೆ ಹಲವು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದ್ದು, ಆ ರಜೆಗಳನ್ನು ಸರಿದೂಗಿಸುವ ಕೆಲಸವನ್ನು ಮಾಡಲಾಗುತ್ತಿದೆ. ವಿದ್ಯಾರ್ಥಿಗಳ ವಿದ್ಯಾಭ್ಯಾಸ ಹಿಂದುಳಿಯಬಾರದು ಎನ್ನುವ ಉದ್ದೇಶದಿಂದ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.












Click it and Unblock the Notifications