Karnataka Rains: ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಭಾರೀ ಮಳೆ ಮುನ್ಸೂಚನೆ

Karnataka Rains: ಈಗಾಲೇ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂಗಾರು ಮಳೆಯ ಆರ್ಭಟ ಹೆಚ್ಚಾಗುತ್ತಲೇ ಇದೆ. ಹಾಗೆಯೇ ಇಂದಿನಿಂದ ಜೂನ್‌ 25ರವರೆಗೂ ಈ ಭಾಗಗಳಲ್ಲಿ ಭಾರೀ ಮಳೆ ಸುರಿಯಲಿದೆ ಎನ್ನುವ ಮುನ್ಸೂಚನೆ ಇದೆ. ಹಾಗಾದರೆ ಎಲ್ಲೆಲ್ಲಿ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.

ಈಗಾಗಲೇ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ದಾವಣಗೆರೆ, ಚಾಮರಾಜನಗರ, ಧಾರವಾಡ, ಕೊಡಗು, ದಕ್ಷಿಣ ಕನ್ನಡ, ಉಡುಪಿ, ಮೈಸೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆರಾಯ ಆರ್ಭಸಿದ್ದಾನೆ. ಹಾಗೆಯೇ ಅದರಲ್ಲೂ ಮುಂದಿನ ಒಂದು ವಾರಗಳ ಕಾಲ ಕರಾವಳಿ ಭಾಗದಲ್ಲಿ ಅಬ್ಬರದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Karnataka Rains Heavy rainfall forecast for the next 5 days in these districts from june 19

ಎಲ್ಲೆಲ್ಲಿ ಮಳೆ ಸುರಿಯಲಿದೆ?: ಇನ್ನು ಕರ್ನಾಟಕದ ಕರಾವಳಿ ಕರ್ನಾಟಕ ಮತ್ತು ಮಲೆನಾಡಿನ ಭಾಗಗಳಲ್ಲಿ ಮುಂದಿನ 5 ದಿನಗಳ ಕಾಲ ಸಾಧಾರಣದಿಂದ ಚದುರಿದ ಮಳೆಯಾಗುವ ನಿರೀಕ್ಷೆಯಿದೆ. ಅಷ್ಟೇ ಅಲ್ಲದೆ, ಮುಂದಿನ ದಿನಗಳಲ್ಲಿ ಉತ್ತರ ಒಳನಾಡು ಮತ್ತು ದಕ್ಷಿಣ ಒಳಾನಾಡು ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆಯಿದೆ ಅಂತಲೂ ಹವಾಮಾನ ಇಲಾಖೆ ತಿಳಿಸಿದೆ.

ಎಷ್ಟು ಪ್ರಮಾಣ ಮಳೆ ನಿರೀಕ್ಷೆ?: ಮತ್ತೊಂದೆಡೆ ಕರಾವಳಿ ಭಾಗದಲ್ಲಿ ಇಂದಿನಿಂದ ಅಂದರೆ ಜೂನ್‌ 19ರಿಂದ 25ರವರೆಗೆ 300-400 ಮಿಲಿ ಮೀಟರ್‌ ಮತ್ತು ಮಲೆನಾಡಿನಲ್ಲಿ 200-300 ಮಿಲಿ ಮೀಟರ್‌ ಮಳೆಯಾಗುವ ನಿರೀಕ್ಷೆಯಿದೆ ಎಂದು ಎಂದು ತಿಳಿಸಿದೆ. ಇನ್ನು ಇಂದು (ಜೂನ್‌ 19) ಮಟ ಮಟ ಮಧ್ಯಾಹ್ನವೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಿದೆ. ಮಂಗಳೂರು ಕರಾವಳಿಯ ಸಮುದ್ರದ ಭಾಗದಲ್ಲಿ ಮಳೆರಾಯನ ಆರ್ಭಟ ಮುಂದುವರೆದಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+