Karnataka Rains: ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ 5 ದಿನ ಗುಡುಗು, ಮಿಂಚು ಸಹಿತ ಮಳೆ ಮುನ್ಸೂಚನೆ

Karnataka Rains: ಇದೀಗ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆರಾಯನ ಆರ್ಭಟ ಕಡಿಮೆಯಾಗಿದ್ದು, ಕೆಲವು ಭಾಗಗಳಲ್ಲಿ ಮಾತ್ರ ಅಬ್ಬರಿಸುತ್ತಿದ್ದಾರೆ. ಹಾಗೆಯೇ ಮುಂದಿನ ಐದು ದಿನಗಳ ಕಾಲ ಈ ಭಾಗಗಳಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಎಲ್ಲೆಲ್ಲಿ ಮಳೆಯಾಗಲಿದೆ ಎಂದು ಇಲ್ಲಿ ತಿಳಿಯಿರಿ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬೆಳಗ್ಗೆಯಿಂದ ಮಧ್ಯಾಹ್ನದವರೆಗೂ ಬಿಸಿಲಿನ ವಾತಾವರಣ ಮುಂದುವರೆಯಲಿದ್ದು, ಬಳಿಕ ಜಿನುಗು ಮಳೆಯಾಗುವ ಮುನ್ಸೂಚನೆ ನೀಡಿದೆ. ಹಾಗೆಯೇ ಹಲವು ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಮಳೆ ಮುಂದುವರೆಯಲಿದೆ ಎನ್ನುವ ಮುನ್ಸೂಚನೆ ಇದೆ.

Karnataka Rains Heavy Rainfall forecast for the next 5 days in these districts from september 22

ಮುಂದಿನ 5 ದಿನಗಳ ಕಾಲ ರಾಜ್ಯದ ಕರಾವಳಿ & ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತ ಮಲೆನಾಡು ಜಿಲ್ಲೆಗಳಿಗೆ ಚದುರಿದಂತೆ ವ್ಯಾಪಕವಾಗಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 24ರ ವರೆಗೆ ಗುಡುಗು ಮಿಂಚು ಸಹಿತ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ ಮತ್ತು ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ಹಾಗೂ ಕರವಳಿ ಜಿಲ್ಲೆಗೆ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು , ಚಾಮರಾಜನಗರ, ಉಡುಪಿ , ಹಾಸನ, ಕೊಡಗು, ಶಿವಮೊಗ್ಗ ಭಾಗಗಳ ಹಲವೆಡೆ ಮುಂದಿನ 5 ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಉತ್ತರ ಒಳನಾಡು ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಬಿಜಾಪುರ, ಬೀದರ್, ಬಳ್ಳಾರಿ, ಧಾರವಾಡ, ಹಾವೇರಿ, ಗದಗ, ಗುಲ್ಬರ್ಗಾ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಸೆಪ್ಟೆಂಬರ್‌ 24ರ ವರೆಗೆ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.

ದಕ್ಷಿಣ ಒಳನಾಡು ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ತುಮಕೂರು, ಹಾಸನ, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲೂ ಸೆಪ್ಟೆಂಬರ್‌ 24ರ ವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಒಟ್ಟಿನಲ್ಲಿ ಹೇಳುವುದಾದರೆ, ಜೂನ್‌ ಆರಂಭವಾಗುತ್ತಿದ್ದಂತೆ ರಾಜ್ಯಕ್ಕೆ ಮುಂಗಾರು ಎಂಟ್ರಿ ಕೊಟ್ಟಿದ್ದು, ಆಗಸ್ಟ್‌ವರೆಗೂ ಕೂಡ ಮಳೆರಾಯ ಅಬ್ಬರಿಸಿ ಬೊಬ್ಬೆರೆದಿದ್ದ. ಪರಿಣಾಮ ರಾಜ್ಯದ ಬಹುತೇಕ ಭಾಗಗಲ್ಲಿ ಬತ್ತಿಹೂಗುವ ಹಂತ ತಲುಪಿದ್ದ ಕೆರೆ, ಕಟ್ಟೆಗಳು ಹಾಗೂ ಪ್ರಮುಖ ಜಲಾಶಯಗಳು ತುಂಬಿವೆ. ಇದರಿಂದ ಅನ್ನದಾತರ ಮುಖದಲ್ಲಿ ಮಂದಹಾಸ ಮೂಡಿದಂತಾಗಿದೆ. ಇದೀಗ ಮತ್ತೆ ಮಳೆರಾಯನ ಆರ್ಭಟ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮನೆಗಳಿಗೆ ನುಗ್ಗಿದ ಮಳೆ ನೀರು: ಗದಗದ ಬೆಟಗೇರಿ ಅವಳಿ ನಗರದಲ್ಲಿ ನಿನ್ನೆ (ಸೆಪ್ಟೆಂಬರ್ 21) ಒಂದು ಗಂಟೆಗೂ ಹೆಚ್ಚು ಕಾಲ ಧಾರಾಕಾರ ಮಳೆ ಸುರಿದಿದ್ದು, ದೊಡ್ಡ ದೊಡ್ಡ ಅವಾಂತರಗಳೇ ಸೃಷ್ಟಿಯಾಗಿವೆ.

ಭಾರೀ ಮಳೆಯಿಂದ ಬೆಟಗೇರಿಯ ಟರ್ನಲ್ ಪೇಟೆಯಲ್ಲಿನ ಮನೆಗಳಿಗೆ ನೀರು ನುಗ್ಗಿದೆ. ರಸ್ತೆಗಳೆಲ್ಲಾ ಕೆರೆಯಂತಾಗಿದ್ದು, ಜನರು ಮಳೆ ನೀರಿನಲ್ಲಿ ನಡೆದುಕೊಂಡು ಹೋಗುವ ಪರಿಸ್ಥಿತಿ ಜಿರ್ಮಾಣವಾಗಿದೆ. ಅಲ್ಲದೆ, ಭಾರಿ ಮಳೆಯಿಂದಾಗಿ ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿದೆ. ಇದರಿಂದ ಜನಜೀವನ ಅಸ್ತವ್ಯಸ್ತವಾಗಿದೆ.

ಟರ್ನಲ್ ಪೇಟೆಯಲ್ಲಿ ನೀರು ನುಗ್ಗಿದರಿಂದ ಮನೆಯಲ್ಲಿನ ವಸ್ತುಗಳು
ಸಂಪೂರ್ಣ ಜಲಾವೃತವಾಗಿವೆ. ಇದರಿಂದ ಕಂಗಲಾಗಿರುವ ಜನರು ಗದಗ-ಬೆಟಗೇರಿ ನಗರಸಭೆ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.

ಪ್ರತಿ ಭಾರಿ ಮಳೆ ಬಂದಾಗಲೂ ಮನೆಗಳಿಗೆ ನೀರು ನುಗ್ಗುತ್ತದೆ. ಅಷ್ಟಾದರೂ ಸ್ಥಳಕ್ಕೆ ಬಾರದ ನಗರಸಭೆ ಸದಸ್ಯೆ ಶಕುಂತಲಾ ಅಕ್ಕಿ, ಅಧಿಕಾರಿಗಳ ವಿರುದ್ಧ ಜನರು ಆಕ್ರೋಶ ಹೊರಹಾಕಿದ್ದಾರೆ. ಇನ್ನು ಗದಗ-ರೋಣ ರಸ್ತೆ ತಡೆದು ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ. ಅಲ್ಲದೇ ನೀರು ಮನೆಗಳ ಒಳಗಡೆ ಬಾರದಂತೆ ಕ್ರಮ ವಹಿಸುವಂತೆ ಆಗ್ರಹಿಸಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+