Karnataka Rains: ಕೆಲವೇ ಕ್ಷಣಗಳಲ್ಲಿ ರಾಜ್ಯದ ಈ ಜಿಲ್ಲೆಗಳಲ್ಲಿ ಬಿರುಗಾಳಿ ಮಳೆ ಮುನ್ಸೂಚನೆ
Karnataka Rains: ಇದೀಗ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ರಣಬಿಸಿಲು ಮುಂದುವರೆದಿದೆ. ಈ ನಡುವೆಯೂ ಹಲವೆಡೆ ಧಾರಾಕಾರ ಮಳೆಯಾಗುತ್ತಿದೆ. ಹಾಗೆಯೇ ಇಂದು (ಏಪ್ರಿಲ್ 4) ಹಲವು ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಬಿರುಗಾಳಿ ಮಳೆ ಸುರಿಯುವ ಸಾಧ್ಯತೆಯಿದೆ ಎನ್ನುವ ಮುನ್ಸೂಚನೆ ಇದೆ. ಹಾಗಾದ್ರೆ ಎಲ್ಲೆಲ್ಲಿ ಎಂದು ಇಲ್ಲಿ ತಿಳಿಯಿರಿ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬೆಳಗ್ಗೆ ಮೋಡ ಕವಿದ ವಾತಾವರಣ ಇದ್ದು, ಬೆಳಗ್ಗೆ 10 ಗಂಟೆಯಿಂದ ಸಂಜೆವರೆಗೂ ಬಿಸಿಲು ಮುಂದುವರೆದಿತ್ತು. ಬಳಿಕ ರಾತ್ರಿಯಾಗುತ್ತಿದ್ದಂತೆ ನಗರದ ಹಲವೆಡೆ ಸಾಧಾರಣ ಜಿನುಗು ಮಳೆಯಾಗಿದೆ. ಇನ್ನೂ ಕೆಲವೇ ಕ್ಷಣಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎನ್ನುವ ಮುನ್ಸೂಚನೆ ಇದೆ. ಹಾಗೆಯೇ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ತಿಳಿಸಿದೆ.

ಈಗಾಗಲೇ ಇಂದು ಸಂಜೆ ವೇಳೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಿದೆ. ಮೈಸೂರು, ಚಿಕ್ಕಮಗಳೂರು, ಬೆಂಗಳೂರು, ನಗರ, ಬೆಂಗಳೂರು ಗ್ರಾಮಾಂತರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗಿದೆ. ಹಾಗೆಯೇ ಕೆಲವೇ ಕ್ಷಣಗಳಲ್ಲಿ ಈ ಜಿಲ್ಲೆಗಳು ಸೇರಿದಂತೆ ಶಿವಮೊಗ್ಗ, ಕೊಡಗು, ಮಂಡ್ಯ, ರಾಮನಗರ, ಕೋಲಾರ, ಚಾಮರಾಜನಗರ, ದಕ್ಷಿಣ ಕನ್ನಡ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎನ್ನುವ ಮುನ್ಸೂಚನೆ ಇದೆ.
ಅಲ್ಲದೆ, ವಿಜಯನಗರ, ತುಮಕೂರು, ಹಾಸನ, ಚಿತ್ರದುರ್ಗ, ಬಳ್ಳಾರಿ, ಹಾವೇರಿ, ಧಾರವಾಡ, ಬೀದರ್, ಬೆಳಗಾವಿ, ಉತ್ತರ ಕನ್ನಡ, ಉಡುಪಿ ಭಾರೀ ಮಳೆಯಾಗುವ ಸಾಧ್ಯಯತೆಯಿದೆ. ಗದಗ, ಕೊಪ್ಪಳ, ರಾಯಚೂರು, ಚಿಕ್ಕಬಳ್ಳಾಪುರ, ದಾವಣಗೆರೆ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎನ್ನುವ ಮುನ್ಸೂಚನೆ ಇದೆ.
ಬೆಂಗಳೂರಿನಲ್ಲಿ ಎಲ್ಲೆಲ್ಲಿ ಮಳೆ?: ನಿನ್ನೆ ಬೆಂಗಳೂರಿನ ಹಲವು ಭಾಗಗಳಲ್ಲಿ ಭಾರೀ ಮಳೆಯಿಂದ ಅವಾಂತರಗಳೇ ಸೃಷ್ಟಿಯಾಗಿವೆ. ಬಸವನಗುಡಿ, ಗಿರಿನಗರ, ಜಯನಗರ, ಸಿಲ್ಕ್ ಬೋರ್ಡ್, ಬಿಟಿಎಂ ಲೇಔಟ್, ಬನಶಂಕರಿ, ನಾಯಂಡನಹಳ್ಳಿ, ಬೊಮ್ಮನಹಳ್ಳಿ, ಎಲೆಕ್ಟ್ರಾನಿಕ್ ಸಿಟಿ, ವೈಟ್ಫೀಲ್ಡ್ ಸೇರಿ ಹಲವು ಭಾಗಗಳಲ್ಲಿ ಮಳೆ ಸುರಿದಿದೆ. ಅದರಲ್ಲು ಎಚ್ಎಸ್ಆರ್ ಲೇಔಟ್, ಬಿಟಿಎಂ ಲೇಔಟ್, ಕೋರಮಂಗಲದ ಹಲವೆಡೆ ಅರ್ಧ ಗಂಟೆಗೂ ಹೆಚ್ಚು ಸಮಯ ಮಳೆ ಸುರಿದ ಪರಿಣಾಮ ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸವಾರರು ಪರದಾಡಿದ ಘಟನೆಗಳು ನಡೆದಿವೆ.
ಇನ್ನು ಬೆಂಗಳೂರಿನಲ್ಲಿ ಗುರುವಾರ ಬೆಳಗ್ಗೆಯಿಂದಲೇ ರಾಜಧಾನಿಯಲ್ಲಿ ಮಳೆ ಶುರುವಾದ ಹಿನ್ನೆಲೆ ತಾಪಮಾನ 2 ರಿಂದ 3 ಡಿಗ್ರಿ ಸೆಲ್ಸಿಯಸ್‌ನಷ್ಟು ಇಳಿಕೆಯಾಗಿದೆ ಎಂದು ವರದಿಯಾಗಿದೆ. ಇದೀಗ ಮತ್ತೆ ಶುಕ್ರವಾರ ತಾಪಮಾನದಲ್ಲಿ ಏರಿಕೆಯಾಗಿದ್ದು, ಸಂಜೆ ವೇಳೆಗೆ ಹಲವೆಡೆ ಜಿನುಗು ಮಳೆಯಾಗಿದೆ.












Click it and Unblock the Notifications