Karnataka Rains: ರಾಜ್ಯದಲ್ಲಿ ಮುಂದಿನ ಒಂದು ಭಾರೀ ಮಳೆ ಮನ್ಸೂಚನೆ; ಶಾಲೆಗಳಿಗೆ ರಜೆ ಘೋಷಣೆ ಸಾಧ್ಯತೆ
Karnataka Rains: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂಗಾರು ಮಳೆ ಆರ್ಭಟ ಮುಂದುವರೆದಿದೆ. ಹಾಗೆಯೇ ಮುಂದಿನ ಒಂದು ವಾರ ಈ ಭಾಗಗಳಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ ಎಲ್ಲೆಲ್ಲಿ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು (ಜುಲೈ 16) ಮೋಡ ಕವಿದ ವಾತಾವರಣ ಇದ್ದು, ಮಧ್ಯಾಹ್ನ ಅಥವಾ ಸಂಜೆ ವೇಳೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎನ್ನುವ ಮುನ್ಸೂಚನೆ ಇದೆ. ಅಲ್ಲದೆ, ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಹಲವು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಈಗಾಗಲೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾದಂತಹ ಸಂದರ್ಭಗಳಲ್ಲಿ ಶಾಲೆಗಳಿಗೆ ನೀಡಲಾಗಿದ್ದು, ಈ ರಜೆಗಳನ್ನು ಸರಿದೂಗಿಸುವ ಕೆಲಸಗಳು ಕೂಡ ನಡೆಯುತ್ತಿದೆ. ಇದೀಗ ಮತ್ತೆ ಒಂದು ವೇಳೆ ಭಾರೀ ಮಳೆ ಮುಂದುವರೆಯುವ ಮುನ್ಸೂನೆ ಇರುವುದರಿಂದ ಹಲವೆಡೆ ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ರಜೆ ಘೋಷಿಸುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.
ಎಲ್ಲೆಲ್ಲಿ ಯೆಲ್ಲೋ, ಆರೆಂಜ್ ಅಲರ್ಟ್?: ಇದೀಗ ದಕ್ಷಿಣ ಕನ್ನಡ , ಉಡುಪಿ ಉತ್ತರ ಕನ್ನಡದಲ್ಲಿ ಧಾರಾಕಾರ ಮಳೆ ಆಗುತ್ತಿದ್ದು, ಮುಂದಿನ ಒಂದು ವಾರದವರೆಗೂ ಭಾರೀ ಮಳೆ ಮುಂದುವರೆಯವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ ಮಳೆ ಹಿನ್ನೆಲೆ ಈ ಭಾಗದ ಜಿಲ್ಲೆಗಳಿಗೆ ಜುಲೈ 16 ಹಾಗೂ 17ರಂದು ಆರೆಂಜ್ ಅಲರ್ಟ್, ಜುಲೈ 18 ಮತ್ತು 19ರಂದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಅಲ್ಲದೆ, ಜುಲೈ 20ರಿಂದ ಮಳೆ ಪ್ರಮಾಣ ಹೆಚ್ಚಾಗಲಿದೆ ಎಂದು ಮುನ್ಸೂಚನೆ ನೀಡಿದೆ.
ಇಂದು (ಜುಲೈ 16) ಬೆಳಗಾವಿ ಜಿಲ್ಲೆಯಲ್ಲೂ ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಜುಲೈ 17ರಂದು ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಇನ್ನು ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ, ಕೊಡಗು ಮತ್ತು ಚಿಕ್ಕಮಗಳೂರಿಗೆ ಮುಂದಿನ 2 ದಿನ ಭಾರಿ ಮಳೆ ಹಿನ್ನಲೆ ಯೆಲ್ಲೋ ಅಲರ್ಟ್, ಜುಲೈ 18 ಮತ್ತು 19ರಂದು ಚಿಕ್ಕಮಂಗಳೂರು, ಹಾಸನ ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಮೀನುಗಾರರಿಗೆ ಪ್ರಮುಖ ಸಂದೇಶ: ಭಾರೀ ಮುನ್ಸೂಚನೆ ಇರುವುದರಿಂದ ಮುಂದಿನ ಹಲವು ದಿನಗಳವರೆಗೆ ಮೀನುಗಾರಿಕೆಗೆ ಸಮುದ್ರಕ್ಕೆ ಇಳಿಕೆದಂತೆ ಸೂಚನೆ ನೀಡಲಾಗಿದೆ. ಒಂದು ವೇಳೆ ಇಳಿದರೂ ಕಡ್ಡಾಯವಾಗಿ ಜೀವರಕ್ಷಕ ಸಾಧನಗಳನ್ನು ಬಳಸಿ ಸುರಕ್ಷಿತ ಮೀನುಗಾರಿಕೆಗೆ ಮುಂದಾಗುವಂತೆ ಪ್ರಕಟಣೆಯಲ್ಲಿ ಸೂಚನೆ ನೀಡಿದೆ.
ಈಗಾಗಲೇ ಕರವಾಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯಿಂದಾಗಿ ದೊಡ್ಡ ದೊಡ್ಡ ಅನಾಹುತಗಳೇ ಸಂಭವಿಸಿವೆ. ಹಾಗೆಯೇ ಮುಂದಿನ ಹಲವು ದಿನಗಳವರೆಗೆ ಭಾರೀ ಮಳೆ ಮುಂದುವರೆಯುವ ಮುನ್ಸೂಚನೆ ಹಿನ್ನೆಲೆ ಈ ಭಾಗದ ಜನರು ಇನ್ನೇನು ಅನಾಹುತಗಳು ಕಾದಿವೆಯೋ ಎನ್ನುವ ಆತಂಕದಲ್ಲಿ ಜೀವನ ಸಾಗಿಸುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.












Click it and Unblock the Notifications