Karnataka Rains: ರಾಜ್ಯದ ಈ ಜಿಲ್ಲೆಗಳಿಗಿಂದು ಭಾರಿ ಮಳೆ ಮುನ್ಸೂಚನೆ
Karnataka Rains: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮತ್ತೆ ಮಳೆರಾಯನ ಆರ್ಭಟ ಮುಂದುವರೆದಿದೆ. ಹಾಗೆಯೇ ಗುರುವಾರ (ಅಕ್ಟೋಬರ್ 1) ಕೂಡ ರಾಜಧಾನಿ ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಭಾರಿ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ ಎಲ್ಲೆಲ್ಲಿ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ರಾಜ್ಯದಲ್ಲಿ ನೈಋತ್ಯ ಮುಂಗಾರು ಮಾರುತಗಳು ದಕ್ಷಿಣ ಒಳನಾಡಿನ ಭಾಗಗಳಲ್ಲಿ ಮತ್ತೆ ಚುರುಕುಗೊಂಡಿದ್ದು, ಇಂದು (ಅಕ್ಟೋಬರ್ 1) ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡು ಮತ್ತು ಕರಾವಳಿಯ ಭಾಗಗಳಲ್ಲಿ ಮಳೆಯ ಅಬ್ಬರ ಹೆಚ್ಚಾಗುವ ನಿರೀಕ್ಷೆಯಿದ್ದು, ಮುನ್ನೆಚ್ಚರಿಕೆಯಾಗಿ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಭಾರಿ ಮಳೆ ಮುನ್ಸೂಚನೆ ಎಚ್ಚರಿಕೆ
ಹವಾಮಾನ ಇಲಾಖೆ ವರದಿ ಪ್ರಕಾರ, ಕರಾವಳಿ ಭಾಗದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಒಂದೆರಡು ಕಡೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಗುಡುಗು, ಸಿಡಿಲು ಸಹಿತ ಸಾಧಾರಣ ಮಳೆಯಾಗಬಹುದು. ಜೊತೆಗೆ ಈ ಭಾಗಗಳಲ್ಲಿ ಗಂಟೆಗೆ 30 ರಿಂದ 40 ಕಿಲೋ ಮೀಟರ್ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ಸಂದೇಶವನ್ನು ರವಾನೆ ಮಾಡಿದೆ.
ದಕ್ಷಿಣ ಒಳನಾಡಿನಲ್ಲಿ ಎಲ್ಲೆಲ್ಲಿ ಮಳೆ ಮುನ್ಸೂಚನೆ
ದಕ್ಷಿಣ ಒಳನಾಡಿದ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ದಾವಣಗೆರೆ, ತುಮಕೂರು ಮತ್ತು ಚಿಕ್ಕಬಳ್ಳಾಪುರ, ಮೈಸೂರು, ಮಂಡ್ಯ, ರಾಮನಗರ, ಚಾಮರಾಜನಗರ, ಕೋಲಾರ, ಚಿತ್ರದುರ್ಗ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಒಳನಾಡಿನ ಹವಾಮಾನದ ವಿವರ
ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ ಹಾಗೂ ಕೊಪ್ಪಳ ಜಿಲ್ಲೆಗಳ ಕೆಲವೆಡೆ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ. ಆದರೆ ಬಾಗಲಕೋಟೆ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ ಎಂದು ತಿಳಿಸಿದೆ.
ಎಲ್ಲೆಲ್ಲಿ ಎಷ್ಟು ಸೆ.ಮೀ. ಮಳೆ?
ಕಳೆದ 24 ಗಂಟೆಗಳ ಅವಧಿಯಲ್ಲಿ ತುಮಕೂರು ಜಿಲ್ಲೆಯ ಕಿಬ್ಬನಹಳ್ಳಿಯಲ್ಲಿ 10 ಸೆಂಟಿ ಮೀಟರ್ ಮಳೆಯಾಗಿದ್ದರೆ, ಚಿಕ್ಕನಹಳ್ಳಿಯಲ್ಲಿ 9 ಸೆಂ.ಮೀ. ಮತ್ತು ಸಿರಾದಲ್ಲಿ 9 ಸೆಂ.ಮೀ. ಮಳೆಯಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಯಗಟಿಯಲ್ಲಿ 7 ಸೆಂ.ಮೀ. ಮಳೆ ದಾಖಲಾಗಿದೆ. ಉತ್ತರ ಒಳನಾಡಿನಲ್ಲಿ ಸಾಧಾರಣ ಮಳೆಯಾಗಿದ್ದರೆ, ಕರಾವಳಿ ಭಾಗದಲ್ಲಿ ಒಣಹವೆಯೇ ಕಂಡುಬಂದಿತ್ತು. ಆದರೆ ಮುಂದಿನ 24 ಗಂಟೆಗಳಲ್ಲಿ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಮಳೆಯ ಪ್ರಮಾಣ ಗಮನಾರ್ಹವಾಗಿ ಹೆಚ್ಚಾಗುವ ನಿರೀಕ್ಷೆಯಿದೆ ಎಂದು ಮುನ್ಸೂಚನೆ ನೀಡಿದೆ.


Click it and Unblock the Notifications
