Karnataka Rains: ಮಳೆ.. ಮಳೆ.. ಮಳೆ.. ಕೆಲವೇ ಕ್ಷಣಗಳಲ್ಲಿ ರಾಜ್ಯದ ಈ ಜಿಲ್ಲೆಗಳಲ್ಲಿ ಸುರಿಯಲಿದೆ ಗುಡುಗು, ಸಿಡಿಲು ಸಹಿತ ರಣಮಳೆ
Karnataka Rains: ಈಗಾಗಲೇ ರಾಜ್ಯದ್ಯಂತ ಬಹುತೇಕ ಭಾಗಗಳಲ್ಲಿ ಮುಂಗಾರು ಚುರು ಪಡೆದಿದೆ ಎಂದು ಹೇಳಲಾಗುತ್ತಿತ್ತು. ಆದರೆ ಅಸಲಿ ಮುಂಗಾರು ಮಳೆ ಇನ್ನು ಮುಂದಿನ ದಿನಗಳಲ್ಲಿ ಆರಂಭವಾಗಲಿದ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮತ್ತೊಂದೆಡೆ ಇಂದು (ಜೂನ್ 16) ಈ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಅಬ್ಬರದ ಮಳೆ ಸುರಿಯಲಿದೆ ಎಂದು ಮುನ್ಸೂಚನೆ ನೀಡಿದೆ. ಹಾಗಾದರೆ ಎಲ್ಲೆಲ್ಲಿ ಮಳೆರಾಯನ ಆರ್ಭಟ ಜೋರಾಗಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ರಾಜ್ಯ ರಾಜ್ಯಧಾನಿಯಲ್ಲಿ ಇಂದು (ಜೂನ್ 16) ಬೆಳಗ್ಗೆಯಿಂದಲೂ ಮೋಡ ಕವಿದ ವಾತಾವರಣದ ಜೊತೆಗೆ ಬಿಸಿಲಿನ ವಾತಾವರಣ ಇರಲಿದ್ದು, ಸಂಜೆ ವೇಳೆಗೆ ನಗರದಲ್ಲಿ ಮಳೆರಾಯ ಅಬ್ಬರಿಸಲಿದ್ದಾರೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೇ, ಇನ್ನು ಕೆಲವೇ ಕ್ಷಣಗಳಲ್ಲಿ ಬೆಂಗಳೂರು ಸೇರಿದಂತೆ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆ ಸುರಿಯಲಿದೆ ಅಂತಲೂ ತಿಳಿಸಿದೆ.

ಈಗಾಗಲೇ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಚಾಮರಾಜನಗರ, ಕೊಡಗು, ಮೈಸೂರು, ಮಂಡ್ಯ, ಬಾಗಲಕೋಟೆ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆರಾಯ ಅವಾಂತರಗಳನ್ನೇ ಸೃಷ್ಟಿಸಿದ್ದಾನೆ.
ಅದರಲ್ಲೂ ಇಂದು (ಜೂನ್ 16) ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಅಲ್ಲದೆ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬರುಗಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಮಂಡ್ಯ, ಕೋಲಾರ, ಮೈಸೂರು, ಶಿವಮೊಗ್ಗ ಜಿಲ್ಲಗಳಲ್ಲಿ ಸಾಧಾರಣ ಮಳಯಾಗಲಿದೆ ಎಂದು ತಿಳಿಸಿದೆ.












Click it and Unblock the Notifications