Karnataka Rains: ಕೆಲವೇ ಕ್ಷಣಗಳಲ್ಲಿ ಸುನಾಮಿ ಮಳೆ ಮುನ್ಸೂಚನೆ- ಈ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ
Karnataka Rains: ರಾಜ್ಯದ ಹಲವು ಜಿಲ್ಲೆಗಳಲ್ಲಿ ವರುಣಾರ್ಭಟ ಮುಂದುವರೆದಿದ್ದು, ಪರಿಣಾಮ ಅವಾಂತರಗಳೇ ಸೃಷ್ಟಿಯಾಗಿವೆ. ಹಾಗೆಯೇ ಮುಂದಿನ 24 ಗಂಟೆಗಳಲ್ಲಿ ಬಿರುಗಾಳಿ ಸಹಿ ಭಾರೀ ಮಳೆ ಮುಂದುವರೆಯುವ ಮುನ್ಸೂಚನೆ ಹಿನ್ನೆಲೆ ಈ ಜಿಲ್ಲೆಗಳಿಗೆ ಮುಂಜಾಗ್ರತಾ ಕ್ರಮವಾಗಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಹಾಗಾದರೆ ಎಲ್ಲೆಲ್ಲಿ ಮಳೆರಾಯ ಅಬ್ಬರಿಸಲಿದ್ದಾನೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬಿಡುವು ನೀಡಿ ಮಳೆರಾಯ ಅಬ್ಬರಿಸಿ ಬೊಬ್ಬರೆಯುತ್ತಿದ್ದಾರೆ. ಹಾಗೆಯೇ ಇನ್ನೂ ಕೆಲವೇ ಕ್ಷಣಗಳಲ್ಲಿ ನಗರದಲ್ಲಿ ಭಾರೀ ಮಳೆ ಸುರಿಯಲಿದೆ ಎನ್ನುವ ಮುನ್ಸೂಚನೆ ಇದೆ. ಇದರ ನಡುವೆಯೇ ಇನ್ನೂ ಕೆಲವು ಜಿಲ್ಲೆಗಳಲ್ಲಿ ಸುನಾಮಿಯಂತಹ ಮಳೆಯಾಗುವ ಮುನ್ಸೂಚನೆಯನ್ನೂ ನೀಡಿದೆ.

ಮುಂದಿನ 24 ಗಂಟೆಗಳಲ್ಲಿ ಮಳೆ ಮತ್ತಷ್ಟು ಬಿರುಸು ಪಡೆಯಲಿರುವ ಹಿನ್ನೆಲೆ ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಈಗಾಗಲೇ ಈ ಭಾಗದಲ್ಲಿ ಭಾರೀ ಮಳೆಯಿಂದ ಪ್ರವಾಹದಂತಹ ವಾತಾವರಣ ನಿರ್ಮಾಣವಾಗಿದ್ದು, ಮನೆ-ಮಠಗಳು ಮಳೆ ನೀರಲ್ಲಿ ಕೊಚ್ಚಿಹೋಗಿರುವ ಘಟನೆಗಳು ನಡೆದಿವೆ. ಇನ್ನೂ ಮಳೆ ಮತ್ತಷ್ಟು ಚುರುಕು ಪಡೆಯಲಿರುವ ಹಿನ್ನೆಲೆ ಈ ಭಾಗಕ್ಕೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ದಕ್ಷಿಣ ಕನ್ನಡ, ಉಡುಪಿ, ಮಂಗಳೂರು, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುವ ಮುನ್ಸೂಚನೆ ಇದ್ದು, ಮುಂಜಾಗ್ರತಾ ಕ್ರಮವಾಗಿ ಈ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಅಲ್ಲದೆ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಹಾಗೆಯೇ ಜುಲೈ 8 ರಿಂದ 12ರವರೆಗೂ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ. ಹಾಗೂ ಇಂದು ರಾತ್ರಿ ವೇಳೆಗೆ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಅತಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
08.07.24 ರಂತೆ #ಪ್ರವಾಹ #ಎಚ್ಚರಿಕೆ: ಇಂದು ಕರಾವಳಿ ಜಿಲ್ಲೆಗಳಲ್ಲಿ ಅತ್ಯಧಿಕ ಮಳೆ- #ರೆಡ್ಅಲರ್ಟ್ ಘೋಷಣೆ ಹಾಗೂ ಜುಲೈ 08 ಮತ್ತು 12 ರಂದು ಕರಾವಳಿ ಜಿಲ್ಲೆಗಳಲ್ಲಿ ಮತ್ತು ಇಂದು ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಅತಿ ಭಾರಿ ಮಳೆಯಾಗುವ ಸಾಧ್ಯತೆಯಿಂದಾಗಿ, ಮುಂದಿನ 24 ಗಂಟೆಗಳ ಕಾಲ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, pic.twitter.com/nFsyykt6tZ
— Karnataka State Natural Disaster Monitoring Centre (@KarnatakaSNDMC) July 8, 2024
ಈಗಾಗಲೇ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಬೆಳಗಾವಿ ಸೇರಿದಂತೆ ಹಲವೆಡೆ ಮಳೆರಾಯ ಅಬ್ಬರಿಸಿ ಬೊಬ್ಬೆರೆದು ಅವಾಂತರಗಳನ್ನೇ ಸೃಷ್ಟಿಸಿದ್ದಾನೆ. ಹಾಗೆಯೇ ಈ ಭಾಗಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇನ್ನು ದಾವಣಗೆರೆ, ತುಮಕೂರು, ಧಾರವಾಡ, ಹಾಸನ, ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಸೇರಿದಂತೆ ಹಲವೆಡೆ ಸಾಧಾರಣ ಮಳೆ ಸುರಿಯಲಿದೆ ಎಂದು ಮುನ್ಸೂಚನೆ ನೀಡಿದೆ.












Click it and Unblock the Notifications