Karnataka Rains: ಇನ್ನೂ ಕೆಲವೇ ಕ್ಷಣಗಳಲ್ಲಿ ಸುನಾಮಿ ಮಳೆ ಮುನ್ಸೂಚನೆ- ರಾಜ್ಯದ ಈ ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಣೆ

Karnataka Rains: ರಾಜ್ಯದಲ್ಲಿ ಮುಂಗಾರು ಮತ್ತೆ ಚುರುಕು ಪಡದಿದ್ದು, ಈಗಾಗಲೇ ಹಲವೆಡೆ ಅವಾಂತರಗಳೇ ಸೃಷ್ಟಿಯಾಗಿವೆ. ಹಾಗೆಯೇ ಇಂದು (ಜೂನ್‌ 22) ಗುಡುಗು ಸಹಿತ ಭಾರೀ ಮಳೆ ಹಿನ್ನೆಲೆ ಹವಾಮಾನ ಇಲಾಖೆ ಕೆಲವು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಣೆ ಮಾಡಿದರೆ, ಇನ್ನು ಕಲವೆಡೆ ಯೆಲ್ಲೋ ಅಲರ್ಟ್‌ ‍‍ಷೋಷಣೆ ಮಾಡಲಾಗಿದೆ ಎಂದು ತಿಳಿಸಿದೆ. ಹಾಗಾದರೆ ಎಲ್ಲೆಲ್ಲಿ ಅಬ್ಬರದ ಮಳೆ ಸುರಿಯಲಿದೆ ಎಂದು ಇಲ್ಲಿ ತಿಳಿಯಿರಿ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ವೇಳೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಹಾಗೆಯೇ ಹಲವು ಜಿಲ್ಲೆಗಳಲ್ಲಿ ಇನ್ನೂ ಕೆಲವೇ ಕ್ಷಣಗಳಲ್ಲಿ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Karnataka Rains Heavy rainfall forecast in few moments red alert for these districts on June 22

ಗುಡುಗು ಸಹಿತ ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ ಹವಾಮಾನ ಇಲಾಖೆಯು ಮೂರು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌, 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಿದೆ. ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ರೆಡ್‌ ಅಲರ್ಟ್, ಬೆಳಗಾವಿ, ಧಾರವಾಡ, ಹಾವೇರಿ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ಈ ಜಿಲ್ಲೆಗಳಲ್ಲಿ ಗಾಳಿಯ ವೇಗ ಗಂಟೆಗೆ 30-40 ಕಿಲೋ ಮೀಟರ್‌ ವೇಗದಲ್ಲಿ ಬೀಸುವ ಸಾಧ್ಯತೆಯಿದ್ದು, ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಬೀಳುವ ನಿರೀಕ್ಷೆಯಿದೆ ಎನ್ನುವ ಮುನ್ಸೂಚನೆ ಇದೆ.

ಕರಾವಳಿ ಭಾಗದಲ್ಲಿ ಗಾಳಿಯ ವೇಗವು ಗಂಟೆಗೆ 35ರಿಂದ 55 ಕಿಲೋ ಮೀಟರ್‌ವರೆಗೂ ಬೀಸುವ ಸಾಧ್ಯತೆಯಿದೆ. ಈ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಮೀನುಗಾರರಿಗೆ ಸಮುದ್ರಕ್ಕೆ ಇಳಿಯುವಾಗ ಎಚ್ಚರಿಕೆ ವಹಿಸಬೇಕು ಅಂತಲೂ ಸೂಚಿಸಿದೆ.

ಭಾನುವಾರ (23) ಕೂಡ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ರೆಡ್‌ ಅಲರ್ಟ್ ಘೋಷಣೆ ಮಾಡಲಾಗಿದೆ. ಇನ್ನು ಮತ್ತೊಂದೆಡೆ ಜೂನ್‌ 25ರವರೆಗೂ ಒಳನಾಡಿದ ಕರಾವಳಿ ಹಾಗೂ ಅಕ್ಕಪಕ್ಕದ ಜಿಲ್ಲೆಗಳಲ್ಲಿ ಧಾರಕಾರ ಮಳೆ ಮುಂದುವರೆಯುವ ಸಾಧ್ಯತೆಯಿದೆ ಅಂತಲೂ ತಿಳಿಸಿದೆ.

ಜೂನ್‌ ಮೊದಲಿನಿಂದ ರಾಜ್ಯದಲ್ಲಿ ಮಳೆರಾಯನ ಆರ್ಭಟ ಮುಂದುವರೆದಿತ್ತು. ಆದರೆ ಮೂರನೇ ವಾರದ ವೇಳೆಗೆ ಬಹುತೇಕ ಜಿಲ್ಲೆಗಳಲ್ಲಿ ಮಳೆರಾಯನ ಆರ್ಭಟ ತಗ್ಗಿದ್ದು, ಬಿಸಿಲಿನ ವಾತಾವರಣ ಮುಂದುವರೆದಿದೆ. ಇದರ ನಡುವೆಯೂ ಇಂದು ಇನ್ನೂ ಕೆಲವೇ ಕ್ಷಣಗಳಲ್ಲಿ ಹಲವೆಡೆ ಮಳೆ ಆರ್ಭಟಿಸಲಿದೆ ಎನ್ನುವ ಮುನ್ಸೂಚನೆ ಇದೆ.

ಒಟ್ಟಿನಲ್ಲಿ ಜೂನ್‌ ಆರಂಭದಲ್ಲಿ ಸುರಿದ ಮಳೆಯಿಂದಾಗಿ ಬತ್ತಿಹೋಗುವ ಹಂತ ತಲುಪಿದ್ದ ರಾಜ್ಯದ ಪ್ರಮುಖ ಜಲಾಶತಗಳಿಗೆ ಮತ್ತೆ ಜೀವಕಳೆ ಬಂದಂತಾಗಿದೆ. ಅಲ್ಲದೆ, ಇನ್ನೂ ಕೆಲವೆಡೆ ಕೆರೆ-ಕಟ್ಟೆಗಳು ಉಕ್ಕಿ ಹರಿದು ಅವಾಂತರಗಳೇ ಸೃಷ್ಟಿಯಾದ ಘಟನೆಗಳು ನಡೆದಿವೆ.

ಈಗಾಗಲೇ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ದಾವಣಗೆರೆ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆ ಸೇರಿದಂತೆ ಹಲವೆಡೆ ಭಾರೀ ಮಳೆ ಸುರಿದ್ದು, ಒಂದೆಡೆ ಇದರಿಂದ ಅವಾಂತರಗಳು ಸೃಷ್ಟಿಯಾದರೆ, ಮತ್ತೊಂದೆಡೆ ಅನ್ನದಾತರ ಮುಖದಲ್ಲಿ ಮಂದಹಾಸ ಮೂಡಿದಂತಾಗಿದೆ.

ಒಟ್ಟಿನಲ್ಲಿ ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರಣ ಮತ್ತೆ ಮಳೆರಾಯನ ಆರ್ಭಟ ಜೋರಾದರೆ, ಜಲಾಶಯಗಳಿಗೆ ಹೆಚ್ಚೆಚ್ಚು ನೀರು ಹರಿದುಬರಲಿದ್ದು, ಇದರಿಂದ ರೈತರ ಮುಖದಲ್ಲಿ ಮಂದಹಾಸ ಮತ್ತಷ್ಟು ಹೆಚ್ಚಾಗುವುದರಲ್ಲಿ ಯಾವುದೇ ಅನುಮಾನವಿಲ್ಲ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+