Karnataka Rains: ರಾಜ್ಯದ ಹಲವು ಜಿಲ್ಲೆಗಳಲ್ಲಿ ಒಂದು ವಾರ ಮಳೆ ಮುನ್ಸೂಚನೆ
Karnataka Rains: ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಳೆದ ಒಂದು ವಾರದಿಂದ ಮಳೆರಾಯ ಆರ್ಭಟಸುತ್ತಿದ್ದಾನೆ. ಹಾಗೆಯೇ ಮುಂದಿನ ಒಂದು ವಾರ ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಹಲವೆಡೆ ಗುಡುಗು, ಮಿಂಚು ಸಹಿತ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ ಎಲ್ಲೆಲ್ಲಿ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು (ಏಪ್ರಿಲ್ 14) ಬೆಳಗ್ಗೆ 7 ಗಂಟೆಯಿಂದಲೇ ಬಿಸಿಲಿನ ವಾತಾವರಣ ಮುಂದುವರೆದಿದೆ. ಸಂಜೆ ಅಥವಾ ರಾತ್ರಿ ವೇಳೆಗೆ ಮೋಡ ಕವಿದ ವಾತಾವರಣ ಇರಲಿದ್ದು, ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎನ್ನುವ ಮುನ್ಸೂಚನೆ ಇದೆ. ಈಗಾಗಲೇ ನಿನ್ನೆ ರಾತ್ರಿ ನಗರದ ಹಲವೆಡೆ ಗುಡುಗು, ಮಿಂಚು ಇದ್ದು, ತುಂತುರು ಮಳೆಯಾಗಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮ ಮುಂದಿನ ಒಂದು ವಾರ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎನ್ನುವ ಮುನ್ಸೂಚನೆ ಇದೆ. ಕೆಲವು ಭಾಗಗಳಲ್ಲಿ ಗಂಟೆಗೆ 40-50 ಕಿಲೋ ಮೀಟರ್ ವೇಗದಲ್ಲಿ ಗಾಳಿ ಜೊತೆ ಮಳೆಯಾಗುವ ಸಾಧ್ಯತೆಯಿದೆ ಅಂತಲೂ ಎಚ್ಚರಿಕೆ ಸಂದೇಶ ರವಾನಿಸಿದೆ.
ಮುಂದಿನ ಒಂದು ವಾರ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಧಾರವಾಡ, ಗದಗ, ಹಾವೇರಿ, ತುಮಕೂರು, ಚಿತ್ರದುರ್ಗ, ಕೋಲಾರ, ತುಮಕೂರು, ಬೆಳಗಾವಿ, ಚಾಮರಾಜನಗರ, ಹಾಸನ, ಮೈಸೂರು, ಮಂಡ್ಯ, ಶಿವಮೊಗ್ಗ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ರಾಯಚೂರು, ಕೊಪ್ಪಳ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಇಂದು (ಏಪ್ರಿಲ್ 14) ಗರಿಷ್ಠ ತಾಪಮಾನ 33, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆಯಿದೆ. ಇನ್ನು ಕಲಬುರಗಿ, ರಾಯಚೂರಿನಲ್ಲಿ ಗರಿಷ್ಠ ತಾಪಮಾನ 39 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಸೃಷ್ಟಿಯಾಗಿರುವ ಹಿನ್ನೆಲೆ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ. ಮುಂಗಾರು ಪೂರ್ವ ಮಳೆ ಜೋರಾಗಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯಾದ್ಯಂತ ಪೂರ್ವಮುಂಗಾರು ಮಳೆ ಅಬ್ಬರ ಜೋರಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಅಬ್ಬರಿಸುತ್ತುದೆ. ಗುಡುಗು ಸಹಿತ ಭಾರೀ ಮಳೆಗೆಯಾಗಿ ಕೆಲವೆಡೆ ಬೆಳೆ ಹಾನಿಯಾದ ಘಟನೆಗಳು ಕೂಡ ನಡೆದಿವೆ.
ಈಗಾಗಲೇ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ರಣಬಿಸಿಲಿನಿಂದ ಜನರು ಬೇಸತ್ತು ಹೋಗಿದ್ದಾರೆ. ಈ ನಡುವೆಯೇ ಮಳೆಯಾಗಲಿದೆ ಎಂದು ಮುನ್ಸೂಚನೆ ಇರುವುದರಿಂದ ಜನರು ತುಸು ನೆಮ್ಮದಿಯಿಂದ ಇರುವಂತಾಗಿದೆ. ಈಗಾಗಲೇ ಹಲವೆಡೆ ಮಳೆಯಾಗಿದ್ದು, ಬಿಸಿಲಿನ ಬೇಗೆಯಿಂದ ಬೆಂದಿದ್ದ ಜನರಿಗೆ ತಂಪೆರೆದಂತಾಗುದೆ. ಹಾಗೆಯೇ ಕೆಲವೇ ತಿಂಗಳುಗಳಲ್ಲಿ ರಾಜ್ಯಕ್ಕೆ ಮುಂಗಾರು ಮಳೆ ಎಂಟ್ರಿ ಕೊಡಲಿದೆ ಎನ್ನುವ ಮುನ್ಸೂಚನೆ ಕೂಡ ಇದೆ. ಈಗಾಗಲೇ ಕಳೆದ ಬಾರಿಯಂತೆ ಈ ಬಾರಿ ಕೂಡ ಜೂನ್ ಆರಂಭದಲ್ಲೇ ಮುಂಗಾರು ಎಂಟ್ರಿ ಕೊಡುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.












Click it and Unblock the Notifications