Karnataka Rains: ಮುಂದಿನ ಮೂರು ಗಂಟೆಗಳಲ್ಲಿ ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ

Karnataka Rains: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇದೀಗ ರಣಬಿಸಿಲು ಮುಂದುವರೆದಿದೆ. ಈ ನಡುವೆಯೂ ಹಲವೆಡೆ ಮಳೆಯಾಗುತ್ತಿದೆ. ಹಾಗೆಯೇ ಇಂದು (ಏಪ್ರಿಲ್‌ 11) ಮುಂದಿನ ಮೂರು ಗಂಟೆಗಳಲ್ಲಿ ಈ ಭಾಗಗಳಲ್ಲಿ ಗುಡುಗು ಸಹಿತ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶವನ್ನು ರವಾನಿಸಿದೆ. ಹಾಗಾದ್ರೆ ಎಲ್ಲೆಲ್ಲಿ ಎಂದು ಇಲ್ಲಿ ತಿಳಿಯಿರಿ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು ಬೆಳಗ್ಗೆಯಿಂದಲೂ ಇಲ್ಲಿಯವರೆಗೂ ಬಿಸಿಲಿನ ವಾತಾವರಣವೇ ಮುಂದುವರೆದಿದೆ. ಸಂಜೆ ಅಥವಾ ರಾತ್ರಿ ವೇಳೆಗೆ ನಗರದಲ್ಲಿ ರಣಭೀಕರ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ. ನಿನ್ನೆ ಅಂದರೆ ಗುರುವಾರ ರಾತ್ರಿ ಹಲವೆಡೆ ತುಂತುರು ಮಳೆ ಬಿದ್ದಿರುವ ಬಗ್ಗೆ ವರದಿಯಾಗಿದೆ.

Karnataka Rains Heavy Rainfall Forecast in Many Districts in Next Three Hours including Bengaluru

ಮುಂದಿನ 3 ಗಂಟೆಗಳಲ್ಲಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೆಳಗಾವಿ, ಚಾಮರಾಜನಗರ, ಚಿತ್ರದುರ್ಗ, ಧಾರವಾಡ, ಗದಗ, ಹಾಸನ, ಕೋಲಾರ, ಮೈಸೂರು, ರಾಮನಗರ, ತುಮಕೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕಾರವಾರ, ಉಡುಪಿ, ಮಗಳೂರು, ಚಿಕ್ಕಮಗಳೂರು, ಬಳ್ಳಾರಿ, ಶಿವಮೊಗ್ಗ, ಬಾಗಲಕೋಟೆ ಜಿಲ್ಲೆಗಳಲ್ಲೂ ಸಹ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ತಿಳಿಸಿದೆ. ಉಳಿದ ಜಿಲ್ಲೆಗಳಿಗೆ ಯಾವುದೇ ಮಳೆ ಮುನ್ಸೂಚನೆ ಇರುವುದಿಲ್ಲ ಅಂತಲೂ ತಿಳಿಸಿದೆ.

ಈಗಾಗಲೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆ ಆರ್ಭಟದಿಂದ ಅವಾಂತರಗಳೇ ಸೃಷ್ಟಿಯಾಗಿವೆ. ಮತ್ತೊಂದೆಡೆ ನೋಡೋದಾದ್ರೆ ಇಷ್ಟು ದಿನ ಬಿಸಿಲಿನ ಬೇಗೆಗೆ ಬೇಸತ್ತಿದ್ದ ಜನರಿಗೆ ತಂಪೆರೆದಂತಾಗಿದೆ.

ದಕ್ಷಿಣ ಒಳನಾಡು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಕರಾವಳಿ ಕರ್ನಾಟಕದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಬಿರುಗಾಳಿಯೊಂದಿಗೆ (ಗಂಟೆಗೆ 30-40 ಕಿ.ಮೀ) ಹಗುರ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕದ ಉತ್ತರ ಒಳನಾಡು ಭಾಗದಲ್ಲಿ ಬೆಳಗಾವಿ, ಧಾರವಾಡ, ಹಾವೇರಿ ಮತ್ತು ಗದಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಬಿರುಗಾಳಿಯೊಂದಿಗೆ (ಗಂಟೆಗೆ 40-50 ಕಿ ಮೀ) ಹಗುರ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯುವ ಸಾಧ್ಯತೆ ಇದೆ. ದಕ್ಷಿಣ ಒಳನಾಡು ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳ ಕೆಲವು ಕಡೆಗಳಲ್ಲಿ ಬಿರುಗಾಳಿಯೊಂದಿಗೆ (ಗಂಟೆಗೆ 40-50 ಕಿ.ಮೀ) ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+